ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

Date:

ವಿಶ್ವದಲ್ಲಿ ನಡೆದ ಹಲವು ಯುದ್ಧಗಳನ್ನು ನಿಲ್ಲಿಸಿದ ಶ್ರೇಯಸ್ಸನ್ನು ನಿರಂತರವಾಗಿ ತಮ್ಮ ಮೇಲೆ ತಾವೇ ಹೇರಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, “ಭಾರತ ಮತ್ತು ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ” ಎಂದು ಪುನರುಚ್ಚಾರ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೆ ವಿಶ್ವದಾದ್ಯಂತ ಏಳು ಯುದ್ಧಗಳನ್ನು ತಾವು ನಿಲ್ಲಿಸಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಶ್ವೇತಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟ್ರಂಪ್, “ನಾನು ನಿಲ್ಲಿಸಿದ ಏಳು ಯುದ್ಧಗಳಲ್ಲಿ ನಾಲ್ಕು ಯುದ್ಧಗಳಲ್ಲಿ ಭಾಗಿಯಾಗಿರುವ ದೇಶಗಳೊಂದಿಗೆ ಮಾತುಕತೆ ನಡೆಸುವ ವೇಳೆ ವ್ಯಾಪಾರ ನಿಲ್ಲಿಸುವ ಮತ್ತು ಸುಂಕ ಹೇರುವ ಬೆದರಿಕೆ ಹಾಕಿದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಭಾರತ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲಿದೆ ಎನ್ನಲಾಗುತ್ತಿದೆ: ಡೊನಾಲ್ಡ್ ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನಗೆ ಸುಂಕಗಳು ಮತ್ತು ವ್ಯಾಪಾರ ಎಂಬ ಅಸ್ತ್ರವಿತ್ತು. ‘ನೀವು ಹೋರಾಡಲು ಹೋಗಿ ಎಲ್ಲರನ್ನೂ ಕೊಲ್ಲಲು ಬಯಸಿದರೆ, ಅದು ಸರಿ, ಆದರೆ ನೀವು ನಮ್ಮೊಂದಿಗೆ ವ್ಯಾಪಾರ ಮಾಡುವಾಗ ನಾನು ನಿಮಗೆ ಶೇಕಡ 100ರಷ್ಟು ಸುಂಕವನ್ನು ವಿಧಿಸುತ್ತೇನೆ’ ಎಂದು ಹೇಳಿದೆ. ಅವರೆಲ್ಲರೂ ಯುದ್ಧವನ್ನೇ ಕೈಬಿಟ್ಟರು” ಎಂದು ಟ್ರಂಪ್ ಹೇಳಿಕೊಂಡಿದ್ದಾರೆ.

“ನಾನು ಈ ಎಲ್ಲಾ ಯುದ್ಧಗಳನ್ನು ನಿಲ್ಲಿಸಿದ್ದೇನೆ. ಆದರೆ ಅದರಲ್ಲಿ ದೊಡ್ಡ ಯುದ್ಧ ಭಾರತ ಮತ್ತು ಪಾಕಿಸ್ತಾನವಾಗಿರುತ್ತಿತ್ತು. ಭಾರತ ಮತ್ತು ಪಾಕಿಸ್ತಾನದೊಂದಿಗಿನ ಯುದ್ಧವು ಪರಮಾಣು ಯುದ್ಧದ ಮುಂದಿನ ಹಂತವಾಗಿತ್ತು. ಅವರು ಈಗಾಗಲೇ 7 ಜೆಟ್‌ಗಳನ್ನು ಹೊಡೆದುರುಳಿಸಿದ್ದರು. ನಾನು, ‘ನೀವು ವ್ಯಾಪಾರ ಮಾಡಲು ಬಯಸುತ್ತೀರಾ? ನೀವು ಹೋರಾಡುತ್ತಲೇ ಇದ್ದರೆ ನಾವು ನಿಮ್ಮೊಂದಿಗೆ ಯಾವುದೇ ವ್ಯಾಪಾರ ಅಥವಾ ಏನನ್ನೂ ಮಾಡುವುದಿಲ್ಲ. ಈ ಸಮಸ್ಯೆ ಪರಿಹರಿಸಲು ನಿಮಗೆ 24 ಗಂಟೆಗಳ ಕಾಲಾವಕಾಶವಿದೆ’ ಎಂದು ಹೇಳಿದೆ. ಅವರು, ‘ಸರಿ, ಇನ್ನು ಯುದ್ಧ ನಡೆಯುವುದಿಲ್ಲ’ ಎಂದು ಹೇಳಿದರು. ನಾನು ಅದನ್ನು ಹಲವು ಸಂದರ್ಭಗಳಲ್ಲಿ ಹೇಳಿದ್ದೇನೆ” ಎಂದಿದ್ದಾರೆ.

ಆದರೆ ಟ್ರಂಪ್ ಯಾವ ದೇಶದ 7 ಜೆಟ್‌ಗಳು ಉರುಳಿದೆ? ಅಥವಾ ಎರಡೂ ದೇಶಗಳ ಜೆಟ್ ಉರುಳಿದೆಯೇ? ಎಂಬ ಬಗ್ಗೆ ಸ್ಪಷ್ಟಪಡಿಸಿಲ್ಲ.

ಇನ್ನು ಕಳೆದ ವಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸೇರಿದಂತೆ ಆರು ಯುದ್ಧಗಳನ್ನು ಕೊನೆಗೊಳಿಸಿದ್ದೇನೆ ಎಂದು ಟ್ರಂಪ್ ಹೇಳಿದ್ದರು.

ಇನ್ನು ಪಾಕಿಸ್ತಾನದೊಂದಿಗಿನ ಯುದ್ಧವನ್ನು ನಿಲ್ಲಿಸುವ ಬಗ್ಗೆ ಉಭಯ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ (ಡಿಜಿಎಂಒ) ನಡುವಿನ ನೇರ ಮಾತುಕತೆಯ ನಂತರ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಭಾರತ ನಿರಂತರವಾಗಿ ಹೇಳುತ್ತಾ ಬಂದಿದೆ. ಆದರೂ ಟ್ರಂಪ್ ಮಾತ್ರ ಯುದ್ಧ ನಿಲ್ಲಿಸಿದ್ದು ತಾವೇ ಎಂದು ಪದೇ ಪದೇ ಹೇಳುತ್ತಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...