ಮದುವೆಯಾಗದೆ 12 ದೇಶಗಳ ನೂರು ಮಕ್ಕಳಿಗೆ ತಂದೆಯಾಗಿದ್ದೇನೆ: ಟೆಲಿಗ್ರಾಂ ಸಿಇಒ ಪಾವೆಲ್ ದುರೋವ್‌

Date:

ಜನಪ್ರಿಯ ಸಾಮಾಜಿಕ ಮಾಧ್ಯಮ ಟೆಲಿಗ್ರಾಂ ಸಿಇಒ ಪಾವೆಲ್‌ ದುರೋವ್‌ ಅವರು ಕುತೂಹಲಕಾರಿ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾನು ಮದುವೆಯಾಗದೆಯೇ ನೂರು ಮಕ್ಕಳ ತಂದೆಯಾಗಿದ್ದೇನೆ ಎಂದು ತಮ್ಮ ಆ್ಯಪ್‌ನಲ್ಲಿಯೇ ಹೇಳಿಕೊಂಡಿದ್ದಾರೆ. ವೀರ್ಯ ದಾನದ ಮೂಲಕ 39 ವರ್ಷದ ಪಾವೆಲ್‌ ದುರೋವ್‌ ಅವರು 100 ಮಕ್ಕಳ ಜನನಕ್ಕೆ ಕಾರಣರಾಗಿದ್ದಾರಂತೆ.

ಒಮ್ಮೆಯೂ ಮದುವೆಯಾಗದೆ, ಏಕಾಂಗಿಯಾಗಿಯೇ ಬದುಕಲು ಇಚ್ಛಿಸಿರುವ ನನಗೆ ಇದು ಹೇಗೆ ಸಾಧ್ಯ ಎಂದು ತಮಗೆ ತಾವೆ ಪ್ರಶ್ನೆ ಹಾಕಿಕೊಂಡಿರುವ ಅವರು, ನಂತರ ಇದು ಹೇಗೆ ಸಾಧ್ಯವೆಂಬುದನ್ನು ತಿಳಿಸಿದ್ದಾರೆ.

“15 ವರ್ಷದ ಹಿಂದೆ ನನ್ನ ಗೆಳೆಯನೊಬ್ಬ ವಿಚಿತ್ರ ಮನವಿಯೊಂದಿಗೆ ನನ್ನ ಬಳಿ ಬಂದ. ಫಲವತ್ತತೆ ಸಮಸ್ಯೆಯಿಂದ ಬಳಲುತ್ತಿದ್ದು, ನನ್ನ ಹೆಂಡತಿ ಮಕ್ಕಳನ್ನು ಪಡೆಯಲು ನೀನು ವೀರ್ಯ ದಾನ ಮಾಡಬೇಕು ಎಂದು ಕೇಳಿದ. ಇದೆಲ್ಲ ತಮಾಷೆ ಎಂಬುದಾಗಿ ನಾನು ನಕ್ಕಿದ್ದೆ. ಆದರೆ, ಆತ ಗಂಭೀರವಾಗಿದ್ದ” ಎಂಬುದಾಗಿ ಪಾವೆಲ್‌ ದುರೋವ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಚಂದ್ರ’ ಉಪಗ್ರಹದಲ್ಲಿ ಮೊದಲ ರೈಲ್ವೆ ನಿಲ್ದಾಣ ಸ್ಥಾಪಿಸಲು ‘ನಾಸಾ’ ಯೋಜನೆ

“ಮಕ್ಕಳ ಜನನಕ್ಕೆ ಕಾರಣವಾಗುವ ಸಾಮರ್ಥ್ಯ ಇರುವ ವ್ಯಕ್ತಿಯಿಂದ ವೀರ್ಯ ಪಡೆಯಬೇಕು ಎಂಬುದಾಗಿ ವೈದ್ಯರು ಹೇಳಿದ್ದಾರೆ ಎಂದು ಗೆಳೆಯ ನನಗೆ ತಿಳಿಸಿದ. ವೈದ್ಯರು ಕೂಡ ವೀರ್ಯ ದಾನ ಮಾಡುವುದು ನಾಗರಿಕ ಕರ್ತವ್ಯವಾಗಿದೆ ಎಂಬುದಾಗಿ ನನ್ನನ್ನು ಒಪ್ಪಿಸಿದ. ವೈದ್ಯರು ಮನವರಿಕೆ ಮಾಡಿದ ಬಳಿಕ ನಾನು ವೀರ್ಯ ದಾನ ಮಾಡುತ್ತಲೇ ಬಂದೆ. ಈಗ ನಾನು 100 ಮಕ್ಕಳ ಜನನಕ್ಕೆ ಕಾರಣನಾಗಿದ್ದೇನೆ” ಎಂಬುದಾಗಿ ಪಾವೆಲ್‌ ದುರೋವ್‌ ಹೇಳಿಕೊಂಡಿದ್ದಾರೆ.

“ನಿಯಮಿತವಾಗಿ ನಾನು ವೀರ್ಯವನ್ನು ದಾನ ಮಾಡುತ್ತಲೇ ಬಂದೆ. ಸುಮಾರು 12 ದೇಶಗಳಲ್ಲಿ 100ಕ್ಕೂ ಅಧಿಕ ಮಕ್ಕಳು ನನ್ನಿಂದಾಗಿ ಜನಿಸಿದ್ದಾರೆ ಎಂಬ ಸಂಗತಿ ಗೊತ್ತಾಯಿತು. ಕೆಲ ವರ್ಷಗಳ ಹಿಂದೆ ನಾನು ವೀರ್ಯವನ್ನು ದಾನ ಮಾಡುವುದನ್ನು ನಿಲ್ಲಿಸಿದೆ. ಆದರೆ, ಐವಿಎಫ್‌ ಕ್ಲಿನಿಕ್‌ಗಳಲ್ಲಿ ಈಗಲೂ ನನ್ನ ವೀರ್ಯವನ್ನು ಸಂಗ್ರಹಿಸಿಟ್ಟಿದ್ದಾರೆ. ನನ್ನ ವೀರ್ಯದಿಂದ ಮಕ್ಕಳು ಜನಿಸುವ ಚಟುವಟಿಕೆಯು ನಡೆಯುತ್ತಲೇ ಇದೆ. ನಾನು ಮಾಡಿದ ಕೆಲಸಕ್ಕೆ ನನಗೆ ಹೆಮ್ಮೆಯಿದೆ. ಬೇರೆಯವರು ಕೂಡ ಈ ರೀತಿಯ ಕಾರ್ಯವನ್ನು ಮಾಡಬೇಕು ಎಂಬುದಾಗಿ ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

Telegram CEO
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...