ಟ್ರಂಪ್‌ಗೆ ಫಿಫಾ ಶಾಂತಿ ಪ್ರಶಸ್ತಿ ಪ್ರದಾನ

Date:

ಫಿಫಾ ಆರಂಭಿಸಿರುವ ‘ಫಿಫಾ ಶಾಂತಿ ಪ್ರಶಸ್ತಿ’ಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪಡೆದುಕೊಂಡಿದ್ದಾರೆ. ಟ್ರಂಪ್ ಅವರಿಗೆ ಪ್ರಶಸ್ತಿಯನ್ನು ಫಿಫಾ ಅಧ್ಯಕ್ಷ ಜೈನಿ ಇನ್ಫಾಂಟಿನೊ ಪ್ರದಾನ ಮಾಡಿದ್ದಾರೆ. ವಾಷಿಂಗ್ಟನ್ ಡಿಸಿಯ ಕೆನಡಿ ಸೆಂಟರ್‍‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ಫಿಫಾ ರಾಷ್ಟ್ರವು ‘ಫಿಫಾ ಶಾತಿ ಪ್ರಶಸ್ತಿ’ಯನ್ನು ಆರಂಭಿಸಿದೆ. ಚೊಚ್ಚಲ ಪ್ರಶಸ್ತಿಗೆ ಟ್ರಪ್ ಭಾಜನರಾಗಿದ್ದಾರೆ. “ಶಾಂತಿಗಾಗಿ ವಿಶೇಷ ಮತ್ತು ಅದ್ಭುತ ಕ್ರಮಗಳನ್ನು ಕೈಗೊಂಡಿರುವ ವ್ಯಕ್ತಿಗಳನ್ನು ಗುರುತಿಸುವುದು ಮತ್ತು ವಿಶ್ವದ ಜನರನ್ನು ಒಗ್ಗೂಡಿಸುವವರನ್ನು ಗೌರವಿಸಲು ಪ್ರಶಸ್ತಿಯನ್ನು ಈ ವರ್ಷದಿಂದ ಆರಂಭಿಸಲಾಗಿದೆ” ಎಂದು ಫಿಫಾ ತಿಳಿಸಿದೆ.

ಟ್ರಂಪ್ ಅವರನ್ನು ಶಾಂತಿ ಒಪ್ಪಂದದ ಮಧ್ಯಸ್ಥಿಕೆದಾರ ಮತ್ತು ರಾಜತಾಂತ್ರಿಕತೆಯಲ್ಲಿ ತೊಡಗಿಸಿಕೊಂಡಿರುವ ನಾಯಕ ಎಂದು ಫಿಫಾ ಬಣ್ಣಿಸಿದೆ. ವಿಶ್ವದಾದ್ಯಂತ ಶಾಂತಿ ಸ್ಥಾಪನೆಗೆ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಟ್ರಂಪ್, “ನನ್ನ ಜೀವನದಲ್ಲಿ ಇದೊಂದು ದೊಡ್ಡ ಗೌರವ. ನಾವು ಲಕ್ಷಾಂತರ ಜನರು ಮತ್ತು ಅವರ ಬದುಕನ್ನು ರಕ್ಷಿಸಿದ್ದೇವೆ. ಅದು ಪ್ರಶಸ್ತಿಗಿಂತ ಮಿಗಿಲಾದದ್ದು. ಕೊಂಗೋ, ಭಾರತ-ಪಾಕ್ ಸೇರಿದಂತೆ ಹಲವು ಯುದ್ಧಗಳನ್ನು ಕೊನೆಗಾಣಿಸಿದ್ದೇವೆ” ಎಂದು ಹೇಳಿಕೊಂಡಿದ್ದಾರೆ.

ಆದಾಗ್ಯೂ, 2026ರ ಫಿಫಾ ವಿಶ್ವಕಪ್ ಪಂದ್ಯಗಳ ಡ್ರಾ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದ್ದು, ಇದು ಆಟಕ್ಕೆ ರಾಜಕೀಯ ಲೇಪನ ನೀಡಿದೆ. ಚರ್ಚೆಗೆ ಗ್ರಾಸವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...