ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್‌ಗೆ ಗುಂಡೇಟು

Date:

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂಪ್ರದಾಯವಾದಿ ಹೋರಾಟಗಾರ, ‘ಟರ್ನಿಂಗ್ ಪಾಯಿಂಟ್ ಯುಎಸ್ಎ’ ಸಹಸಂಸ್ಥಾಪಕ ಹಾಗೂ ಸಿಇಓ ಚಾರ್ಲಿ ಕಿರ್ಕ್ ಗುಂಡೇಟಿಗೆ ಬಲಿಯಾಗಿದ್ದಾರೆ.

ಅಮೆರಿಕದ ಉತ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವಾಗ ಕಿರ್ಕ್ ವಿದ್ಯಾರ್ಥಿಗಳಿಂದ ‘ಅಮೆರಿಕ ಕಮ್‌ಬ್ಯಾಕ್‌’ ಮತ್ತು ‘ಪ್ರೂವ್ ಮಿ ರಾಂಗ್’ ಎಂಬ ಘೋಷಣೆಗಳನ್ನು ಕೂಗುವಂತೆ ಸೂಚಿಸಿದ ವೇಳೆ ಗುಂಡಿನ ಸದ್ದು ಕೇಳಿಬಂದಿದೆ. ಗಂಟಲನ್ನು ಹಿಡಿದುಕೊಂಡು ಕಿರ್ಕ್ ನೆಲಕ್ಕೆ ಬಿದ್ದು ರಕ್ತದ ಮಡುವಿನಲ್ಲಿ ಸಾವನ್ನಪ್ಪಿದ್ದಾರೆ.

ಕಿರ್ಕ್ ಸಾವನ್ನಪ್ಪಿರುವ ಭಯಾನಕ ದೃಶ್ಯದ ವಿಡಿಯೊ ಅಮೆರಿಕನ್ನರನ್ನು ಬೆಚ್ಚಿ ಬೀಳಿಸಿದೆ. ಡೊನಾಲ್ಡ್ ಟ್ರಂಪ್ ಅವರು ಕಿರ್ಕ್ ಹತ್ಯೆಯನ್ನು ದೃಢಪಡಿಸಿದ್ದಾರೆ. ಮೃತ ಹೋರಾಟಗಾರನ ಗೌರವಾರ್ಥ ದೇಶಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...