ಉಸ್ಮಾನ್ ಹಾದಿ ಹತ್ಯೆ | ಮೇಘಾಲಯ ಮೂಲಕ ಭಾರತಕ್ಕೆ ಇಬ್ಬರು ಆರೋಪಿಗಳು ಪರಾರಿ: ಬಾಂಗ್ಲಾದೇಶ ಪೊಲೀಸರ ಆರೋಪ

Date:

ಬಾಂಗ್ಲಾದೇಶದ ಯುವ ನಾಯಕ, ‘ಇಂಕಿಲಾಬ್ ಮಂಚ’ ಸಂಘಟನೆಯ ಸಂಚಾಲಕ ಶರೀಫ್ ಉಸ್ಮಾನ್ ಹಾದಿ ಹತ್ಯೆಯು ಭಾರತ ಮತ್ತು ಬಾಂಗ್ಲಾದೇಶದ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. “ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರು ಮೇಘಾಲಯ ಗಡಿಯ ಮೂಲಕ ಭಾರತಕ್ಕೆ ಪರಾರಿಯಾಗಿದ್ದಾರೆ” ಎಂದು ಬಾಂಗ್ಲಾದೇಶದ ಢಾಕಾ ಮೆಟ್ರೋಪಾಲಿಟನ್ ಪೊಲೀಸ್ (ಡಿಎಂಪಿ) ತಿಳಿಸಿದೆ. ಆದರೆ ಭಾರತ ಮಾತ್ರ ಹಾದಿ ಹತ್ಯೆ ಆರೋಪಿಗಳಿಗೆ ಆಶ್ರಯ ನೀಡುತ್ತಿರುವ ಆರೋಪವನ್ನು ತಳ್ಳಿಹಾಕಿದೆ.

2025ರ ಡಿಸೆಂಬರ್ 12ರಂದು ಬಾಂಗ್ಲಾದೇಶದ ಯುವ ನಾಯಕ ಉಸ್ಮಾನ್ ಹಾದಿ ಹತ್ಯೆ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಢಾಕಾದಲ್ಲಿ ಚಿಕಿತ್ಸೆ ಪಡೆಯುತ್ತದ್ದ ಶರೀಫ್ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಹಾದಿ ಗುರುವಾರ(ಡಿ.18) ಸಾವನ್ನಪ್ಪಿದ್ದಾರೆ. ಇದಾದ ಬಳಿಕ ಮತ್ತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಇದನ್ನು ಓದಿದ್ದೀರಾ? ಬಾಂಗ್ಲಾದೇಶ ಹಿಂಸಾಚಾರ: ಭಾರತದ ವಿರುದ್ಧ ಘೋಷಣೆಗಳು ಕೇಳಿಬರುತ್ತಿರುವುದೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾಕಾರರು ಪ್ರಮುಖ ದಿನಪತ್ರಿಕೆಗಳ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ, ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದ ಸ್ಥಾಪಕ ಪಿತಾಮಹ, ಮೊದಲ ಅಧ್ಯಕ್ಷರು, ಸ್ವಾತಂತ್ರ್ಯ ಹೋರಾಟಗಾರರಾದ ಶೇಖ್ ಮುಜಿಬುರ್ ರೆಹಮಾನ್ ನಿವಾಸಕ್ಕೂ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಈ ನಡುವೆ ಭಾರತದ ವಿರುದ್ದವೂ ಘೋಷಣೆಗಳು ಕೇಳಿಬಂದಿದೆ. ಭಾರತ ಆರೋಪಿಗಳಿಗೆ ಆಶ್ರಯ ನೀಡುತ್ತಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ, ಢಾಕಾ ಡಿಎಂಪಿ ಹೆಚ್ಚುವರಿ ಆಯುಕ್ತ ಎಸ್ಎನ್ ನಜ್ರುಲ್ ಇಸ್ಲಾಂ ಮಾತನಾಡಿ, “ಶಂಕಿತರಾದ ಫೈಸಲ್ ಕರೀಮ್ ಮಸೂದ್ ಮತ್ತು ಅಲಮ್‌ಗಿರ್ ಶೇಖ್ ಸ್ಥಳೀಯ ಸಹಚರರ ಸಹಾಯದಿಂದ ಮೈಮೆನ್‌ಸಿಂಗ್‌ನ ಹಲುಘಾಟ್ ಗಡಿಯ ಮೂಲಕ ಭಾರತದ ಗಡಿಯನ್ನು ದಾಟಿದ್ದಾರೆ. ಭಾರತಕ್ಕೆ ಹೋದ ಬಳಿಕ ಮೊದಲು ಪೂರ್ಣಿ ಎಂಬ ವ್ಯಕ್ತಿ ಅವರನ್ನು ಸ್ವಾಗತಿಸಿದ್ದಾರೆ. ನಂತರ, ಟ್ಯಾಕ್ಸಿ ಚಾಲಕ ಸಾಮಿ ಮೇಘಾಲಯದ ತುರಾ ನಗರಕ್ಕೆ ಆರೋಪಿಗಳನ್ನು ಕರೆದೊಯ್ದಿದ್ದಾರೆ” ಎಂದು ಪೊಲೀಸರು ದೂರಿದ್ದಾರೆ.

ಇದನ್ನು ಓದಿದ್ದೀರಾ? ಬಾಂಗ್ಲಾ ಕ್ರಾಂತಿಯ ಕೆನ್ನಾಲಿಗೆಗೆ ಬಲಿಯಾದ ಹಾದಿ; ‘ಮೋಸ್ಟ್ ವಾಂಟೆಡ್ʼ ಫೈಸಲ್ ಕರೀಮ್ ಯಾರು?

ಪೂರ್ಣಿ ಮತ್ತು ಸಮಿ ಇಬ್ಬರನ್ನೂ ಭಾರತದಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೂ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. ಹಾದಿ ಹತ್ಯೆಯ ಇಬ್ಬರು ಪ್ರಮುಖ ಶಂಕಿತರ ಬಂಧನ ಮತ್ತು ಹಸ್ತಾಂತರಕ್ಕೆ ಸಂಬಂಧಿಸಿ ಭಾರತದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಶೇಖ್ ಹಸೀನಾ ಸರ್ಕಾರದ ಪತನಕ್ಕೆ ಕಾರಣವಾದ ಕಳೆದ ವರ್ಷದ ಹೋರಾಟದ ನೇತೃತ್ವ ವಹಿಸಿದ್ದ ವಿದ್ಯಾರ್ಥಿ ನಾಯಕರುಗಳಲ್ಲಿ ಉಸ್ಮಾನ್ ಹಾದಿ ಕೂಡಾ ಒಬ್ಬರು. ಈಗಾಗಲೇ ಭಾರತ ಶೇಖ್ ಹಸೀನಾರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸದ ವಿಚಾರದಲ್ಲಿ ಬಾಂಗ್ಲಾದೇಶದ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಇದೀಗ ವಿದ್ಯಾರ್ಥಿ ನಾಯಕನ ಹತ್ಯೆ ಆರೋಪಿಗಳೂ ಭಾರತದಲ್ಲಿ ಇದ್ದಾರೆ ಎಂಬುದು ತೀವ್ರ ಚರ್ಚೆಗೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...