ಪಪುವಾ ನ್ಯೂಗಿನಿಯಾದಲ್ಲಿ ಭೂಕುಸಿತ: 670ಕ್ಕೂ ಹೆಚ್ಚು ಸಾವು

Date:

ಪಪುವಾ ನ್ಯೂಗಿನಿಯಾ ದೇಶದಲ್ಲಿ ಭೂಕುಸಿತವುಂಟಾಗಿ 670ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಅಂದಾಜಿಸಿದೆ.

ವಿಶ್ವಸಂಸ್ಥೆಯ ವಲಸಿಗ ಸಂಸ್ಥೆ ಯೋಜನೆಯ ಮುಖ್ಯಸ್ಥ ಸೆರಾನ್‌ ಅಕ್ಟೋಪ್ರಾಕ್‌, ಯಂಬಾಲಿ ಮತ್ತು ಎಂಗಾ ಪ್ರಾಂತ್ಯದ ಅಂಕಿಅಂಶಗಳ ಆಧಾರದ ಮೇಲೆ ಭೂಕುಸಿತದಿಂದ 150ಕ್ಕೂ ಹೆಚ್ಚು ಮನೆಗಳು ನೆಲಸಮಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈ ಮೊದಲು 60 ಮನೆಗಳು ಮಾತ್ರ ನೆಲಸಮಗೊಂಡಿವೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 670ಕ್ಕೂ ಹೆಚ್ಚು ಮಂದಿ ಮಣ್ಣಿನೊಳಗೆ ಹೂತುಹೋಗಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಅಧಿಕಾರಿಗಳು ಸಾವಿನ ಸಂಖ್ಯೆ 100 ದಾಟಿರಬಹುದು ಎಂದು ಈ ಮೊದಲು ಅಂದಾಜಿಸಿದ್ದರು. ಭಾನುವಾರದವರೆಗೂ 6 ಮೃತದೇಹಗಳನ್ನು ಮಾತ್ರ ಹೊರತೆಗೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಪುವಾ ನ್ಯೂಗಿನಿಯಾದ ತುರ್ತು ನಿರ್ವಹಣ ಘಟಕದ ಅಧಿಕಾರಿಗಳು ಬದುಕುಳಿದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಪಪುವಾ ನ್ಯೂಗಿನಿಯಾ ಸರ್ಕಾರ ಹೆಚ್ಚಿನ ಅಂತಾರಾಷ್ಟ್ರೀಯ ನೆರವಿಗಾಗಿ  ಅಧಿಕೃತ ಮನವಿ  ಅಗತ್ಯವಿದೆಯೆ ಎಂಬುದನ್ನು ಪರಿಗಣಿಸುತ್ತಿದೆ.

ಭೂಕುಸಿತವುಂಟಾಗಿರುವ ಪ್ರದೇಶಗಳ ಅವಶೇಷಗಳಡಿ ಇನ್ನು ಹಲವರು ಬದುಕುಳಿದಿರುವ ಸಂಭವವಿದ್ದು,ಕುಟುಂಬದ ಸದಸ್ಯರು ತಮ್ಮವರ ರಕ್ಷಣೆಗಾಗಿ ಅಳಲು ತೋಡಿಕೊಂಡಿದ್ದಾರೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಣೆಯಾದ ಮಹಿಳೆಯರು ಮತ್ತು ಸಾಮಾಜಿಕ ವಿಡಂಬನೆ

ಪರಿಹಾರ ಕೇಂದ್ರಗಳು ಹಾಗೂ ಅವಶೇಷಗಳನ್ನು ಸಂಗ್ರಹಿಸಲು ನಾಲ್ಕು ಫುಟ್‌ಬಾಲ್‌ ಮೈದಾನಗಳನ್ನು ಬಳಸಿಕೊಳ್ಳಲಾಗಿದೆ. ಅವಶೇಷಗಳಡಿ ಕೆಲಸ ನಿರ್ವಹಿಸುವುದು ಅತ್ಯಂತ ಅಪಾಯಕಾರಿಯಾದ ಕೆಲಸವಾಗಿದ್ದು,ಭೂಕುಸಿತವು ಇನ್ನೂ ಮುಂದುವರೆಯುತ್ತಿದೆ ಎಂದು ಸೆರಾನ್‌ ಅಕ್ಟೋಪ್ರಾಕ್‌ ಹೇಳಿದ್ದಾರೆ.

ಭೂಕುಸಿತಗೊಂಡಿರುವ ಪ್ರದೇಶಗಳಿಗೆ ಆಹಾರ, ನೀರು ಹಾಗೂ ಇತರ ಅಗತ್ಯ ಸೌಕರ್ಯಗಳನ್ನು 60 ಕಿ.ಮೀ ದೂರವಿರುವ ಪಪುವಾ ನ್ಯೂಗಿನಿಯಾ ರಾಜಧಾನಿ ವಬಾಗ್‌ನಿಂದ ಸೇನೆಯ ಭದ್ರತೆಯೊಂದಿಗೆ ರವಾನಿಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...