ಚುನಾವಣಾ ಪ್ರಚಾರದ ವೇಳೆ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಕಿವಿಗೆ ಗಾಯ

Date:

ಅಮೆರಿಕ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಗುಂಡಿನ ದಾಳಿ ನಡೆಸಿ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ‌. ಕೂದಲೆಳೆಯ ಅಂತರದಲ್ಲಿ ಡೊನಾಲ್ಡ್ ಟ್ರಂಪ್ ಅವರು ಬಚಾವ್ ಆಗಿದ್ದಾರೆ.

ಶನಿವಾರ ಪೆನ್‌ಸಿಲ್ವೇನಿಯಾದ ಬಟ್ಲರ್‌ ಎಂಬಲ್ಲಿ ಡೊನಾಲ್ಡ್‌ ಟ್ರಂಪ್ ಅವರ ಚುನಾವಣಾ ರ‍್ಯಾಲಿ ನಡೆಯುತ್ತಿದ್ದಾಗ ಈ ದಾಳಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಗುಂಡಿನ ದಾಳಿ ನಡೆಯಿತು. ಮನೆಯೊಂದರ ರೂಫ್ ಟಾಪ್ ಮೇಲೆ ಮಲಗಿ, ಬಂದೂಕುಧಾರಿ ಈ ದಾಳಿ ನಡೆಸಿರುವುದು ತಿಳಿದು ಬಂದಿದೆ. ಬಂಧೂಕುಧಾರಿಯನ್ನು ಕೂಡಲೇ ಭದ್ರತಾ ಸಿಬ್ಬಂದಿ ದಾಳಿ ನಡೆಸಿ, ಹತ್ಯೆಗೈದಿದ್ದಾರೆ.

20240714 074820

ಈ ಘಟನೆಯಲ್ಲಿ ಬಂದೂಕುಧಾರಿ ಮತ್ತು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರೇಕ್ಷಕರೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮತ್ತೊಬ್ಬ ಪ್ರೇಕ್ಷಕನ ಸ್ಥಿತಿ ಗಂಭೀರವಾಗಿದೆ. ಟ್ರಂಪ್ ಅವರ ಮುಖ ಹಾಗೂ ಕಿವಿಯ ಭಾಗಕ್ಕೆ ಗಾಯವಾಗಿದೆ.

ಈ ಗುಂಡಿನ ದಾಳಿಯನ್ನು ಹತ್ಯೆ ಯತ್ನ ಎಂದು ಹೇಳಿರುವ ಅಲ್ಲಿನ ಕಾನೂನು ಜಾರಿ ಅಧಿಕಾರಿಗಳು, ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವಿಡಿಯೋ ವೈರಲಾಗಿದ್ದು, ಗುಂಡಿನ ದಾಳಿ ನಡೆದ ಕೂಡಲೇ ವೇದಿಕೆಯಲ್ಲಿದ್ದ ಭದ್ರತಾ ಸಿಬ್ಬಂದಿ ಅವರನ್ನು ಬಚಾವ್ ಮಾಡಿದ್ದಾರೆ. ಬಳಿಕ ರಕ್ತಸಿಕ್ತ ಕಿವಿಯನ್ನು ಹಿಡಿದುಕೊಂಡ ಡೊನಾಲ್ಡ್ ಟ್ರಂಪ್, ಮತ್ತೊಮ್ಮೆ ಜನರತ್ತ ಕೈಬೀಸುವ ಮ‌ೂಲಕ ತಾನು ಪ್ರಾಣಾಪಾಯದಿಂದ ಪಾರಾಗಿರುವುದನ್ನು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...