ಡಾಲರ್ ಬದಲಿಗೆ ಹೊಸ ಕರೆನ್ಸಿ | ಭಾರತ ಸೇರಿ ʼಬ್ರಿಕ್ಸ್ʼ ದೇಶಗಳಿಗೆ ಶೇ.100 ಸುಂಕ; ಟ್ರಂಪ್ ಎಚ್ಚರಿಕೆ

Date:

ಬ್ರಿಕ್ಸ್ ದೇಶಗಳು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಡಾಲರ್ ಮೇಲಿನ ಅವಲಂಬನೆಯನ್ನು ತಗ್ಗಿಸುವ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ.100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಆರಂಭದಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳನ್ನು ಒಳಗೊಂಡಿದ್ದ ಬ್ರಿಕ್ಸ್‌ನಲ್ಲಿ ಬಳಿಕ ಇರಾನ್, ಸೌದಿ ಅರೇಬಿಯ, ಯುಎಇ, ಅರ್ಜೆಂಟೀನಾ, ಈಜಿಪ್ಟ್ ಮತ್ತು ಇಥಿಯೋಪಿಯಾ ಸೇರ್ಪಡೆಗೊಂಡಿವೆ.

‘ನಾವು ನೋಡುತ್ತಿರುವಂತೆ ಬ್ರಿಕ್ಸ್ ದೇಶಗಳು ಡಾಲರ್‌ನಿಂದ ದೂರ ಸರಿಯುವ ಕಲ್ಪನೆಗೆ ಇನ್ನು ಅವಕಾಶವಿಲ್ಲ’ ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಮೀಸಲು ಕರೆನ್ಸಿಗಾಗಿ ಕರೆ ನೀಡುವಲ್ಲಿ ರಷ್ಯಾ ಮತ್ತು ಚೀನಾ ಮುಂಚೂಣಿಯಲ್ಲಿದ್ದು, ಡಾಲರ್‌ಗೆ ಪರ್ಯಾಯಗಳನ್ನು ಸೃಷ್ಟಿಸುವ ಕುರಿತು ಬ್ರಿಕ್ಸ್ ದೇಶಗಳು ಧ್ವನಿಯೆತ್ತಿವೆ. ಕಳೆದ ವರ್ಷ ದಕ್ಷಿಣ ಆಫ್ರಿಕಾದಲ್ಲಿ ಮತ್ತು ಅಕ್ಟೋಬರ್‌ನಲ್ಲಿ ರಷ್ಯಾದ ಕಝನ್‌ನಲ್ಲಿ ನಡೆದ ಶೃಂಗಸಭೆಗಳಲ್ಲಿ ಬ್ರಿಕ್ಸ್ ಕರೆನ್ಸಿ ಪ್ರಸ್ತಾವವನ್ನು ಚರ್ಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಉಕ್ರೇನ್ -ರಷ್ಯಾ ಕದನ | ಮೂರನೇ ಮಹಾಯುದ್ಧಕ್ಕೆ ವೇದಿಕೆ ನಿರ್ಮಿಸುತ್ತಿರುವ ಬೈಡನ್!

‘ನೂತನ ಬ್ರಿಕ್ಸ್ ಕರೆನ್ಸಿಯನ್ನು ಸೃಷ್ಟಿಸುವುದಿಲ್ಲ ಅಥವಾ ಪ್ರಬಲ ಡಾಲರ್ ಬದಲಿಗೆ ಇತರ ಯಾವುದೇ ಕರೆನ್ಸಿಯನ್ನು ಬೆಂಬಲಿಸುವುದಿಲ್ಲ ಎಂಬ ಬದ್ಧತೆ ಈ ದೇಶಗಳಿಂದ ನಮಗೆ ಅಗತ್ಯವಿದೆ. ಇಲ್ಲದಿದ್ದರೆ ಅವು ಶೇ.100ರಷ್ಟು ಸುಂಕಗಳನ್ನು ಎದುರಿಸಬೇಕಾಗುತ್ತದೆ. ಅಂತಾರಾಷ್ಟ್ರೀಯ ಅಮೆರಿಕದ ಡಾಲರ್‌ ಅನ್ನು ಬದಲಿಸಲು ಬ್ರಿಕ್ಸ್ ದೇಶಗಳಿಗೆ ಅವಕಾಶವಿಲ್ಲ ಮತ್ತು ಯಾವುದೇ ದೇಶವು ಅದಕ್ಕಾಗಿ ಪ್ರಯತ್ನಿಸಿದರೆ ಅದು ಅಮೆರಿಕದ ಅದ್ಭುತ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ವಿದಾಯ ಹೇಳಬೇಕಾಗುತ್ತದೆ’ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ.

ಅಕ್ರಮ ವಲಸೆ ಮತ್ತು ಮಾದಕ ದ್ರವ್ಯ ಕಳ್ಳಸಾಗಣೆ ಸಮಸ್ಯೆಗಳಿಗಾಗಿ ಕಳೆದ ವಾರ ಮೆಕ್ಸಿಕೊ,ಕೆನಡಾ ಮತ್ತು ಚೀನಾಗಳನ್ನು ದೂಷಿಸಿದ್ದ ಟ್ರಂಪ್,ಈ ದೇಶಗಳಿಂದ ಆಮದಾಗುವ ಸರಕುಗಳ ಮೇಲಿನ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...