ಭಾರತದ ಮೇಲಿನ ಅಮೆರಿಕ ಸುಂಕ ಕಡಿತ; 18%ಗೆ ಇಳಿಕೆ; ಮತ್ತೆ ಮೇಲುಗೈ ಸಾಧಿಸಿದ ಟ್ರಂಪ್

Date:

ಭಾರತವು ರಷ್ಯಾದಿಂದ ತೈಲ ಆಮದನ್ನು ಕಡಿಮೆ ಮಾಡಿದ ಬೆನ್ನಲ್ಲೇ, ಭಾರತದ ಮೇಲೆ ಅಮೆರಿಕ ಹೇರಿದ್ದ ಸುಂಕದಲ್ಲಿ ಅಲ್ಲಿನ ಅಧ್ಯಕ್ಷ ಟ್ರಂಪ್‌ ಬದಲಾವಣೆಗಳನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ 50% ಆಮದು ಸುಂಕವನ್ನು 18%ಗೆ ಇಳಿಸುವುದಾಗಿ ಟ್ರಂಪ್ ಘೋಷಿಸಿದ್ದಾರೆ. ಅಲ್ಲದೆ, ಅಮೆರಿಕದಿಂದ ಭಾರತಕ್ಕೆ ರಫ್ತಾಗುವ ಸರಕುಗಳ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ ಎಂದೂ ಟ್ರಂಪ್ ಹೇಳಿದ್ದಾರೆ.

ಇತ್ತೀಚೆಗೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ರಂಪ್ ದೂರವಾಣಿ ಕರೆಯಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆಯಲ್ಲಿ ವ್ಯಾಪಾರ ಒಪ್ಪಂದ ಮತ್ತು ಸುಂಕಗಳ ವಿಚಾರವನ್ನು ಚರ್ಚಿಸಲಾಗಿದೆ ಎಂದು ಹೇಳಲಾಗಿದೆ. ಇಬ್ಬರ ನಡುವಿನ ಮಾತುಕತೆಯಲ್ಲಿ ಟ್ರಂಪ್ ಮೇಲುಗೈ ಸಾಧಿಸಿದ್ದು, ಅಮೆರಿಕ ಉತ್ಪನ್ನಗಳಿಗೆ ಭಾರತವು ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ, ಸುಂಕವನ್ನು 0%ಗೆ ಇಳಿಸಲು ಒಪ್ಪಿಕೊಂಡಿದೆ ಎಂಬುದು ಟ್ರಂಪ್ ಹೇಳಿಕೆಯಲ್ಲಿ ಸ್ಪಷ್ಟವಾಗಿದೆ. ಇನ್ನು, ಭಾರತದ ಮೇಲಿನ ಸುಂಕಗಳಲ್ಲಿ ಕಡಿತವನ್ನೂ ಮಾಡಲಾಗಿದೆ. ಈವರೆಗೆ, ಅಮೆರಿಕಗೆ ಭಾರತವು 12-16% ಸುಂಕ ವಿಧಿಸುತ್ತಿತ್ತು.

ಟ್ರಂಪ್ ಘೋಷಣೆಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಅಮೆರಿಕ ನಿರ್ಧಾರವನ್ನು ಸ್ವಾಗತಿಸಿದ್ದಾರೆ. “ಸುಂಕ ಕಡಿತ ನಿರ್ಧಾರಕ್ಕಾಗಿ ಟ್ರಂಪ್ ಅವರಿಗೆ ಭಾರತದ 140 ಕೋಟಿ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ವಿಶ್ವದ ಅತಿದೊಡ್ಡ ಆರ್ಥಿಕತೆ ಮತ್ತು ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಒಟ್ಟಾಗಿ ಕೆಲಸ ಮಾಡಿದಾಗ, ನಮ್ಮ ಜನರಿಗೆ ಲಾಭವಾಗಲಿದೆ. ಉಭಯ ರಾಷ್ಟ್ರಗಳಿಗೆ ಪ್ರಯೋಜನವಾಗುವ ಅಪಾರ ಅವಕಾಶಗಳು ಅನಾವರಣಗೊಳ್ಳುತ್ತವೆ” ಎಂದು ಮೋದಿ ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಗ್ರಾಹಕರಿಗೆ ಬಂಪರ್‌ ಆಫರ್! ಗ್ರಾಂ ಚಿನ್ನಕ್ಕೆ ₹8-10 ಸಾವಿರ?

ದಿನೇ ದಿನೇ ಏರುತ್ತಲೇ ಇದ್ದ ಚಿನ್ನದ ದರ ಕಳೆದ ಒಂದು ವಾರದಿಂದ...