ದುಬೈ ಏರ್‌ ಶೋನಲ್ಲಿ ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನ ಪತನ; ಪೈಲಟ್ ಸಾವು

Date:

ಭಾರತ ನಿರ್ಮಿತ ಯುದ್ಧ ವಿಮಾನ ತೇಜಸ್ ಶುಕ್ರವಾರ ದುಬೈನಲ್ಲಿ ಏರ್‌ ಶೋ ವೇಳೆ ನೆಲಕ್ಕೆ ಅಪ್ಪಳಿಸಿದೆ. ಯುದ್ಧ ವಿಮಾನವು ಮಧ್ಯಾಹ್ನ 2.10ರ ಸುಮಾರಿಗೆ ಪತನಗೊಂಡಿದ್ದು ಪೈಲಟ್ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸಾವಿರಾರು ಪ್ರೇಕ್ಷಕರು ಏರ್‌ ಶೋ ನೋಡುತ್ತಿರುವಾಗಲೇ ವಿಮಾನ ನೆಲಕ್ಕೆ ಅಪ್ಪಳಿಸಿ ಬೆಂಕಿ ಆವರಿಸಿದೆ. ಸದ್ಯ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನು ಓದಿದ್ದೀರಾ? ವಾಯುಪಡೆಯ ಯುದ್ಧ ವಿಮಾನ ತೇಜಸ್ ಪತನ; ಪಾರಾದ ಪೈಲಟ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ವಾಯುಪಡೆಯ ವಕ್ತಾರರು, “ದುಬೈ ಏರ್ ಶೋ -25 ರಲ್ಲಿ ಐಎಎಫ್‌ನ ತೇಜಸ್ ಅಪಘಾತಕ್ಕೀಡಾಗಿದೆ. ಹೆಚ್ಚಿನ ವಿವರಗಳು ಸದ್ಯ ಲಭ್ಯವಾಗಿಲ್ಲ” ಎಂದು ತಿಳಿಸಿದ್ದಾರೆ.

ಈ ಹಿಂದೆ 2024ರ ಮಾರ್ಚ್ 12ರಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ಎಲ್‌ಸಿಎ ತೇಜಸ್ ಲಘು ಯುದ್ಧ ವಿಮಾನವು ಪತನಗೊಂಡಿತ್ತು. ಘಟನೆಯಲ್ಲಿ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದರು. ವಿಮಾನ ಪತನಗೊಳ್ಳುತ್ತಿದ್ದಂತೆ ಪೈಲಟ್ ಹೊರ ಜಿಗಿದು ಪ್ರಾಣ ಉಳಿಸಿಕೊಂಡಿದ್ದರು.

ಭಾರತ ನಿರ್ಮಿತ ತೇಜಸ್ ಯುದ್ಧ ವಿಮಾನ

ತೇಜಸ್ ಭಾರತೀಯ ವಾಯುಪಡೆಗಾಗಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಅಭಿವೃದ್ಧಿಪಡಿಸಿದ ಸ್ವದೇಶಿ, ಹಗುರವಾದ, ಒಂದೇ ಎಂಜಿನ್‌ನ, ಯುದ್ಧ ವಿಮಾನವಾಗಿದೆ. ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಮಾರ್ಗದರ್ಶನದಲ್ಲಿ ಈ ವಿಮಾನವನ್ನು ವಿನ್ಯಾಸಗೊಳಿಸಲಾಗಿದೆ. ಇದು ಎಲ್ಲಾ ಹವಾಮಾನ ಪರಿಸ್ಥಿತಿಗಳಲ್ಲಿ ಕಾರ್ಯನಿರ್ವಹಿಸಬಲ್ಲದು ಎನ್ನಲಾಗಿದೆ.

2016ರ ಜುಲೈನಿಂದ ಭಾರತೀಯ ವಾಯುಪಡೆ ತೇಜಸ್ ಯುದ್ಧ ವಿಮಾನ ಬಳಸುತ್ತಿದ್ದು, ಪ್ರಸ್ತುತ 38 ತೇಜಸ್ ಯುದ್ಧ ವಿಮಾನಗಳು ಸೇವೆಯಲ್ಲಿವೆ. ಇನ್ನೂ 83 ತೇಜಸ್ Mk1A ವಿಮಾನಗಳಿಗಾಗಿ ಭಾರತೀಯ ವಾಯುಪಡೆಯು ಬೇಡಿಕೆ ಸಲ್ಲಿಸಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ...

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...