ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ಸ್ಥಗಿತಗೊಳಿಸಿದ ಸ್ಥಾಪಕ ನಾಥನ್ ಆಂಡರ್ಸನ್

Date:

ಅದಾನಿ ಗ್ರೂಪ್ ಸೇರಿದಂತೆ ವಿಶ್ವದ ಹಲವಾರು ಉದ್ಯಮಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದ ಅಮೆರಿಕ ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವುದಾಗಿ ಸಂಸ್ಥಾಪಕ ನಾಥನ್ ಆಂಡರ್ಸನ್ ತಿಳಿಸಿದ್ದಾರೆ.

ಈ ಬಗ್ಗೆ ಹಿಂಡೆನ್ ಬರ್ಗ್ ವೆಬ್‌ಸೈಟ್‌ನಲ್ಲಿ ಬರೆದುಕೊಂಡಿರುವ ನಾಥನ್ ಆಂಡರ್ಸನ್, ಕಳೆದ ಒಂದು ವರ್ಷದಿಂದ ನನ್ನ ಕುಟುಂಬ, ನನ್ನ ಸ್ನೇಹಿತರು ಹಾಗೂ ತಂಡದೊಂದಿಗೆ ಹಂಚಿಕೊಂಡಿಂತೆ ನಾನು ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆಯನ್ನು ವಿಸರ್ಜಿಸುವ ನಿರ್ಧಾರವನ್ನು ಕೈಗೊಂಡಿದ್ದೇನೆ. ನಾವು ಅಂದುಕೊಂಡ ಕಾರ್ಯಕ್ರಮಗಳನ್ನು ಪೂರ್ಣಗೊಳಿದ ನಂತರ ಸಂಸ್ಥೆಯನ್ನು ಮುಚ್ಚುವ ಯೋಜನೆ ಕೈಗೊಂಡಿದ್ದೇವೆ. ನಿಯಂತ್ರಕಗಳಿಗೆ ಹಂಚಿಕೊಂಡಂತೆ ಪೋಜಿ ಪ್ರಕರಣಗಳು ಕೊನೆಯದಾಗಿದ್ದು, ನಾವು ಅದನ್ನು ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದ್ದಾರೆ.

“ಸಂಸ್ಥೆಯನ್ನು ಸ್ಥಗಿತಗೊಳಿಸುವುದಕ್ಕೆ ನಿರ್ದಿಷ್ಟ ಬೆದರಿಕೆ, ಆರೋಗ್ಯ ಕಾರಣಗಳು ಹಾಗೂ ದೊಡ್ಡ ವೈಯಕ್ತಿಕ ಕಾರಣಗಳು ಒಳಗೊಂಡಂತೆ ಯಾವುದೇ ಕಾರಣಗಳಿಲ್ಲ. ಆರಂಭದಲ್ಲಿ ನಾನು ಕೆಲವು ವಿಷಯಗಳನ್ನು ಸಾಬೀತುಪಡಿಸಬೇಕು ಎಂದು ನಾನು ಭಾವಿಸಿದೆ. ಅಂತಿಮವಾಗಿ ನನ್ನಲ್ಲಿ ನಾನು ಒಂದಿಷ್ಟು ಸುರಕ್ಷತೆಯನ್ನು ಕಂಡುಕೊಂಡಿದ್ದು, ಬಹುಷಃ ಇದು ನನ್ನ ಜೀವನದಲ್ಲಿ ಮೊದಲ ಬಾರಿಯಾಗಿದೆ” ಎಂದು ನಾಥನ್ ಆಂಡರ್ಸನ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಯವರು ಗಳಿಸಿದ ಡಿಗ್ರಿಗಳು ಮತ್ತು ಮಾಹಿತಿ ಹಕ್ಕು ಎಂಬ ತುಕ್ಕು ಹಿಡಿದ ಹತಾರು

ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಳ್ಳುವ ಕೆಲವೇ ದಿನಗಳ ಮೊದಲು ನಡೆದ ಈ ಬೆಳವಣಿಗೆಗೆ ಯಾವುದೇ ಕಾರಣಗಳು ಇಲ್ಲವೆಂದು ಆಂಡರ್ಸನ್ ಸ್ಪಷ್ಟಪಡಿಸಿದ್ದಾರೆ.

ಸೆಬಿ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರು ಅದಾನಿ ಸಮೂಹದ ಸಾಗರೋತ್ತರ ಸಂಸ್ಥೆಗಳಲ್ಲಿ ಹೂಡಿಕೆ ಮಾಡಿದ್ದಾರೆ ಎಂದು ಅಮೆರಿಕಾದ ಕಿರು ಅವಧಿಯ ಮಾರಾಟ ಸಂಸ್ಥೆ ಹಿಂಡೆನ್‌ಬರ್ಗ್‌ ಸಂಶೋಧನಾ ಸಂಸ್ಥೆಯ ಇತ್ತೀಚೆಗೆ ಆರೋಪಿಸಿತ್ತು. ಈ ಆರೋಪ ಭಾರತದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...