ಉಕ್ರೇನ್‌ಗೆ ಮಿಲಿಟರಿ ನೆರವು ನಿಲ್ಲಿಸಿದ ಅಮೆರಿಕ

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉಕ್ರೇನ್‌ಗೆ ಮಿಲಿಟರಿ ನೆರವನ್ನು ಸ್ಥಗಿತಗೊಳಿಸಿದ್ದಾರೆ. ಈ ಕುರಿತು ಶ್ವೇತಭವನದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಈ ಬೆಳವಣಿಗೆ ರಷ್ಯಾದೊಂದಿಗೆ ಶಾಂತಿ ಮಾತುಕತೆಗೆ ಒಪ್ಪಿಕೊಳ್ಳಲು ಉಕ್ರೇನ್ ಮೇಲೆ ಒತ್ತಡವನ್ನು ತೀವ್ರವಾಗಿ ಹೆಚ್ಚಿಸಿದೆ.

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮತ್ತು ಯುದ್ಧಕ್ಕೆ ತ್ವರಿತ ಅಂತ್ಯ ಹಾಡಲು ಪ್ರಯತ್ನಿಸುತ್ತಿರುವ ಟ್ರಂಪ್ ನಡುವಿನ ಸಾರ್ವಜನಿಕ ಘರ್ಷಣೆಯ ಕೆಲವೇ ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಅಮೆರಿಕದ ಈ ನಿರ್ಧಾರವು ಉಕ್ರೇನ್‌ಗೆ ಸಂಕಷ್ಟ ತಂದೊಡ್ಡಿದೆ. ಅಮೆರಿಕದ ಶಸ್ತ್ರಾಸ್ತ್ರ ನೆರವಿನಲ್ಲಿ ಅಡಚಣೆಯಾದರೆ, ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸುವುದು ಉಕ್ರೇನ್‌ಗೆ ಕಷ್ಟವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯಪಾಲರ ಹೆಸರಲ್ಲಿ ಬಿಜೆಪಿ ಅಧಿಕ ಪ್ರಸಂಗ

ಅಮೆರಿಕ ಅಧ್ಯಕ್ಷರು ಶಾಂತಿಯತ್ತ ಗಮನಹರಿಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ನಮ್ಮ ಪಾಲುದಾರರು ಸಹ ಆ ಗುರಿಗೆ ಬದ್ಧರಾಗಿರಬೇಕು ಎಂದು ಶ್ವೇತಭವನದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಕ್ರೇನ್‌ಗೆ ಸೇನಾ ನೆರವನ್ನು ಸ್ಥಗಿತಗೊಳಿಸುವಂತೆ ಟ್ರಂಪ್ ಅವರು ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಅವರಿಗೆ ಆದೇಶಿಸಿದ್ದಾರೆ. ನೆರವನ್ನು ಶಾಶ್ವತವಾಗಿ ರದ್ದುಗೊಳಿಸುತ್ತಿಲ್ಲವೆಂದೂ ತಿಳಿಸಿದ್ದಾರೆ.

ಶುಕ್ರವಾರ ಅಮೆರಿಕದ ಓವಲ್ ಕಚೇರಿಯಲ್ಲಿ ಟ್ರಂಪ್ ಮತ್ತು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ನಡುವೆ ನಡೆದ ಚರ್ಚೆ , ವಾಕ್ಸಮರಕ್ಕೆ ತಿರುಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...