ದಕ್ಷಿಣ ಕೊರಿಯಾ | ಭೀಕರ ವಿಮಾನ ಅಪಘಾತ; ಮೃತರ ಸಂಖ್ಯೆ 177ಕ್ಕೆ ಏರಿಕೆ

Date:

ದಕ್ಷಿಣ ಕೊರಿಯಾದಲ್ಲಿ ಭಾನುವಾರ ನಡೆದ ಅತ್ಯಂತ ಭೀಕರ ವಿಮಾನ ಅಪಘಾತದಲ್ಲಿ ಮೃತರ ಸಂಖ್ಯೆ ಕನಿಷ್ಠ 177ಕ್ಕೆ ಏರಿಕೆಯಾಗಿದೆ. ವಿಮಾನ ಲ್ಯಾಂಡ್ ಆಗುವ ವೇಳೆ ಬೆಂಕಿ ಹೊತ್ತಿ ಈ ಅವಘಡ ಸಂಭವಿಸಿದೆ.

ಜೆಜು ಏರ್ ಫ್ಲೈಟ್ 2216 ಥೈಲ್ಯಾಂಡ್‌ನಿಂದ ಹಿಂದಿರುಗಿತ್ತು. ಥಾಯ್ ರಾಜಧಾನಿ ಬ್ಯಾಂಕಾಕ್‌ನಿಂದ 175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳನ್ನು ಹೊತ್ತು ತಂದಿತ್ತು. ಲ್ಯಾಂಡಿಂಗ್ ಆಗುವ ವೇಳೆ ಪತನಗೊಂಡಿತ್ತು.

ಇದನ್ನು ಓದಿದ್ದೀರಾ? ದಕ್ಷಿಣ ಕೊರಿಯಾ | ರನ್‌ವೇನಲ್ಲಿ ಹೊತ್ತಿ ಉರಿದ ವಿಮಾನ, ಮೃತರ ಸಂಖ್ಯೆ 171ಕ್ಕೆ ಏರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಸಿಬ್ಬಂದಿಗಳ ರಕ್ಷಣೆ ಮಾಡಲಾಗಿದ್ದು, ನಾಪತ್ತೆಯಾಗಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸದ್ಯ ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ವರದಿಯಾಗಿದೆ.

ಇನ್ನು ಸಾರಿಗೆ ಸಚಿವಾಲಯದ ಪ್ರಕಾರ, ದಕ್ಷಿಣ ಕೊರಿಯಾದ ನೆಲದಲ್ಲಿ ಸಂಭವಿಸಿದ ಅತೀ ಮಾರಣಾಂತಿಕ ವಿಮಾನ ಅಪಘಾತ ಇದಾಗಿದೆ. ಸುಮಾರು ಮೂರು ದಶಕಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ಇಂತಹ ಅಪಘಾತ ಸಂಭವಿಸಿಲ್ಲ.

ಇದನ್ನು ಓದಿದ್ದೀರಾ? ದಕ್ಷಿಣ ಕೊರಿಯಾ | ತುರ್ತು ಮಿಲಿಟರಿ ಆದೇಶ ವಾಪಸ್

“ವಿಮಾನದ ಕೊನೆಯ ಭಾಗ ಮಾತ್ರ ಕೊಂಚ ಆಕಾರ ಹೊಂದಿದೆ. ಉಳಿದ ಭಾಗಗಳನ್ನು ಗುರುತಿಸಲು ಅಸಾಧ್ಯವಾದ ಸ್ಥಿತಿಗೆ ತಲುಪಿದೆ. ಇಬ್ಬರನ್ನು ವಿಮಾನದ ಕೊನೆಯ ಭಾಗದಲ್ಲಿ ರಕ್ಷಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮುವಾನ್ ಅಗ್ನಿಶಾಮಕ ಮುಖ್ಯಸ್ಥ ಲೀ ಜಂಗ್-ಹ್ಯುನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಭೀಕರ ವಿಮಾನ ಅಪಘಾತಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ.

ಸಾರಿಗೆ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 1997ರಲ್ಲಿ ಗುವಾಮ್‌ನಲ್ಲಿ ಕೊರಿಯನ್ ಏರ್ ಅಪಘಾತ ಸಂಭವಿಸಿತ್ತು. ಸುಮಾರು 200ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಈ ಅಪಘಾತವು ದಕ್ಷಿಣ ಕೊರಿಯಾದ ವಿಮಾನಯಾನ ಸಂಸ್ಥೆಯ ಇತಿಹಾಸದಲ್ಲೇ ಅತೀ ಭೀಕರ ಅಪಘಾತವಾಗಿದೆ. 2002ರಲ್ಲಿ ಏರ್ ಚೀನಾ ಅಪಘಾತ ಸಂಭವಿಸಿದ್ದು ಇದರಿಂದಾಗಿ 129 ಮಂದಿ ಸಾವನ್ನಪ್ಪಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...