ಉಕ್ರೇನ್ | ಹೋಟೆಲ್ ಮೇಲೆ ರಷ್ಯಾ ಕ್ಷಿಪಣಿ ದಾಳಿ: ಸುದ್ದಿ ಸಂಸ್ಥೆ ಸುರಕ್ಷತಾ ಸಲಹೆಗಾರ ಸಾವು

Date:

ಉಕ್ರೇನ್‌ ಯುದ್ಧದ ಬಗ್ಗೆ ವರದಿ ಮಾಡುತ್ತಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆ ಸುರಕ್ಷತಾ ಸಲಹೆಗಾರ ಪೂರ್ವ ಉಕ್ರೇನ್ ನಗರದ ಕ್ರಾಮಾಟೋರ್ಸ್ಕ್‌ನಲ್ಲಿರುವ ಹೋಟೆಲ್‌ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯ ವೇಳೆ ಸಾವನ್ನಪ್ಪಿದ್ದಾರೆ.

ಮೃತ ವರದಿಗಾರ ರಿಯಾನ್ ಇವಾನ್ಸ್ ರಷ್ಯಾದ ದಾಳಿಯಿಂದ ಮೃತರಾದರೆ ಇನ್ನಿಬ್ಬರು ರಾಯಿಟರ್ಸ್ ಪತ್ರಕರ್ತರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಭಾನುವಾರ ತಿಳಿಸಿದೆ. ಇವಾನ್ಸ್ ಏಜೆನ್ಸಿಯ ಸುರಕ್ಷತಾ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು.

ಶನಿವಾರ ಆರು ಜನರ ತಂಡದ ಜೊತೆ ಹೋಟೆಲ್ ಸಫೈರ್‌ನಲ್ಲಿ ಇವಾನ್ಸ್ ತಂಗಿದ್ದರು. ಇದೇ ಹೋಟೆಲ್‌ಗೆ ರಷ್ಯಾ ಕ್ಷಿಪಣಿ ದಾಳಿ ನಡೆಸಿದ್ದು ಇವಾನ್ಸ್ ಮೃತರಾಗಿದ್ದಾರೆ ಎಂದು ರಾಯಿಟರ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಷ್ಯಾ ಉಕ್ರೇನ್ ಯುದ್ಧ: ರಷ್ಯಾ ಸೇನಾ ಶಿಬಿರದಲ್ಲಿದ್ದ ಭಾರತೀಯ ಶೆಲ್ ದಾಳಿಗೆ ಬಲಿ

ಏಜೆನ್ಸಿಯ ಇಬ್ಬರು ಪತ್ರಕರ್ತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

“ನಾವು ದಾಳಿಯ ಕುರಿತು ಹೆಚ್ಚಿನ ಮಾಹಿತಿಯನ್ನು ತುರ್ತಾಗಿ ಕಲೆಹಾಕುತ್ತಿದ್ದೇವೆ. ನಾವು ನಮ್ಮ ಸಹೋದ್ಯೋಗಿಗಳು ಮತ್ತು ಅವರ ಕುಟುಂಬಗಳನ್ನು ಬೆಂಬಲಿಸುತ್ತಿದ್ದೇವೆ” ಎಂದು ರಾಯಿಟರ್ಸ್ ಹೇಳಿದೆ.

38 ವರ್ಷದ ಇವಾನ್ಸ್ ಮಾಜಿ ಬ್ರಿಟಿಷ್ ಸೈನಿಕ ಆಗಿದ್ದು, 2022ರಿಂದ ರಾಯಿಟರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಉಕ್ರೇನ್, ಇಸ್ರೇಲ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್ ಸೇರಿದಂತೆ ವಿಶ್ವದಾದ್ಯಂತ ಸುರಕ್ಷತೆಯ ಕುರಿತು ಅದರ ಪತ್ರಕರ್ತರಿಗೆ ಇವಾನ್ಸ್ ಸಲಹೆ ನೀಡಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...