ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಿ: ಚೀನಾಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮನವಿ

Date:

ಭಾರತ ಹಾಗೂ ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾದ ನಂತರ ಚೀನಾ ಕಡೆ ಮುಖ ಮಾಡಿರುವ ದ್ವೀಪ ರಾಷ್ಟ್ರ ಹೆಚ್ಚಿನ ಪ್ರವಾಸಿಗರನ್ನು ಕಳುಹಿಸಲು ನೆರೆಯ ದೇಶಕ್ಕೆ ಮನವಿ ಮಾಡಿದೆ.

ಚೀನಾಕ್ಕೆ ತನ್ನ ಐದು ದಿನಗಳ ರಾಜ್ಯ ಭೇಟಿಯ ಎರಡನೇ ದಿನದಂದು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು, ಮಂಗಳವಾರ ಫುಜಿಯಾನ್ ಪ್ರಾಂತ್ಯದಲ್ಲಿ ಮಾಡಿದ ಭಾಷಣದಲ್ಲಿ ಚೀನಾವನ್ನು ದ್ವೀಪ ರಾಷ್ಟ್ರದ ‘ಹತ್ತಿರದ’ ಮಿತ್ರ ಎಂದು ಕರೆದರು.

ಚೀನಾ ನಮ್ಮ ನಿಕಟ ಮಿತ್ರರಾಷ್ಟ್ರಗಳಲ್ಲಿ ಒಂದಾಗಿದೆ ಮತ್ತು ಅಭಿವೃದ್ಧಿ ಪಾಲುದಾರರಲ್ಲಿ ಒಂದಾಗಿದೆ’ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2014 ರಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಪ್ರಾರಂಭಿಸಿದ ಬಿಆರ್‌ಐ ಯೋಜನೆಗಳನ್ನು ಮೊಹಮ್ಮದ್ ಮುಯಿಝು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಮಾಲ್ಡೀವ್ಸ್‌ಗೆ ತನ್ನ ಪ್ರವಾಸಿಗರ ಹರಿವನ್ನು ಹೆಚ್ಚಿಸಲು ಅವರು ಚೀನಾವನ್ನು ಮೊಹಮ್ಮದ್ ಮುಯಿಝು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಡುದ್ವೇಷದ ಕತ್ತಲ ಯುಗದಲ್ಲಿ ಬೆಳ್ಳಂಬೆಳಕಿನ ತೀರ್ಪು

ಅಲ್ಲದೆ, ಹಿಂದೂ ಮಹಾಸಾಗರದ ದ್ವೀಪದಲ್ಲಿ ಸಮಗ್ರ ಪ್ರವಾಸೋದ್ಯಮ ವಲಯವನ್ನು ಅಭಿವೃದ್ಧಿಪಡಿಸಲು ಉಭಯ ದೇಶಗಳು 50 ಮಿಲಿಯನ್ ಡಾಲರ್‌ ಯೋಜನೆಗೆ ಸಹಿ ಹಾಕಿವೆ ಎಂದು ಮಾಲ್ಡೀವಿಯನ್ ಮಾಧ್ಯಮ ವರದಿ ಮಾಡಿದೆ.

ಪ್ರಧಾನಿ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಸಂದರ್ಭದಲ್ಲಿ ಮಾಲ್ಡೀವ್ಸ್‌ನ ಕೆಲವು ಮಂತ್ರಿಗಳು ವಿವಾದಾತ್ಮಕ  ಪೋಸ್ಟ್ ಮಾಡಿದ ನಂತರ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಯಿತು. ಈ ನಡುವೆಯೆ  ಹೆಚ್ಚಿನ ಚೀನೀ ಪ್ರವಾಸಿಗರಿಗೆ ಮುಯಿಝು ಮನವಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ ತನ್ನ ಸರ್ಕಾರದ  ಮೂವರು ಉಪ ಮಂತ್ರಿಗಳನ್ನು ಅಮಾನತುಗೊಳಿಸಿದೆ.

2023 ರಲ್ಲಿ, ಮಾಲ್ಡೀವ್ಸ್‌ಗೆ ಭಾರತದಿಂದ 209,198  ಪ್ರವಾಸಿಗರು ಆಗಮಿಸಿ ಹೆಚ್ಚು ಭೇಟಿ ನೀಡಿದ ಮೊದಲ ರಾಷ್ಟ್ರವಾಗಿದೆ. 206,146 ಪ್ರವಾಸಿಗರೊಂದಿಗೆ ರಷ್ಯಾ ಎರಡನೇ ಸ್ಥಾನದಲ್ಲಿದ್ದರೆ, 187,118 ಕ್ಕೂ ಹೆಚ್ಚು ಪ್ರವಾಸಿಗರ ಆಗಮನದೊಂದಿಗೆ ಬ್ರಿಟನ್ ಮೂರನೇ ಸ್ಥಾನದಲ್ಲಿದೆ.

ಕೋವಿಡ್‌ಗಿಂತ ಮೊದಲು, ಮಾಲ್ಡೀವ್ಸ್‌ಗೆ ಚೀನಾದಿಂದ 2.80 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು. ಆದರೆ ಸುಮಾರು ನಾಲ್ಕು ವರ್ಷಗಳ ಲಾಕ್‌ಡೌನ್ ನೀತಿ ಮತ್ತು ನಿಧಾನಗತಿಯ ಆರ್ಥಿಕತೆಯಿಂದ ತನ್ನ ದೇಶೀಯ ಮತ್ತು ವಿದೇಶಿ ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸಲು ನೆರೆಯ ದೇಶ ಹೆಣಗಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...