23 ಮಂದಿ ಇದ್ದ ಅಮೆರಿಕದ ಸೇನಾ ವಿಮಾನ ಆಸ್ಟ್ರೇಲಿಯಾದಲ್ಲಿ ಪತನ: ಓರ್ವ ಗಂಭೀರ

Date:

  • ಉತ್ತರ ಆಸ್ಟ್ರೇಲಿಯಾದ ಡಾರ್ವಿನ್ ಎಂಬಲ್ಲಿರುವ ಟಿವಿ ದ್ವೀಪದಲ್ಲಿ ಘಟನೆ
  • ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಆಸ್ಟೇಲಿಯಾ ಸೇನೆಯ ಅಧಿಕಾರಿಗಳು

ಉತ್ತರ ಆಸ್ಟ್ರೇಲಿಯಾದ ಗಡಿ ಭಾಗದಲ್ಲಿ ತರಬೇತಿ ಕೈಗೊಂಡಿದ್ದ ವೇಳೆ ಅಮೆರಿಕ ಸೇನೆಯ ವಿಮಾನವೊಂದು ಪತನಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ಒಬ್ಬ ಸಿಬ್ಬಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಇನ್ನಿಬ್ಬರು ಗಾಯಗೊಂಡಿರುವುದಾಗಿ ಆಸ್ಟ್ರೇಲಿಯಾದ ಸುದ್ದಿ ಮಾಧ್ಯಮ ಎಬಿಸಿ ನ್ಯೂಸ್ ವರದಿ ಮಾಡಿದೆ.

ಉತ್ತರ ಆಸ್ಟ್ರೇಲಿಯಾದ ಗಡಿ ಭಾಗದಲ್ಲಿ ಸೇನಾ ತರಬೇತಿ ಕೈಗೊಂಡಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ವಿಮಾನದಲ್ಲಿ 23 ಮಂದಿ ಇದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಡಾರ್ವಿನ್‌ನ ರೋಯಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಆಸ್ಟ್ರೇಲಿಯಾದ ಡಾರ್ವಿನ್ ಎಂಬಲ್ಲಿರುವ ತಿವಿ ದ್ವೀಪದಲ್ಲಿ ಘಟನೆ ನಡೆದಿದ್ದು, ಹಲವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

”ಘಟನೆಯ ಬೆಳಗ್ಗೆ 9ರ ಸುಮಾರಿಗೆ ನಡೆದಿದೆ. ಈ ಬಗ್ಗೆ ಮಾಹಿತಿ ಪಡೆದ ಕೂಡಲೇ ಎನ್‌ ಟಿ ಪೊಲೀಸರು ಮತ್ತು ತುರ್ತು ರಕ್ಷಣಾ ಘಟಕದ ಸಿಬ್ಬಂದಿಗಳು ಈಗಾಗಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ವಿಮಾನದಲ್ಲಿದ್ದವರನ್ನು ಎಲ್ಲ ರೀತಿಯ ಪ್ರಯತ್ನಗಳ ಮೂಲಕ ರಕ್ಷಣೆ ಮಾಡಲಾಗುವುದು. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತೇವೆ” ಎಂದು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ಹಾಗೂ ಅಮೆರಿಕ ಸೇನೆಗಳು ಜಂಟಿಯಾಗಿ ಸರಣಿ ಯುದ್ಧಾಭ್ಯಾಸ ನಡೆಸುತ್ತಿವೆ. ಈ ಪೈಕಿ ಯುದ್ಧ ವಿಮಾನಗಳನ್ನು ಬಳಸಿಕೊಂಡು ಪ್ರಿಡೇಟರ್ಸ್‌ ರನ್ ಚಟುವಟಿಕೆ ನಡೆಯುತ್ತಿತ್ತು. ಇದಕ್ಕಾಗಿ ಅಮೆರಿಕ ಸೇನೆಯ ಪ್ರತಿಷ್ಠಿತ ಓಸ್‌ಪ್ರೇ ಯುದ್ಧ ವಿಮಾನ ಬಳಕೆಯಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...