ರಷ್ಯಾ | 7.0 ತೀವ್ರತೆಯ ಭೂಕಂಪದ ನಂತರ ಜ್ವಾಲಾಮುಖಿ ಸ್ಫೋಟ

Date:

ಪೂರ್ವ ರಷ್ಯಾದ ಕರಾವಳಿಯಲ್ಲಿ 7.0 ತೀವ್ರತೆಯ ಭೂಕಂಪದ ನಂತರ ಶಿವೇಲುಚ್ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಜ್ವಾಲಾಮುಖಿಯು ಲಾವಾವನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದ ಬಳಿಕ ಸಮುದ್ರ ಮಟ್ಟದಿಂದ 8 ಕಿಲೋಮೀಟರ್‌ಗಳಷ್ಟು ಎತ್ತರಕ್ಕೆ ಬೂದಿ ಹಾರಿದೆ. ಯಾವುದೇ ಪ್ರಾಣಾಪಾಯ, ಸಾವು ನೋವುಗಳ ವರದಿಯಾಗಿಲ್ಲ.

ಪೆಟ್ರೋಪಾವ್ಲೋವ್ಸ್ಕ್-ಕಮ್ಚಾಟ್‌ಸ್ಕಿಯಿಂದ ಸುಮಾರು 280 ಮೈಲುಗಳಷ್ಟು ದೂರದಲ್ಲಿ ಶಿವೇಲುಚ್ ಪರ್ವತವಿದ್ದು ಅಲ್ಲಿ ಈ ಜ್ವಾಲಾಮುಖಿ ಕಾಣಿಸಿಕೊಂಡಿದೆ. ಈ ಪ್ರದೇಶ ರಷ್ಯಾದ ಕಮ್ಚಟ್ಕಾದಲ್ಲಿರುವ ಸುಮಾರು 181,000 ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ನಗರವಾಗಿದೆ.

ಇದನ್ನು ಓದಿದ್ದೀರಾ? 2025ಕ್ಕೆ ವಿನಾಶಕಾರಿ ಪ್ರಳಯವಾಗುತ್ತಾ?; ಬಾಬಾಗಳು ಮತ್ತು ವದಂತಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೂಕಂಪದ ಕೇಂದ್ರಬಿಂದುವು ಪೆಟ್ರೋಪಾವ್ಲೋವ್ಸ್ಕ್-ಕಮ್ಚಾಟ್‌ಸ್ಕಿಯಿಂದ ಸುಮಾರು 55 ಮೈಲುಗಳಷ್ಟು ದೂರದಲ್ಲಿದೆ. ಸುಮಾರು 30 ಮೈಲುಗಳಷ್ಟು ಆಳವನ್ನು ಹೊಂದಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ಹೇಳಿದೆ.

ಭೂಕಂಪವು ಅಧಿಕ ಹಾನಿಯನ್ನು ಉಂಟು ಮಾಡಿಲ್ಲ. ಆದರೆ ಕಟ್ಟಡಗಳು, ಕೆಲವು ಮೂಲಭೂತ ಸೌಕರ್ಯಗಳಿಗೆ ಹಾನಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭೂಕಂಪನ ಕಾಣಿಸಿಕೊಂಡ ಬಳಿಕ ಈವರೆಗೂ ರಷ್ಯಾದ ತುರ್ತು ಸಚಿವಾಲಯವು ಸುನಾಮಿ ಎಚ್ಚರಿಕೆಯನ್ನು ನೀಡಿಲ್ಲ.

ಆದರೆ ಯುಎಸ್ ಸುನಾಮಿ ಎಚ್ಚರಿಕೆ ನೀಡುವ ಸಂಸ್ಥೆಯು, “ಈ ಭೂಕಂಪದಿಂದ ಅಪಾಯಕಾರಿ ಸುನಾಮಿ ಅಲೆಗಳು ರಷ್ಯಾದ ಕರಾವಳಿಯಾದ್ಯಂತ ಕೇಂದ್ರಬಿಂದುವಿನಿಂದ 300 ಕಿಮೀ (ಅಂದಾಜು 186 ಮೈಲುಗಳು) ಒಳಗೆ ಬರುವ ಸಾಧ್ಯತೆಯಿದೆ” ಎಂದು ಎಚ್ಚರಿಕೆ ನೀಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...