34 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

Date:

ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಶ್ರೀಲಂಕಾ ನೌಕಾಪಡೆಯು ಸುಮಾರು 34 ಭಾರತೀಯ ಮೀನುಗಾರರನ್ನು ಬಂಧಿಸಿದೆ. ಜೊತೆಗೆ ಮೂರು ಟ್ರಾಲರ್‌ಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಜನವರಿ 25 ಮತ್ತು 26ರಂದು ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ.

ಇದನ್ನು ಓದಿದ್ದೀರಾ? ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ: ಒಂಬತ್ತು ಭಾರತೀಯ ಮೀನುಗಾರರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಲಂಕಾಕ್ಕೆ ಸೇರಿದ ಸಮುದ್ರ ಮಾರ್ಗದಲ್ಲಿ ನೌಕಾಪಡೆಯುವ ಅಕ್ರಮವಾಗಿ ಮೀನುಗಾರಿಯನ್ನು ತಡೆಯಲು ನಿರಂತರ ಗಸ್ತು ತಿರುಗುತ್ತಿದೆ. ಈ ಸಂದರ್ಭದಲ್ಲಿ ಈಶಾನ್ಯ ಮನ್ನಾರ್ ಜಿಲ್ಲೆಯ ಕರಾವಳಿಯಲ್ಲಿ ಅಕ್ರಮವಾಗಿ ಮೀನುಗಾರಿ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ತಿಳಿಸಿದೆ. ಇನ್ನು ಬಂಧಿತ ಮೀನುಗಾರರನ್ನು ಮುಂದಿನ ಕ್ರಮಕ್ಕಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಈ ಹಿಂದೆ ಬಂಧಿಸಲಾಗಿದ್ದ ಸುಮಾರು 41 ಭಾರತೀಯ ಮೀನುಗಾರರನ್ನು ಈಗಾಗಲೇ ಸ್ವದೇಶಕ್ಕೆ ವಾಪಸ್ ಕಳುಹಿಸಲಾಗಿದೆ ಎಂದು ಒಂದು ವಾರದ ಹಿಂದೆ ಶ್ರೀಲಂಕಾ ಭಾರತೀಯ ಹೈಕಮಿಷನ್‌ಗೆ ತಿಳಿಸಿದೆ.

ಜನವರಿ 12ರಂದು ಎಂಟು ಭಾರತೀಯ ಮೀನುಗಾರರನ್ನು ಬಂಧಿಸಲಾಯಿತು. ಎರಡು ಮೀನುಗಾರಿಕೆ ಟ್ರಾಲರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಷಹಜಹಾನ್‌ ಪ್ರಕರಣ | ಮೀನುಗಾರಿಕೆ ಸಂಸ್ಥೆ ಮೂಲಕ ಅಕ್ರಮ ಹಣ ವರ್ಗಾವಣೆ; ಇಡಿ ವಿವರ

ಭಾರತ ಮತ್ತು ಶ್ರೀಲಂಕಾ ನಡುವಿನ ಸಂಬಂಧಗಳಲ್ಲಿ ಮೀನುಗಾರರ ವಿಷಯವು ವಿವಾದಾಸ್ಪದವಾಗಿಯೇ ಉಳಿದಿದೆ. ಶ್ರೀಲಂಕಾದ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಧಿಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಾರೆ. ಶ್ರೀಲಂಕಾದ ಪ್ರಾದೇಶಿಕ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ ಹಲವಾರು ಘಟನೆಗಳಲ್ಲಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡನ್ನು ಶ್ರೀಲಂಕಾದಿಂದ ಬೇರ್ಪಡಿಸುವ ಕಿರಿದಾದ ಪಾಕ್ ಜಲಸಂಧಿಯು ಎರಡೂ ದೇಶಗಳ ಮೀನುಗಾರರಿಗೆ ಶ್ರೀಮಂತ ಮೀನುಗಾರಿಕೆ ಸ್ಥಳವಾಗಿದೆ. ಎರಡೂ ದೇಶಗಳ ಮೀನುಗಾರರು ಪರಸ್ಪರ ಅತಿಕ್ರಮಣ ಮಾಡುತ್ತಿದ್ದು, ಆಗಾಗ್ಗೆ ಬಂಧನಕ್ಕೆ ಒಳಗಾಗುತ್ತಿದ್ದಾರೆ.

2024ರಲ್ಲಿ, ದ್ವೀಪ ರಾಷ್ಟ್ರದ ನೌಕಾಪಡೆಯು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 529 ಭಾರತೀಯ ಮೀನುಗಾರರನ್ನು ಬಂಧಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...