ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಡೊನಾಲ್ಡ್​ ಟ್ರಂಪ್ ಸಹಿ

Date:

ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಅಧಿಕಾರ ಸ್ವೀಕರಿಸಿದ ಕ್ಷಣವೇ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಆದೇಶಕ್ಕೆ ಸಹಿ ಹಾಕಿದರು.

ಕೊರೊನಾ ಸಮಯದಲ್ಲಿ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆ ಮೇಲೆ ತೀವ್ರ ದಾಳಿ ನಡೆಸುತ್ತಿದ್ದರು. ಶ್ವೇತ ಭವನದಲ್ಲಿ ಆದೇಶಕ್ಕೆ ಸಹಿ ಹಾಕಿದ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯು ಅಮೆರಿಕದ ವಿರುದ್ಧ ಪಕ್ಷಪಾತ ಮಾಡುತ್ತಿದೆ. ಇಲ್ಲಿ ಚೀನಾಗೆ ಹೆಚ್ಚು ಪ್ರಾಮುಖ್ಯತೆ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ನಮಗೆ ಮೋಸ ಮಾಡಿದೆ ಎಂದು ಹೇಳಿದ್ದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಅಮೆರಿಕ ಹಿಂದೆ ಸರಿಯುವುದಾಗಿ ಟ್ರಂಪ್ ಘೋಷಿಸಿದ್ದರು. ಅಧ್ಯಕ್ಷ ಟ್ರಂಪ್ ಮತ್ತೊಮ್ಮೆ ಅಮೆರಿಕವನ್ನು ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹಿಂದೆಗೆದುಕೊಳ್ಳಲಿದ್ದಾರೆ ಎಂದು ಶ್ವೇತಭವನವು ಹೇಳಿಕೆ ನೀಡಿದೆ. ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ ಕ್ಯಾಪಿಟಲ್ ಒನ್ ಅರೆನಾದಲ್ಲಿ ತಮ್ಮ ಮೊದಲ ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ರೋಹಿತ್‌ ಕಾಯ್ದೆ’ ಜಾರಿಗಾಗಿ ಆಗಬೇಕಿದೆ ‘ಜನಾಂದೋಲನ’

ಪ್ರಮಾಣವಚನ ಸ್ವೀಕರಿಸಿದ ಸುಮಾರು ಎಂಟು ಗಂಟೆಗಳ ನಂತರ ಹೊರಡಿಸಿದ ಕಾರ್ಯನಿರ್ವಾಹಕ ಆದೇಶದಲ್ಲಿ, ಕೋವಿಡ್‌ 19 ಸಾಂಕ್ರಾಮಿಕ ರೋಗವನ್ನು ವಿಶ್ವ ಆರೋಗ್ಯ ಸಂಸ್ಥೆ ತಪ್ಪಾಗಿ ನಿರ್ವಹಿಸುವುದು ಮತ್ತು ತುರ್ತಾಗಿ ಅಗತ್ಯವಿರುವ ಸುಧಾರಣೆಗಳನ್ನು ಅಳವಡಿಸಿಕೊಳ್ಳದಿರುವುದು ಸೇರಿದಂತೆ ಹಲವಾರು ಕಾರಣಗಳನ್ನು ಟ್ರಂಪ್ ಉಲ್ಲೇಖಿಸಿದ್ದಾರೆ.

ಈ ಸಮಯದಲ್ಲಿ, ಪ್ಯಾರಿಸ್ ಹವಾಮಾನ ಒಪ್ಪಂದದಿಂದ ಹಿಂದೆ ಸರಿಯಲು ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಲಾಯಿತು. ಅಧ್ಯಕ್ಷ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳಲು ತ್ವರಿತ ಕ್ರಮಗಳನ್ನು ತೆಗೆದುಕೊಂಡರು.

ಇದಕ್ಕೂ ಮುನ್ನ ಡೊನಾಲ್ಡ್​ ಟ್ರಂಪ್ ಪ್ರಮಾಣ ವಚನ ಸಮಾರಂಭ ನಡೆಯಿತು. ಸಮಾರಂಭದಲ್ಲಿ ವಿಶ್ವದ ಬೃಹತ್ ತಂತ್ರಜ್ಞಾನ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒಗಳು) ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...