ಭಾರತದ ಮೇಲೆ 25% ತೆರಿಗೆ ಹೇರಿದ ಟ್ರಂಪ್

Date:

ಭಾರತವು ಆಗಸ್ಟ್‌ 1ರಿಂದ 25%ರಷ್ಟು ತೆರಿಗೆಯನ್ನು ಪಾವತಿಸಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ. ರಷ್ಯಾದಿಂದ ಇಂಧನ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿರುವ ಕಾರಣಕ್ಕಾಗಿ ಭಾರತವು ಹೆಚ್ಚುವರಿ ದಂಡವನ್ನು ಪಾವತಿಸಬೇಕಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇತ್ತೀಚೆಗೆ, ನ್ಯಾಟೋ ಮತ್ತು ಟ್ರಂಪ್ ಅವರು ರಷ್ಯಾ ಮೇಲಿನ ನಿರ್ಬಂಧದ ಭಾಗವಾಗಿ ರಷ್ಯಾದಿಂದ ಯಾವುದೇ ರಾಷ್ಟ್ರವು ಇಂಧನ ಖರೀದಿ ಮಾಡಬಾರದು. ಖರೀದಿ ಮಾಡಿದರೆ, ಅಮೆರಿಕದಿಂದ ಭಾರೀ ಸುಂಕ ವಿಧಿಸಲಾಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಇದೀಗ, ಭಾರತದ ಮೇಲೆ 25% ಹೆಚ್ಚುವರಿ ತೆರಿಗೆ ವಿಧಿಸಿರುವುದಾಗಿ ಟ್ರಂಪ್ ಘೋಷಿಸಿದ್ದಾರೆ.

ಟ್ರಂಪ್ ಅಧ್ಯಕ್ಷರಾದ ಮೇಲೆ, ಏಪ್ರಿಲ್ 2ರಂದು ಮೊದಲ ಬಾರಿಗೆ ತೆರಿಗೆ ಪಟ್ಟಿ ಘೊಷಿಸಿದ್ದ ಟ್ರಂಪ್, ಭಾರತದ ಮೇಲೆ 26% ತೆರಿಗೆ ವಿಧಿಸಿದ್ದರು. ಅದಾದ ಬಳಿಕ, ತಮ್ಮ ತೆರಿಗೆ ಹೇರಿಕೆಯ ನಿರ್ಧಾರವನ್ನು ಹಿಂಪಡೆದಿದ್ದರು. ಇದೀಗ, ಎರಡನೇ ಬಾರಿಗೆ ತೆರಿಗೆ ಪಟ್ಟಿ ಘೊಷಿಸಿದ್ದು, ಭಾತತದ ಮೇಲೆ 25% ತೆರಿಗೆ ವಿಧಿಸಿರುವುದಾಗಿ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 07 30 at 6.14.43 PM

ಈ ಬಗ್ಗೆ ಟ್ರುತ್ ಸೋಷಿಯಲ್‌ನಲ್ಲಿ ಪೋಸ್ಟ್‌ ಮಾಡಿರುವ ಟ್ರಂಪ್, “ನೆನಪಿಡಿ, ಭಾರತ ನಮ್ಮ ಸ್ನೇಹಿತನಾಗಿದ್ದರೂ, ನಾವು ಇತ್ತೀಚಿನ ವರ್ಷಗಳಲ್ಲಿ ಕಡಿಮೆ ವ್ಯಾಪಾರ ವ್ಯವಹಾರ ಮಾಡಿದ್ದೇವೆ. ಏಕೆಂದರೆ, ಭಾರತವು ಹೆಚ್ಚು ಆಮದು ಸುಂಕ ವಿಧಿಸುತ್ತದೆ. ವಿಶ್ವದಲ್ಲೇ ಅತ್ಯಧಿಕ ಸುಂಕ ಭಾರತದ್ದಾಗಿದೆ. ಅವರು ಯಾವುದೇ ದೇಶಕ್ಕಿಂತ ಅತ್ಯಂತ ಕಠಿಣ ಮತ್ತು ಅಸಹ್ಯಕರವಾದ ವ್ಯಾಪಾರ ಅಡೆತಡೆಗಳನ್ನು ಹೊಂದಿದ್ದಾರೆ” ಎಂದು ಮತ್ತೊಮ್ಮೆ ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಭಾರತದ ನಗರಗಳು ಹಾಲಿ ಜೀವನ ವೆಚ್ಚಗಳಿಗೆ ಯೋಗ್ಯವೇ?

“ಅಲ್ಲದೆ, ಅವರು ಯಾವಾಗಲೂ ತಮಗೆ ಬೇಕಿರುವ ಮಿಲಿಟರಿ ಉಪಕರಣಗಳಲ್ಲಿ ಹೆಚ್ಚಿನ ಶಸ್ತ್ರಾಸ್ತ್ರಗಳನ್ನು ರಷ್ಯಾದಿಂದ ಖರೀದಿಸಿದ್ದಾರೆ. ರಷ್ಯಾದ ಇಂಧನ ಖರೀದಿಸುವವರಿಗೆ ಚೀನಾ-ಭಾರತ ಹೆಚ್ಚು ಪಾಲು ಹೊಂದಿವೆ. ಎಲ್ಲರೂ ಉಕ್ರೇನ್‌ನಲ್ಲಿ ರಷ್ಯಾ ಎಸಗುತ್ತಿರುವ ಹತ್ಯೆಯನ್ನು ನಿಲ್ಲಿಸಬೇಕೆಂದು ಬಯಸುತ್ತಾರೆ. ಆದ್ದರಿಂದ, ಭಾರತವು ಆಗಸ್ಟ್‌ 1ರಿಂದ 25% ಸುಂಕವನ್ನು ಪಾವತಿಸಬೇಕಾಗುತ್ತದೆ. ಇದು ನಿಮ್ಮ ಗಮನಕ್ಕಾಗಿ. ಧನ್ಯವಾದಗಳು. MAGA!” ಎಂದು ಟ್ರಂಪ್ ಬರೆದುಕೊಂಡಿದ್ದಾರೆ.

ಏತನ್ಮಧ್ಯೆ, ಹಲವು ದೇಶಗಳ ಮೇಲೆ ಟ್ರಂಪ್ ಘೋಷಿಸಿರುವ ಸುಂಕಗಳು ಆಗಸ್ಟ್ 1ರಿಂದ ಯಾವುದೇ ವಿಳಂಬವಿಲ್ಲದೆ ಜಾರಿಗೆ ಬರಲಿವೆ ಎಂದು ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ.

ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಿಕ್ಕಟ್ಟು

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ಭೇಟಿಯು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಉದ್ದೇಶವನ್ನು ಹಿಂದಿದೆ ಎಂದು ಘೋಷಿಸಿದ್ದರು. ಆದರೂ, ಎರಡೂ ದೇಶಗಳು ಮಧ್ಯಂತರ ವ್ಯಾಪಾರ ಒಪ್ಪಂದವನ್ನು ರೂಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಎರಡೂ ದೇಶಗಳ ಅಧಿಕಾರಿಗಳ ನಡುವೆ ಐದು ಸುತ್ತಿನ ಮಾತುಕತೆಗಳು ನಡೆದಿವೆ. ಆಗಸ್ಟ್ ಅಂತ್ಯದಲ್ಲಿ 6ನೇ ಸುತ್ತಿನ ಮಾತುಕತೆ ನಡೆಯಲಿದೆ. ಆ ಮಾತುಕತೆಗಾಘಿ ಅಮೆರಿಕದ ತಂಡ ಭಾರತಕ್ಕೆ ಭೇಟಿ ನೀಡಲಿದೆ.

ಅಮೆರಿಕದ ಸರಕುಗಳಿಗೆ ಭಾರತವು ಕಡಿಮೆ ಸುಂಕದೊಂದಿಗೆ ತನ್ನ ಮಾರುಕಟ್ಟೆಯನ್ನು ತೆರೆಯಬೇಕೆಂದು ಟ್ರಂಪ್ ಪದೇ ಪದೇ ಹೇಳುತ್ತಿದ್ದರು. ಆದರೆ, ವ್ಯಾಪಾರ ಒಪ್ಪಂದದ ಪ್ರಮುಖ ಅಂಶಗಳು ಕೃಷಿ ಮತ್ತು ಡೈರಿ ಉತ್ಪನ್ನಗಳನ್ನು ಕೇಂದ್ರೀಕರಿಸಿವೆ. ಇವುಗಳ ಬಗ್ಗೆ ಭಾರತವು ಕಠಿಣ ನಿಲುವನ್ನು ಹೊಂದಿದ್ದು, ಈ ಉತ್ಪನ್ನಗಳಿಗೆ ಭಾರತದಲ್ಲಿ ಮಾರುಕಟ್ಟೆ ತೆರೆಯಲು ಭಾರತವು ನಿರಾಕರಿಸುತ್ತಿದೆ. ಈ ಮಾತುಕತೆಗಳ ನಡುವೆಯೇ ಭಾರತದ ಮೇಲೆ ಟ್ರಂಪ್ 25% ಸುಂಕ ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...