ರಷ್ಯಾದಿಂದ ತೈಲ ಖರೀದಿ ಇಲ್ಲವೆಂದು ಮೋದಿ ಭರವಸೆ: ಟ್ರಂಪ್

Date:

ರಷ್ಯಾದಿಂದ ತೈಲ ಖರೀದಿ ಸ್ಥಗಿತಗೊಳಿಸುವುದಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿ ಮಾಡುವ ಭಾರತದ ಮೇಲೆ ಶೇಕಡ 50ರಷ್ಟು ಹೆಚ್ಚುವರಿ ಸುಂಕ ವಿಧಿಸಿ ಒಂದು ತಿಂಗಳ ಬಳಿಕ ಟ್ರಂಪ್ ಈ ಹೇಳಿಕೆ ನೀಡಿದ್ದಾರೆ.

“ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂಬ ಆಶ್ವಾಸನೆಯನ್ನು ಅವರು ನೀಡಿದ್ದಾರೆ. ನಿಮಗೆ ತಿಳಿದಿರುವಂತೆ ತಕ್ಷಣಕ್ಕೆ ಅದನ್ನು ಮಾಡಲಾಗದು. ಒಂದಷ್ಟು ಪ್ರಕ್ರಿಯೆಗಳಿರುತ್ತವೆ. ಆದರೆ ಶೀಘ್ರವೇ ಈ ವಿಧಿವಿಧಾನಗಳು ಮುಕ್ತಾಯವಾಗಲಿವೆ” ಎಂದು ಟ್ರಂಪ್ ಹೇಳಿದರು.

ಭಾರತ ವಿಶ್ವಾಸಾರ್ಹ ಪಾಲುದಾರನಾಗಿದೆಯೇ ಎಂದು ಎಎನ್ಐ ಪ್ರತಿನಿಧಿ ಕೇಳಿದ ಪ್ರಶೆಗೆ ಉತ್ತರಿಸಿದ ಟ್ರಂಪ್, “ಖಂಡಿತವಾಗಿಯೂ ಇರುತ್ತದೆ. ಅವರು (ಮೋದಿ) ನನ್ನ ಸ್ನೇಹಿತ. ನಮ್ಮ ಸಂಬಂಧ ಉತ್ತಮವಾಗಿದೆ. ಭಾರತದ ತೈಲ ಖರೀದಿ ಬಗ್ಗೆ ನನಗೆ ಸಮಾಧಾನ ಇಲ್ಲ. ಆದರೆ ರಷ್ಯಾದಿಂದ ತೈಲ ಖರೀದಿ ಮಾಡುವುದಿಲ್ಲ ಎಂಬ ಭರವಸೆಯನ್ನು ನನಗೆ ಇಂದು ನೀಡಿದ್ದಾರೆ. ಇದು ದೊಡ್ಡ ಸ್ಥಗಿತ. ಇದನ್ನೇ ಚೀನಾ ಮಾಡುವಂತಾಗಬೇಕು” ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!

“ಅವರು ನನ್ನ ಸ್ನೇಹಿತ. ನಮ್ಮ ಸಂಬಂಧ ಉತ್ತಮವಾಗಿದೆ. ನಿಮಗೆ ತಿಳಿದಿರುವಂತೆ ಎರಡು ದಿನಗಳ ಹಿಂದಷ್ಟೇ ಅವರು ಇದನ್ನು ಹೇಳಿದ್ದಾರೆ” ಎಂದು ವಿವರಿಸಿದರು. ಓವಲ್ ಆಫೀಸ್ನಲ್ಲಿ ಎಫ್ಬಿಐ ನಿರ್ದೇಶಕ ಕಶ್ ಪಟೇಲ್ ಅವರೊಂದಿಗೆ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಟ್ರಂಪ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಭಾರತ ಈ ಹಿಂದೆ ರಷ್ಯಾದಿಂದ ತೈಲ ಖರೀದಿ ಮಾಡಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, “ರಷ್ಯಾದಿಂದ ಅವರು ತೈಲ ಖರೀದಿ ಮಾಡುತ್ತಿರುವುದು ನನಗೆ ಸಮಾಧಾನ ತಂದಿಲ್ಲ. ಏಕೆಂದರೆ ರಷ್ಯಾ ಹಾಸ್ಯಾಸ್ಪದ ಯುದ್ಧ ಮುಂದುವರಿಸಿದೆ. ಹೀಗೆ ಮಾಡಿ ಬಹುತೇಕ ಸೈನಿಕರು ಸೇರಿ 15 ಲಕ್ಷ ಮಂದಿಯನ್ನು ಕಳೆದುಕೊಂಡಿದೆ. ಉಭಯ ದೇಶಗಳ ನಡುವಿನ ಯುದ್ಧ ಅನಗತ್ಯ. ಇದು ಆರಂಭವಾಗಬಾರದಿತ್ತು. ಆದರೆ ಇದು ರಷ್ಯಾ ಮೊದಲ ವಾರದಲ್ಲೇ ಗೆಲ್ಲಬಹುದಾಗಿದ್ದ ಯುದ್ಧ; ಇದೀಗ ನಾಲ್ಕನೇ ವರ್ಷ ಮುಂದುವರಿದಿದೆ ಎಂದು ವಿಶ್ಲೇಷಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...