50 ಲಕ್ಷ ಡಾಲರ್ ನೀಡಿದರೆ ಅಮೆರಿಕ ಪೌರತ್ವ: ಶ್ರೀಮಂತ ವಲಸಿಗರಿಗೆ ಟ್ರಂಪ್ ‘ಗೋಲ್ಡ್ ಕಾರ್ಡ್’ ಆಫರ್

Date:

ತಾನು ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾದ ಬಳಿಕ ಭಾರತೀಯರು ಸೇರಿದಂತೆ ಅಕ್ರಮವಾಗಿ ನೆಲೆಸಿರುವ ವಲಸಿಗರ ಕೈಗೆ ಕೋಳ ಹಾಕಿ ಅಮೆರಿಕದಿಂದ ಹೊರದಬ್ಬಿದ ಡೊನಾಲ್ಡ್ ಟ್ರಂಪ್ ಈಗ ಶ್ರೀಮಂತ ವಲಸಿಗರಿಗೆ ಆಫರ್ ಒಂದನ್ನು ನೀಡಿದ್ದಾರೆ. 5 ಮಿಲಿಯನ್ ಡಾಲರ್ ನೀಡಿದರೆ ಅಮೆರಿಕದ ಪೌರತ್ವ ನೀಡುವ ‘ಗೋಲ್ಡ್ ಕಾರ್ಡ್’ ಆಫರ್ ಅನ್ನು ಶ್ರೀಮಂತ ವಲಸಿಗರಿಗೆ ಟ್ರಂಪ್ ನೀಡಿದ್ದಾರೆ. ಈ ಹೊಸ ಯೋಜನೆಯನ್ನು ಮಂಗಳವಾರ ಮಂಡಿಸಿದ್ದಾರೆ.

ಅಮೆರಿಕದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವ ಅಥವಾ ಸಂರಕ್ಷಿಸುವ, ಭಾರೀ ಮೊತ್ತದ ಹಣವನ್ನು ಹೂಡಿಕೆ ಮಾಡುವ ವಿದೇಶಿ ಹೂಡಿಕೆದಾರರು ಶಾಶ್ವತ ನಿವಾಸಿಗಳಾಗಲು ಅನುವು ಮಾಡಿಕೊಡುವ ‘ಇಬಿ-5’ ವಲಸೆ ಹೂಡಿಕೆದಾರರ ವೀಸಾ ಕಾರ್ಯಕ್ರಮವನ್ನು ‘ಗೋಲ್ಡ್ ಕಾರ್ಡ್’ ಎಂದು ಬದಲಾಯಿಸುವುದಾಗಿ ಟ್ರಂಪ್ ವರದಿಗಾರರಿಗೆ ತಿಳಿಸಿದರು.

ಇದನ್ನು ಓದಿದ್ದೀರಾ? ಉಕ್ರೇನ್ ಕುರಿತ ನಿರ್ಣಯಗಳ ಮತದಾನದಿಂದ ದೂರ ಉಳಿದ ಭಾರತ: ಅಮೆರಿಕಕ್ಕೆ ಹಿನ್ನಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮೆರಿಕದ ವ್ಯವಹಾರಗಳಲ್ಲಿ ಹೂಡಿಕೆ ಮಾಡುವ ಭರವಸೆ ನೀಡುವ ವಿದೇಶಿಯರಿಗೆ ಇಬಿ-5 ಕಾರ್ಯಕ್ರಮದಡಿಯಲ್ಲಿ ‘ಗ್ರೀನ್ ಕಾರ್ಡ್’ಗಳನ್ನು ನೀಡಲಾಗುವುದು. ನಾವು ಗೋಲ್ಡ್ ಕಾರ್ಡ್ ಮಾರಾಟ ಮಾಡಲಿದ್ದೇವೆ. ನಾವು ಆ ಕಾರ್ಡ್‌ಗೆ ಸುಮಾರು ಸುಮಾರು 5 ಮಿಲಿಯನ್ ಡಾಲರ್ (43,52,00,022.50 ಭಾರತೀಯ ರೂಪಾಯಿ) ಬೆಲೆಯನ್ನು ನಿಗದಿಪಡಿಸಲಿದ್ದೇವೆ” ಎಂದು ಟ್ರಂಪ್ ತಿಳಿಸಿದ್ದಾರೆ.

“ಇದು ನಿಮಗೆ ಗ್ರೀನ್ ಕಾರ್ಡ್ ಸವಲತ್ತುಗಳನ್ನು ನೀಡಲಿದೆ. ಇದು ಅಮೆರಿಕದ ಪೌರತ್ವಕ್ಕೆ ಒಂದು ಮಾರ್ಗವಾಗಲಿದೆ. ಶ್ರೀಮಂತ ಜನರು ಈ ಕಾರ್ಡ್ ಖರೀದಿಸುವ ಮೂಲಕ ನಮ್ಮ ದೇಶಕ್ಕೆ ಬರಬಹುದು. ಈ ಯೋಜನೆಯ ಬಗ್ಗೆ ಎರಡು ವಾರಗಳಲ್ಲಿ ವಿವರಗಳನ್ನು ನೀಡಲಾಗುವುದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ‘ಡಂಕಿ ಮಾರ್ಗ’ ಮೂಲಕ ಅಮೆರಿಕಕ್ಕೆ ಹೋದ 42 ಭಾರತೀಯ ಯುವಕರು 15 ವರ್ಷಗಳಿಂದ ನಾಪತ್ತೆ

ಇನ್ನು ರಷ್ಯಾದ ಉದ್ಯಮಿಗಳು ಗೋಲ್ಡ್ ಕಾರ್ಡ್‌ಗಳನ್ನು ಪಡೆಯುವ ಅರ್ಹತೆ ಹೊಂದಿರುತ್ತಾರೆಯೇ ಎಂಬ ಮಾಧ್ಯಮದ ಪ್ರಶ್ನೆಗೆ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ. “ಅವರೂ ಕೂಡಾ ಗೋಲ್ಡ್ ಕಾರ್ಡ್‌ಗಳಿಗೆ ಅರ್ಹತೆ ಪಡೆಯುವ ಸಾಧ್ಯತೆಯಿದೆ. ಹೌದು, ಪ್ರಾಯಶಃ ಪಡೆಯಬಹುದು. ಕೆಲವು ರಷ್ಯಾದ ಉದ್ಯಮಿಗಳು ಕೂಡಾ ತುಂಬಾ ಒಳ್ಳೆಯ ಜನರು ಎಂದು ತಿಳಿದಿದೆ” ಎಂದರು.

ವಿದೇಶಿ ಹೂಡಿಕೆದಾರರಿಂದ ಉದ್ಯೋಗ ಸೃಷ್ಟಿ ಮತ್ತು ಬಂಡವಾಳ ಹೂಡಿಕೆಯ ಮೂಲಕ ಯುಎಸ್ ಆರ್ಥಿಕತೆಯನ್ನು ಉತ್ತೇಜಿಸಲು 1990ರಲ್ಲಿ ಅಮೆರಿಕ ಇಬಿ-5 ವಲಸೆ ಹೂಡಿಕೆದಾರರ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ತಾನು ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಹಲವು ವಿವಾದಾತ್ಮಕ ಯೋಜನೆಗಳನ್ನು, ನೀತಿಗಳನ್ನು ಜಾರಿ ಮಾಡಿರುವ ಟ್ರಂಪ್, ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಆಮದು ಸುಂಕವನ್ನು ಹೆಚ್ಚಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...