ದಕ್ಷಿಣ ಆಫ್ರಿಕಾ | ಸೇತುವೆಯಿಂದ ಕಂದಕಕ್ಕೆ ಬಸ್‌ ಬಿದ್ದು 45 ಮಂದಿ ಸಾವು; ಬದುಕುಳಿದ ಏಕೈಕ ಮಗು!

Date:

ಈಸ್ಟರ್ ಹಬ್ಬಕ್ಕೆ ಜನರನ್ನು ಹೊತ್ತು ಸಂಚರಿಸುತ್ತಿದ್ದ ಬಸ್ಸೊಂದು ಭೀಕರ ರಸ್ತೆ ಅಪಘಾತಕ್ಕೊಳಗಾದ ಘಟನೆ ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಗುರುವಾರ ಸಂಭವಿಸಿದೆ.

ಇಲ್ಲಿನ ಮಮಟ್ಲಕಲಾ ಸೇತುವೆಯಿಂದ ಸುಮಾರು 164 ಅಡಿಗಳಷ್ಟು ಆಳದಲ್ಲಿರುವ ಕಂದಕಕ್ಕೆ ಬಸ್ ಉರುಳಿ ಬಿದ್ದಿದೆ. ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, 45 ಜನರು ಮೃತಪಟ್ಟಿದ್ದಾರೆ ಎಂದು ದೇಶದ ಉತ್ತರ ಪ್ರಾಂತ್ಯದ ಲಿಂಪೊಪೊದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬದುಕುಳಿದ ಏಕೈಕ ಮಗು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದಲ್ಲಿ ಬದುಕುಳಿದ 8 ವರ್ಷದ ಮಗು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದೆ. ಈ ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.

ಬೆಂಕಿಯಲ್ಲಿ ಅನೇಕ ದೇಹಗಳು ಗುರುತಿಸಲಾಗದಷ್ಟು ಸುಟ್ಟು ಹೋಗಿದ್ದವು. ಕೆಲವು ಮೃತದೇಹಗಳು ವಾಹನದೊಳಗೆ ಸಿಲುಕಿಕೊಂಡಿದ್ದವು. ಈ ಬಸ್ ನೆರೆಯ ದೇಶವಾದ ಬೋಟ್ಸ್‌ವಾನಾದಿಂದ ಈಸ್ಟರ್ ತೀರ್ಥಯಾತ್ರೆಗೆಂದು ಜನಪ್ರಿಯ ಮೋರಿಯಾ ಪಟ್ಟಣಕ್ಕೆ ಪ್ರಯಾಣಿಸುತ್ತಿತ್ತು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಸಂಬಂಧ ಅಧಿಕಾರಿಗಳು ಮೃತಪಟ್ಟವರ ವಿವರಗಳನ್ನು ಕಲೆ ಹಾಕುತ್ತಿದ್ದು, ಘಟನೆಗೆ ಏನು ಕಾರಣ ಎಂಬುದನ್ನು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿದ ಸಾರಿಗೆ ಸಚಿವ ಸಿಂದಿಸಿವೆ ಚಿಕುಂಗ, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ರಸ್ತೆ ಸುರಕ್ಷತೆ ವಿಚಾರಕ್ಕೆ ಸಂಬಂಧಿಸಿ ದಕ್ಷಿಣ ಆಫ್ರಿಕಾವು ಕಳಪೆ ದಾಖಲೆಯನ್ನು ಹೊಂದಿದೆ ಎಂದು ಬಿಬಿಸಿ ವರದಿ ಮಾಡಿದೆ.

bus 2

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...