ಇಂಗ್ಲಿಷ್ ಮಾತನಾಡದ ಭಾರತೀಯರನ್ನು ಗಡಿಪಾರು ಮಾಡಿ ಎಂದ ಮಹಿಳೆಗೆ ತಿರುಗೇಟು

Date:

ಇಂಗ್ಲಿಷ್ ಮಾತನಾಡದ ಭಾರತೀಯರನ್ನು ಗಡಿಪಾರು ಮಾಡಿ ಎಂದು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿನಿಯೊಬ್ಬರು ಹಾಕಿರುವ ಪೋಸ್ಟಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಲೂಸಿ ವೈಟ್ ಎಂಬ ಕೇಂಬ್ರಿಡ್ಜ್ ವಿವಿಯ ಹಳೆಯ ವಿದ್ಯಾರ್ಥಿನಿ ಎಕ್ಸ್‌ನಲ್ಲಿ ಪ್ರಕಟಿಸಿರುವ ತಮ್ಮ ಪೋಸ್ಟ್‌ನಲ್ಲಿ, “ಲಂಡನ್ ನಗರದ ಹೀಥ್ರೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾರೊಬ್ಬರಿಗೂ ಸರಿಯಾಗಿ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ. ವಿಮಾನ ನಿಲ್ದಾಣದಲ್ಲಿ ಕೆಲಸ ನಿರ್ವಹಿಸುವ ಹೆಚ್ಚಿನವರು ಭಾರತೀಯರು ಅಥವಾ ಏಷ್ಯಾ ಮೂಲದವರು. ಇವರು ಇಂಗ್ಲಿಷ್ ಮಾತನಾಡುವುದಿಲ್ಲ, ಇವರನ್ನೆಲ್ಲಾ ಗಡಿಪಾರು ಮಾಡಬೇಕು” ಎಂದು ಬರೆದುಕೊಂಡಿದ್ದಾರೆ. ಲೂಸಿ ವೈಟ್ ಹಾಕಿರುವ ಜನಾಂಗೀಯ ನಿಂದನೆಯ ಈ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಾನು ಲಂಡನ್ ನಗರದ ಹೀಥ್ರೂ ವಿಮಾನ ನಿಲ್ದಾಣಕ್ಕೆ ಬಂದಿಳಿದೆ. ಇಲ್ಲಿ ಕೆಲಸ ನಿರ್ವಹಿಸುವ ಹೆಚ್ಚಿನವರು ಒಂದೋ ಭಾರತೀಯರು ಇಲ್ಲವೇ ಏಷ್ಯಾ ಮೂಲದವರು. ಅವರು ಇಂಗ್ಲಿಷ್‌ನಲ್ಲಿ ಮಾತನಾಡುವುದಿಲ್ಲ. ನಾನು ಅವರ ಬಳಿ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ತಾಕೀತು ಮಾಡಿದೆ. ಅದಕ್ಕೆ ನೀವು ದೊಡ್ಡ ಜನಾಂಗೀಯವಾದಿ ಎಂದು ಹೇಳಿದರು” ಎಂದು ಈ ಮಹಿಳೆಯ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿಶ್ವಾಸಾರ್ಹತೆ ಕಳೆದುಕೊಂಡ ಚುನಾವಣಾ ಆಯೋಗದ ಅವಶ್ಯಕತೆ ಇದೆಯೇ?

“ಅವರ ಮಾತಿಗೆ ನಾನು ಸರಿ ಎಂದು ಹೇಳಿದ್ದೇನೆ, ಜನಾಂಗೀಯ ಕಾರ್ಡ್ ಅನ್ನು ಅವರು ಬಳಸುತ್ತಿದ್ದಾರೆ. ಬ್ರಿಟನ್ ಹೀಥ್ರೂ ನಿಲ್ದಾಣದ ಪ್ರಮುಖ ದ್ವಾರದಲ್ಲಿ ಇವರು ಯಾಕೆ ಕೆಲಸ ಮಾಡುತ್ತಿದ್ದಾರೆ, ಇವರನ್ನು ಗಡೀಪಾರು ಮಾಡಿ” ಎಂದಿದ್ದಾರೆ.

“ಹೀಥ್ರೂ ವಿಮಾನ ನಿಲ್ದಾಣದ ಬಗ್ಗೆ ನನಗೆ ಚೆನ್ನಾಗಿ ಅನುಭವವಿದೆ, ಈ ಮಹಿಳೆ ಸುಮ್ಮನೆ ಪ್ರಚಾರಕ್ಕಾಗಿ ಹೀಗೆ ಮಾಡುತ್ತಿದ್ದಾರೆ. ಅಲ್ಲಿ ಎಂತಹ ಕಟ್ಟುನಿಟ್ಟಿನ ತಪಾಸಣೆ ಇರಲಿದೆ ಎನ್ನುವುದು ನನಗೆ ತಿಳಿದಿದೆ. ಎಲ್ಲ ಪ್ರಯಾಣಿಕರಿಗೆ ಉತ್ತಮ ಸೌಕರ್ಯವನ್ನು ಕೊಡಲು ಸಾಧ್ಯವಾದ ಎಲ್ಲ ಪ್ರಯತ್ನವನ್ನು ಅವರು ಮಾಡುತ್ತಾರೆ” ಎಂದು ಈಕೆಯ ಪೋಸ್ಟಿಗೆ, ವ್ಯಕ್ತಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.

ಲೂಸಿ ವೈಟ್ ಎಕ್ಸ್ ಪೋಸ್ಟಿಗೆ ಪರ ಹಾಗೂ ವಿರೋಧವಾಗಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಪ್ರತಿಕ್ರಿಯೆಗಳು ಬಂದಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...