ಭೀಕರ ಚಂಡಮಾರುತ; ಫಿಲಿಪೀನ್ಸ್‌ನಲ್ಲಿ 130 ಮಂದಿ ಸಾವು

Date:

ದ್ವೀಪ ಸಮೂಹ ರಾಷ್ಟ್ರ ಫಿಲಿಪೀನ್ಸ್‌ ಪದೇ-ಪದೇ ಚಂಡಮಾರುತಗಳಿಗೆ ತುತ್ತಾಗುತ್ತಲೇ ಇದೆ. ಈ ವರ್ಷ ಬರೋಬ್ಬರಿ 11 ಬಾರಿ ಚಂಡಮಾರುತ ಅಪ್ಪಳಿಸಿದೆ. ಇತ್ತೀಚೆಗೆ, ಅಪ್ಪಳಿಸಿದ ಟ್ರಾಮಿ ಚಂಡಮಾರುತದಿಂದ 130ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಟ್ರಾಮಿ ಚಂಡಮಾರುತವು ಫಿಲಿಪೀನ್ಸ್‌ನ ಅಪ್ಪಳಿಸಿದ 11ನೇ ಚಂಡಮಾರುತವಾಗಿದೆ. ಚಂಡಮಾರುತದಿಂದ ಎರಡು ದಿನಗಳ ಕಾಲ ಭಾರೀ ಮಳೆಯಾಗಿದೆ. ಪರಿಣಾಮ, ಪ್ರವಾಹ ಸಂಭವಿಸಿದ್ದು, ಹಲವು ಪ್ರಾಂತ್ಯಗಳು ಮುಳುಗಡೆಯಾಗಿವೆ. ಇನ್ನೂ ಹಲವು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.

ಚಂಡಮಾರುತದಿಂದ 50 ಲಕ್ಷಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಅವರಲ್ಲಿ,ಸುಮಾರು 20 ಲಕ್ಷ ಜನರು ಆಶ್ರಯ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಅವರಿಗಾಗಿ, 6,300ಕ್ಕೂ ಹೆಚ್ಚು ನಿರಾಶ್ರಿತ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಫಿಲಿಪೀನ್ಸ್‌ ಸರ್ಕಾರ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರದಿಂದ ಸೋಮವಾರದವರೆಗೆ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ನೀಡಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಗಳು ಕಾಣೆಯಾದವರ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

2013ರಲ್ಲಿ ಹೈಯಾನ್ ಚಂಡಮಾರುತವು ಫಿಲಿಪೀನ್ಸ್‌ ಮೇಲೆ ಅಪ್ಪಳಿಸಿತ್ತು. ಪರಿಣಾಮ, 7,300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇತ್ತೀಚಿನ ದಶಕಗಳಲ್ಲಿ ಫಿಲಿಪೀನ್ಸ್‌ ಮೇಲೆ ಅಪ್ಪಳಿಸಿದ ಭೀರಕ ಚಂಡಮಾರುತ ಇದಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...