ಬೆಲೆ ಏರಿಕೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟ ಮುಷ್ಕರ

Date:

ಹಿಟ್ಟಿನ ಬೆಲೆಗಳ ಏರಿಕೆ, ವಿದ್ಯುತ್‌ ದರ ಏರಿಕೆ ಹಾಗೂ ತೆರಿಗೆ ಹೆಚ್ಚಳ ವಿರೋಧಿಸಿ ಪಾಕ್‌ ಆಕ್ರಮಿತ ಕಾಶ್ಮೀರ ದಲ್ಲಿ ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಉದ್ವಿಗ್ನ ಪರಿಸ್ಥಿತಿ ಇನ್ನು ಮುಂದುವರಿದಿದೆ. ಭದ್ರತಾ ಪಡೆ ಹಾಗೂ ಪ್ರತಿಭಟನಾಕಾರರ ನಡುವೆ ನಡೆಯುತ್ತಿರುವ ಸಂಘರ್ಷವನ್ನು ತಡೆಯಲು ಪಾಕ್‌ ಸರ್ಕಾರ ನಿರಂತರ ಪ್ರಯತ್ನ ನಡೆಸುತ್ತಿದೆ.

ಕಳೆದ ಶನಿವಾರ ಪ್ರತಿಭಟನಾ ನಿರತರು ಹಾಗೂ ಪೊಲೀಸರ ನಡುವೆ ಸಂಘರ್ಷ ಆರಂಭಗೊಂಡಿದ್ದು, ಒರ್ವ ಪೊಲೀಸ್‌ ಅಧಿಕಾರಿ ಮೃತಪಟ್ಟು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಬಹುತೇಕರು ಪೊಲೀಸರೆ ಇದ್ದಾರೆ. ಪ್ರತಿಭಟನೆಯಿಂದಾಗಿ ಸಾರ್ವಜನಿಕರ ಜೀವನ ನಿರ್ವಹಣೆ ಕೂಡ ಕಷ್ಟಕರವಾಗಿದೆ.

ಪರಿಸ್ಥಿತಿ ಹದಗೆಡುತ್ತಿರುವ ಕಾರಣ ಸಂಘರ್ಷವನ್ನು ತಡೆಯಲು ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಉನ್ನತಮಟ್ಟದ ಸಭೆ ಹಮ್ಮಿಕೊಳ್ಳುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಲೆಗಳ ಏರಿಕೆ, ವಿದ್ಯುತ್‌ ದರ ಏರಿಕೆ ಹಾಗೂ ತೆರಿಗೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಸಂಘಟನೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕಾರ್ಯಪಡೆ ಮುಂಚೂಣಿಯಲ್ಲಿದೆ. ವಿದ್ಯುತ್‌ ಬೆಲೆ ನಿಯಂತ್ರಣ, ಆಹಾರ ಧಾನ್ಯಗಳಿಗೆ ರಿಯಾಯಿತಿ ಹಾಗೂ ಶ್ರೀಮಂತ ವರ್ಗದವರಿಗೆ ಸವಲತ್ತು ಕಡಿತಗೊಳಿಸುವಂತೆ ಪ್ರಮುಖ ಬೇಡಿಕೆಯಿಟ್ಟಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂರುಗಳಿಗೆ ಬೆಲೆ ಇಲ್ಲ, ಕ್ರಮ ಕೈಗೊಳ್ಳಲ್ಲ, ಆಯೋಗಕ್ಕೆ ಹಲ್ಲೂ ಇಲ್ಲ

ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕಾರ್ಯಪಡೆ ಕರೆದಿದ್ದ ಮುಷ್ಕರದ ಸಂದರ್ಭದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ ಬಳಿಕ ಮಸೀದಿಗಳ ಮೇಲೂ ಕಲ್ಲು ತೂರಾಟ ನಡೆದಿದೆ. ಈ ಸಮಯದಲ್ಲಿ, ಪಿಒಕೆಯ ಸಂಹಾನಿ, ಸೆಹನ್ಸಾ, ಮೀರ್‌ಪುರ್, ರಾವಲ್‌ಕೋಟ್, ಖುಯಿರಟ್ಟಾ, ತಟ್ಟಪಾನಿ, ಹಟ್ಟಿಯಾನ್ ಬಾಲಾದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ.

ಪಾಕ್ ಆಡಳಿತದ ಕಾಶ್ಮೀರ ಸರ್ಕಾರವು ಸಂಪೂರ್ಣ ಪಿಒಕೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಿತ್ತು. ಇದರೊಂದಿಗೆ ಮೇ 10 ಮತ್ತು 11 ರಂದು ಎಲ್ಲ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದಾಗ್ಯೂ, ಏರುತ್ತಿರುವ ವಿದ್ಯುತ್ ಮತ್ತು ಹಿಟ್ಟಿನ ಬೆಲೆಗಳ ವಿರುದ್ಧ ಪಿಒಕೆಯ ಎಲ್ಲ ಜಿಲ್ಲೆಗಳಲ್ಲಿ ಸಾವಿರಾರು ಜನರು ಬೀದಿಗಿಳಿದಿದ್ದಾರೆ.

ಇಲ್ಲಿನ ಜನರು ಹಸಿವಿನಿಂದ ನರಳುತ್ತಿದ್ದಾರೆ. ಆರೋಗ್ಯ ಸೌಲಭ್ಯವಿಲ್ಲ, ಸರ್ಕಾರದ ಯಾವುದೇ ಯೋಜನೆಗಳು ಈ ಭಾಗಕ್ಕೆ ನೀಡುತ್ತಿಲ್ಲ. ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಬೆಲೆ ಏರಿಕೆಯಿಂದ ಇಲ್ಲಿನ ಜನರು ಅಗತ್ಯವಸ್ತುಗಳ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಪ್ರತಿಭಟನಾನಿರತರನ್ನು ಪಾಕಿಸ್ತಾನ ಸೇನೆ ಹಾಗೂ ಪೊಲೀಸ್ ಬಂಧಿಸುತ್ತಿದ್ದಾರೆ ಎಂದು ಸ್ಥಳೀಯ ನಾಯಕರು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...