ರಷ್ಯಾ ಧ್ವಜವಿದ್ದ ತೈಲ ನೌಕೆಯನ್ನು ವಶಪಡಿಸಿಕೊಂಡ ಅಮೆರಿಕ

Date:

ಅಮೆರಿಕದ ಕರಾವಳಿ ರಕ್ಷಣಾ ಪಡೆ (US Coast Guard) ಉತ್ತರ ಅಟ್ಲಾಂಟಿಕ್ ಸಾಗರದಲ್ಲಿ ರಷ್ಯಾ ಧ್ವಜ ಹೊಂದಿದ್ದ ‘ಮರಿನೇರಾ’ (ಹಳೆಯ ಹೆಸರು: ಬೆಲ್ಲಾ-1) ಎಂಬ ತೈಲ ನೌಕೆಯನ್ನು ವಶಪಡಿಸಿಕೊಂಡಿದೆ. ಎರಡು ವಾರಗಳಿಗೂ ಹೆಚ್ಚು ಕಾಲ ಹಡಗನ್ನು ಅಮೆರಿಕ ಬೆನ್ನಟ್ಟಿದ್ದು, ಬುಧವಾರ ವಶಪಡಿಸಿಕೊಂಡಿದೆ ಎಂದು ವರದಿಯಾಗಿದೆ.

ಈ ಬಗ್ಗೆ ಯುಎಸ್ ಮಿಲಿಟರಿಯ ಯುರೋಪಿಯನ್ ಕಮಾಂಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಅಮೆರಿಕ ಗೃಹ ಭದ್ರತಾ ಇಲಾಖೆ ಮತ್ತು ಯುಎಸ್ ಮಿಲಿಟರಿ ಸಮನ್ವಯದೊಂದಿಗೆ ಇಂದು ಅಮೆರಿಕದ ನಿರ್ಬಂಧಗಳ ಉಲ್ಲಂಘನೆ ಮಾಡಿದ ಬೆಲ್ಲಾ-1 ಅನ್ನು ವಶಪಡಿಸಿಕೊಳ್ಳಲಾಗಿದೆ. ಯುಎಸ್ ಫೆಡರಲ್ ನ್ಯಾಯಾಲಯವು ಹೊರಡಿಸಿದ ವಾರಂಟ್‌ ಆಧಾರದಲ್ಲಿ ಈ ಹಡಗನ್ನು ಉತ್ತರ ಅಟ್ಲಾಂಟಿಕ್‌ನಲ್ಲಿ ವಶಪಡಿಸಿಕೊಳ್ಳಲಾಗಿದೆ” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ಅಮೆರಿಕದ ಅಡಿಯಲ್ಲೇ ವೆನೆಜುವೆಲಾ ಇರುತ್ತದೆ: ಟ್ರಂಪ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಿನೇರಾ ಎಂಬ ಹಡಗಿನ ಹಳೆಯ ಹೆಸರು ‘ಬೆಲ್ಲಾ-1’ ಆಗಿದ್ದು, ಇದು ತೈಲ ನೌಕೆಯಾಗಿದೆ. ಈ ಹಡಗು ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ವೆನೆಜುವೆಲಾ ಮತ್ತು ಇರಾನ್‌ನಿಂದ ತೈಲ ಸಾಗಣೆ ಮಾಡುತ್ತಿತ್ತು ಎಂದು ಆರೋಪಿಸಲಾಗಿದೆ. ಈ ಹಿಂದೆ ಪನಾಮ ಮತ್ತು ಗಯಾನಾ ಧ್ವಜಗಳಡಿ ಸಂಚರಿಸುತ್ತಿದ್ದ ಈ ಹಡಗು, ಅಮೆರಿಕದ ಕಣ್ಗಾವಲಿನಿಂದ ತಪ್ಪಿಸಿಕೊಳ್ಳಲು ಇತ್ತೀಚೆಗಷ್ಟೇ ರಷ್ಯಾ ಧ್ವಜ ಬಳಸಿಕೊಳ್ಳುತ್ತಿದೆ ಮತ್ತು ‘ಮರಿನೇರಾ’ ಎಂದು ಹೆಸರು ಬದಲಿಸಿಕೊಂಡಿದೆ ಎಂದು ದೂರಲಾಗಿದೆ.

ಇನ್ನು ಈ ಕಾರ್ಯಾಚರಣೆಯ ಸಮಯದಲ್ಲಿ ರಷ್ಯಾದ ಜಲಂತರ್ಗಾಮಿ ಮತ್ತು ಯುದ್ಧನೌಕೆಗಳು ಹತ್ತಿರದಲ್ಲೇ ಇದ್ದವು ಎಂದು ವರದಿಯಾಗಿದೆ.

ಈಗಾಗಲೇ ಅಮೆರಿಕ ವೆನೆಜುವೆಲಾ ಅಧ್ಯಕ್ಷ ನಿಕೊಲಾಸ್‌ ಮಡುರೊ ಅವರನ್ನು ಕುಟುಂಬ ಸಹಿತವಾಗಿ ಬಂಧಿಸಿದೆ. ಅದಾದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೆನೆಜುವೆಲಾ ತೈಲ ನಿಕ್ಷೇಪವನ್ನು ಅಮೆರಿಕವೇ ಬೃಹತ್ ತೈಲ ನಿಕ್ಷೇಪಗಳನ್ನು ಬಳಸಿಕೊಳ್ಳಲಿದೆ ಎಂದು ಘೋಷಣೆ ಮಾಡಿದ್ದಾರೆ. ಇದೀಗ ಅಮೆರಿಕ ವೆನೆಜುವೆಲಾಗೆ ಸಂಬಂಧಿಸಿದ ತೈಲ ಸಾಗಣೆಯನ್ನು ಅಡ್ಡಿಪಡಿಸುವ ಪ್ರಯತ್ನಗಳನ್ನು ತೀವ್ರಗೊಳಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...