ಭಾರತ-ಅಮೆರಿಕ ವ್ಯಾಪಾರ ಮಾತುಕತೆ ಕುರಿತು ಟ್ರಂಪ್ ಅಸಮಾಧಾನ

Date:

ಭಾರತದ ಜೊತೆಗಿನ ವ್ಯಾಪಾರ ಮಾತುಕತೆಗಳಲ್ಲಿ ಯಾವುದೇ ಪ್ರಗತಿ ಕಂಡಿಲ್ಲವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೇಸರಗೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಭಾರತದ ಮೇಲೆ ವಿಧಿಸಲಾದ 25%ರಷ್ಟು ಸುಂಕವು ಪರಿಸ್ಥಿತಿಯನ್ನು ನಿಭಾಯಿಸಲು ಪರಿಹಾರ ಒದಗಿಸುತ್ತದೆ ಎಂದು ಶ್ವೇತಭವನದ ಆರ್ಥಿಕ ಸಲಹೆಗಾರರು ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅಮೆರಿಕದ ರಾಷ್ಟ್ರೀಯ ಆರ್ಥಿಕ ಪರಿಷತ್ತಿನ ನಿರ್ದೇಶಕ ಕೆವಿನ್ ಹ್ಯಾಸೆಟ್, ”ಭಾರತ ಮತ್ತು ಅಮೆರಿಕ ನಡುವಿನ ದ್ವಿಪಕ್ಷೀಯ ಒಪ್ಪಂದಕ್ಕೆ ಸಂಬಂಧಿಸಿದಂತೆ ಎರಡು ಸುತ್ತಿನ ಮಾತುಕತೆಗಳು ನಡೆದಿವೆ. ಆದರೆ, ಎರಡೂ ವಿಫಲವಾಗಿವೆ. ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ ಜೊತೆ ಯುದ್ಧದಲ್ಲಿರುವ ರಷ್ಯಾ ಮೇಲೆ ಅಮೆರಿಕ ಮತ್ತು ನ್ಯಾಟೋ ನಿರ್ಬಂಧ ಹೇರಿವೆ. ನಿರ್ಬಂಧದ ಹೊರತಾಗಿಯೂ ಭಾರತವು ರಷ್ಯಾದಿಂದ ಕಚ್ಚಾತೈಲ ಮತ್ತು ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುತ್ತಿದೆ. ಈ ಖರೀದಿಯನ್ನು ತಡೆಯಲು ಅಮೆರಿಕ ಹವಣಿಸುತ್ತಿದ್ದು, ಆಗಸ್ಟ್‌ 1ರಿಂದ ಭಾರತದ ಮೇಲೆ 25% ತೆರಿಗೆ ಮತ್ತು ದಂಡ ವಿಧಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಆಪರೇಷನ್ ಸಿಂಧೂರ | ವಿಪಕ್ಷಗಳ ಗಂಭೀರ ಪ್ರಶ್ನೆಗಳಿಗೆ ಮೋದಿ ನಿರುತ್ತರ!

ಈ ಸುಂಕ ಹೇರಿಕೆಯ ಹಿಂದೆ, ರಷ್ಯಾ ಜೊತೆಗಿನ ಭಾರತದ ವ್ಯಾಪಾರ ಸಂಬಂಧವನ್ನು ತಡೆಯುವುದು ಮಾತ್ರವಲ್ಲದೆ, ಭಾರತವು ತನ್ನೆಲ್ಲ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಮಾಡುವ ಅಮೆರಿಕದ ಹುನ್ನಾರವೂ ಇದೆ ಎಂದು ಹೇಳಲಾಗಿದೆ.

ಈ ಹಿಂದೆ, ಜಪಾನ್, ಬ್ರಿಟನ್ ಹಾಗೂ ಯೂರೋಪಿಯನ್ ಒಕ್ಕೂಟದ ವಿರುದ್ಧವೂ ಟ್ರಂಪ್ ಇದೇ ರೀತಿಯ ತಂತ್ರಗಳನ್ನು ಬಳಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...