ದಕ್ಷಿಣ ಕೊರಿಯಾ | ರನ್‌ವೇನಲ್ಲಿ ಹೊತ್ತಿ ಉರಿದ ವಿಮಾನ, ಮೃತರ ಸಂಖ್ಯೆ 171ಕ್ಕೆ ಏರಿಕೆ

Date:

181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ 171 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಜೆಜು ಏರ್ ಫ್ಲೈಟ್ 2216 ಥೈಲ್ಯಾಂಡ್‌ನಿಂದ ಹಿಂದಿರುಗಿತ್ತು. ವಿಮಾನದಲ್ಲಿದ್ದ 181 ಜನರಲ್ಲಿ 175 ಮಂದಿ ಪ್ರಯಾಣಿಕರು ಮತ್ತು 6 ಮಂದಿ ವಿಮಾನ ಸಿಬ್ಬಂದಿ ಸೇರಿದ್ದಾರೆ. ಲ್ಯಾಂಡಿಂಗ್ ಗೇರ್‌ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲ್ಯಾಂಡಿಂಗ್ ವಿಫಲವಾದ ಬಳಿಕ ವಿಮಾನವು ನಿಲ್ದಾಣದ ತಡೆಗೋಡೆಗೆ ಅಪ್ಪಳಿಸಿದೆ. ಇದರಿಂದ ದೊಡ್ಡ ಸ್ಫೋಟ ಸಂಭವಿಸಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹಕ್ಕಿಗಳಿಗೆ ವಿಮಾನ ಡಿಕ್ಕಿಯಾದ ಪರಿಣಾಮ ಲ್ಯಾಂಡಿಂಗ್ ಗೇರ್ ಸಮಸ್ಯೆಯಾಗಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇದುವರೆಗೆ ಇಬ್ಬರನ್ನು ರಕ್ಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷಮೆ ಯಾಚಿಸಿದ ‘ಜೆಜು ಏರ್’

ದುರಂತದ ಬೆನ್ನಲ್ಲೇ ಜೆಜು ಏರ್ ಸಂಸ್ಥೆ ಕ್ಷಮೆ ಯಾಚಿಸಿದೆ, ಮುಯಾನ್ ವಿಮಾನ ದುರಂತದಲ್ಲಿ ಸಂಕಷ್ಟಕ್ಕೀಡಾದ ಪ್ರತಿಯೊಬ್ಬರಲ್ಲಿಯೂ ಕ್ಷಮೆ ಕೋರುತ್ತೇವೆ. ರಕ್ಷಣಾ ಕಾರ್ಯಾಚರಣೆಗೆ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತಿದ್ದೇವೆ. ದುರ್ಘಟನೆಯ ಬಗ್ಗೆ ವಿಷಾದಿಸುತ್ತೇವೆ ಎಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸಂತ್ರಸ್ತರ ಕುಟುಂಬದವರಿಗೆ ನೆರವಾಗುವ ಸಲುವಾಗಿ, ವಿಮಾನ ನಿಲ್ದಾಣವಿದ್ದ ಜಿಯೊಲ್ಲನಮ್-ಡೊ ಪ್ರಾಂತ್ಯದಲ್ಲಿ ತಾತ್ಕಾಲಿಕವಾಗಿ ವಿಶೇಷ ರೈಲು ಕಾರ್ಯಾಚರಣೆ ಆರಂಭಿಸುವುದಾಗಿ ಕೊರಿಯಾ ರೈಲ್ವೆ ತಿಳಿಸಿದೆ. ಅಲ್ಲದೇ ಮುಯಾನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕ ಶವಾಗಾರವನ್ನು ಸ್ಥಾಪಿಸಲಾಗಿದ್ದು, ಅಲ್ಲಿ 94 ಶವಗಳನ್ನು ಇರಿಸಲಾಗಿದೆ. ಈ ಬಗ್ಗೆ ಯೋನ್‌ಹಾಪ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...