‘ದುಬೈ ರನ್’ನಲ್ಲಿ ಮಿಂಚಿದ ಬ್ಯಾರಿಗಳು: ಅತಿ ಉದ್ದನೆಯ ಯುಎಇ ಧ್ವಜದ ದೃಶ್ಯ ಹಂಚಿಕೊಂಡ ರಾಜಕುಮಾರ ಶೇಖ್ ಹಮ್ದಾನ್

Date:

ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾನುವಾರ ದುಬೈನ ಶೇಖ್ ಝಾಯೆದ್ ರಸ್ತೆಯಲ್ಲಿ ನಡೆದ ಐತಿಹಾಸಿಕ ‘ದುಬೈ ರನ್–2025’ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಎಲ್ಲರ ಗಮನ ಸೆಳೆದಿದೆ.

ಲಕ್ಷಾಂತರ ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ, ಯುಎಇ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ (BCCI) ಅಧ್ಯಕ್ಷ ಹಿದಾಯತ್ ಅಡ್ಡೂರು ಅವರ ನೇತೃತ್ವದಲ್ಲಿ ಸಾವಿರಾರು ಬ್ಯಾರಿಗಳು ‘ದುಬೈ ಬ್ಯಾರೀಸ್’ ಎಂದು ಮುದ್ರಿತ ಟೀ–ಶರ್ಟ್‌ಗಳನ್ನು ಧರಿಸಿ, ಉತ್ಸಾಹದೊಂದಿಗೆ ಓಟದಲ್ಲಿ ಭಾಗವಹಿಸಿದರು.

ಇದನ್ನು ಓದಿದ್ದೀರಾ? ಚಿನ್ನ ಕಳ್ಳಸಾಗಣೆ | 30 ಬಾರಿ ದುಬೈಗೆ ಹೋದ ಕನ್ನಡ ನಟಿ ರನ್ಯಾ, ಪ್ರತಿ ಟ್ರಿಪ್‌ಗೆ 12 ಲಕ್ಷ ರೂ. ಸಂಪಾದನೆ ಆರೋಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ವ ತಯಾರಿಯಿಂದಲೇ ಸಜ್ಜುಗೊಂಡಿದ್ದ ಅನೇಕ ಅನಿವಾಸಿ ಬ್ಯಾರಿಗಳು, ಅತಿ ಉದ್ದನೆಯ ಯುಎಇ ಧ್ವಜವನ್ನು ಹಾರಿಸುತ್ತಾ, ಓಟದ ಉದ್ದಕ್ಕೂ ಕನ್ನಡ ಮತ್ತು ಬ್ಯಾರಿ ಹಾಡುಗಳನ್ನು ಹಾಡುತ್ತಾ ಸಂಭ್ರಮಿಸಿದರು. ಈ ಸಾಂಸ್ಕೃತಿಕ, ಸಂಭ್ರಮ ಮತ್ತು ರಾಷ್ಟ್ರೀಯ ಗೌರವದ ಪ್ರದರ್ಶನ ಎಲ್ಲರ ಮನ ಸೆಳೆಯಿತು.

dubai4
dubai1

ಈ ವಿಶೇಷ ಕ್ಷಣವು ಜನರಷ್ಟೇ ಅಲ್ಲ, ದುಬೈ ರಾಜಕುಮಾರ ಶೇಖ್ ಹಮ್ದಾನ್ ಅವರ ಗಮನಕ್ಕೂ ಬಿದ್ದು, ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬ್ಯಾರಿ ಸಮುದಾಯದವರು ಹಾರಿಸಿದ ಅತಿ ಉದ್ದನೆಯ ಯುಎಇ ಧ್ವಜದ ಚಿತ್ರವನ್ನು ಹಂಚಿಕೊಂಡಿದ್ದಾರೆ.

dubai2

ಅಶ್ರಫ್ ಶಾ ಮಾಂತೂರು, ಸಲೀಂ ಮೂಡಬಿದ್ರೆ, ಸಮದ್ ಬಿರಾಲಿ, ಮೊಹಮ್ಮದ್ ಆಶಿಕ್ (ಬದ್ರಿಯಾ ಫ್ರೆಂಡ್ಸ್), ಇಕ್ರಂ ಮೂಳೂರು, ಸಂಶುದ್ದೀನ್ ಪಿಲಿಗೊಡು, ನೌಫಾಲ್, ಅಕ್ಬರ್, ಯೂಸುಫ್ ಶೇಖ್, ಅದ್ದು ಹೊನ್ನಾವರ, ಸೋಶಿಯಲ್ ಇನ್‌ಫ್ಲಿಯನ್ಸರ್ ನಝೀಹ ಫಾತಿಮಾ, ಶುಕೂರ್ ಉಳ್ಳಾಲ, ಆಸೀಫ್ ಕಣ್ಣಂಗಾರ್, ನವಾಝ್ ಕೊಳ್ತಮಜಲು, ನಝೀರ್ ವಾಮಂಜೂರು, ಸನಾನ್ ಸೇರಿದಂತೆ ಹಲವು ಸಂಘಟನೆಗಳ ಪ್ರತಿನಿಧಿಗಳು ಮತ್ತು ಸಾವಿರಾರು ಬ್ಯಾರಿಗಳು ಕುಟುಂಬ ಸಮೇತರಾಗಿ ಈ ಓಟದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

dubai3
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...