ಟ್ರಂಪ್ ಮಧ್ಯಪ್ರವೇಶಕ್ಕೆ ಇರಾನ್‌ ಮಾಜಿ ದೊರೆಯ ಪುತ್ರ ಆಗ್ರಹ

Date:

ಇರಾನ್‌ನ ಕೊನೆಯ ದೊರೆ ಮೊಹಮ್ಮದ್ ರೆಝಾ ಪಹ್ಲವಿ ಅವರ ಗಡೀಪಾರುಗೊಂಡ ಪುತ್ರ ರೆಝಾ ಪಹ್ಲವಿ ಅವರು, ಇರಾನ್‌ನಲ್ಲಿ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶುಕ್ರವಾರ ಸಂಪರ್ಕಿಸಿ ತಕ್ಷಣ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.

ಇರಾನ್‌ನಲ್ಲಿ ನಡೆಯುತ್ತಿರುವ ಸ್ಥಿತಿಗತಿಗಳನ್ನು ವಿವರಿಸಿದ ಪಹ್ಲವಿ, ದೇಶದಲ್ಲಿ ಇಂಟರ್ನೆಟ್ ಹಾಗೂ ಲ್ಯಾಂಡ್‌ಲೈನ್ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದ್ದು, ಪ್ರತಿಭಟನಾಕಾರರು ಗುಂಡೇಟು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಟ್ರಂಪ್ ಅವರ “ತುರ್ತು ಮತ್ತು ತಕ್ಷಣದ ಗಮನ, ಬೆಂಬಲ ಹಾಗೂ ಕ್ರಮ”ಕ್ಕೆ ಮನವಿ ಮಾಡಿದ್ದಾರೆ.

“ಮಾನ್ಯ ಅಧ್ಯಕ್ಷರೇ, ಇದು ನಿಮ್ಮ ಗಮನ, ಬೆಂಬಲ ಮತ್ತು ಕ್ರಮಕ್ಕೆ ಮಾಡುತ್ತಿರುವ ತುರ್ತು ಹಾಗೂ ತಕ್ಷಣದ ಕರೆ. ನಿನ್ನೆ ರಾತ್ರಿ ಲಕ್ಷಾಂತರ ಸಾಹಸಿ ಇರಾನಿಗರು ಬೀದಿಗಿಳಿದು ಗುಂಡುಗಳನ್ನು ಎದುರಿಸುತ್ತಿರುವುದನ್ನು ನೀವು ನೋಡಿರಬಹುದು. ಇಂದು ಅವರು ಗುಂಡೇಟು ಮಾತ್ರವಲ್ಲದೆ, ಸಂಪೂರ್ಣ ಸಂಪರ್ಕ ನಿಷೇಧವನ್ನೂ ಎದುರಿಸುತ್ತಿದ್ದಾರೆ. ಇಂಟರ್ನೆಟ್ ಇಲ್ಲ, ದೂರವಾಣಿ ಸಂಪರ್ಕವೂ ಇಲ್ಲ,” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್‌; ಸರ್ಕಾರದ ಹೆಂಗರುಳಿನ ಯೋಜನೆಗೆ ಬೇಕಿದೆ ಅಧಿಕಾರಿಗಳ ಬದ್ಧತೆ

“ಜನರ ಕೈಯಲ್ಲಿ ತನ್ನ ಆಡಳಿತ ಅಂತ್ಯವಾಗಲಿದೆ ಎಂಬ ಭೀತಿಯಿಂದ, ಅಲಿ ಖಮೇನಿಯವರು ಜನರ ಮೇಲೆ ಕ್ರೂರ ದಮನದ ಬೆದರಿಕೆ ಒಡ್ಡಿದ್ದಾರೆ. ಪ್ರತಿಭಟನಾಕಾರರನ್ನು ಬೆಂಬಲಿಸುವ ನಿಮ್ಮ ಬಲಿಷ್ಠ ಘೋಷಣೆಯೇ ಆಡಳಿತವನ್ನು ಆತಂಕಕ್ಕೀಡು ಮಾಡಿದೆ. ಈ ಯುವ ಹೀರೊಗಳನ್ನು ಹತ್ಯೆ ಮಾಡಲು ಸಂಪರ್ಕ ನಿಷೇಧವನ್ನು ಅವರು ಬಳಸುತ್ತಿದ್ದಾರೆ,” ಎಂದು ಆರೋಪಿಸಿದ್ದಾರೆ.

ಇರಾನ್ ಜನರು ಮತ್ತೊಮ್ಮೆ ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದು, “ಸಮಯ ಅತ್ಯಂತ ಅಮೂಲ್ಯವಾಗಿದೆ” ಎಂದು ಹೇಳಿ ಟ್ರಂಪ್ ಅವರನ್ನು ತಕ್ಷಣ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

“ನಾನು ಜನರನ್ನು ಸ್ವಾತಂತ್ರ್ಯಕ್ಕಾಗಿ ಹೋರಾಡಲು ಬೀದಿಗೆ ಕರೆತಂದಿದ್ದೇನೆ. ಭಾರಿ ಸಂಖ್ಯೆಯಲ್ಲಿ ಬೀದಿಗಿಳಿದು ಭದ್ರತಾ ಪಡೆಗಳನ್ನು ಮಣಿಸಲು ಅವರು ನಿನ್ನೆ ಯಶಸ್ವಿಯಾಗಿದ್ದಾರೆ. ನಿಮ್ಮ ಎಚ್ಚರಿಕೆಯೇ ಆಡಳಿತದ ಪಡೆಗಳನ್ನು ಹಿಂದೆ ಸರಿಯುವಂತೆ ಮಾಡಿದೆ. ಆದರೆ ಸಮಯ ಅತ್ಯಂತ ಮುಖ್ಯ. ಜನರು ಮತ್ತೆ ಬೀದಿಗಿಳಿಯಲಿದ್ದಾರೆ. ದಯವಿಟ್ಟು ಅವರಿಗೆ ಸಹಾಯ ಮಾಡಿ,” ಎಂದು ಅವರು ಹೇಳಿದ್ದಾರೆ.

“ನೀವು ಶಾಂತಿಯ ನಾಯಕ ಹಾಗೂ ನಿಮ್ಮ ಮಾತಿಗೆ ಬದ್ಧರಾಗಿರುವ ವ್ಯಕ್ತಿ ಎಂದು ನಾನು ನಂಬಿದ್ದೇನೆ. ಇರಾನ್ ಜನರ ರಕ್ಷಣೆಗೆ ಮಧ್ಯಪ್ರವೇಶಿಸಲು ದಯವಿಟ್ಟು ಸಿದ್ಧರಾಗಿ,” ಎಂದು ರೆಝಾ ಪಹ್ಲವಿ ಅವರು ತಮ್ಮ ಸಂದೇಶದಲ್ಲಿ ಆಗ್ರಹಿಸಿದ್ದಾರೆ.

ಇರಾನ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಹಣದುಬ್ಬರವನ್ನು ಖಂಡಿಸಿ ಅಯತೊಲ್ಲಾ ಅಲಿ ಖಮೇನಿ ಆಡಳಿತದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳು ಹನ್ನೆರಡನೇ ದಿನಕ್ಕೆ ಕಾಲಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 62 ಕ್ಕೆ ಏರಿಕೆಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...