ಟ್ರಂಪ್ ಆದೇಶದ ಬೆನ್ನಲ್ಲೇ 400 ಗುತ್ತಿಗೆ ನೌಕರರನ್ನು ವಜಾಗೊಳಿಸಿದ USAID

Date:

ಡೊನಾಲ್ಡ್‌ ಟ್ರಂಪ್‌ ಅವರು ಎರಡನೇ ಅವಧಿಗೆ ಅಮೆರಿಕ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ದಿನವೇ 100 ಕಾರ್ಯಕಾರಿ ಆದೇಶಗಳಿಗೆ ಸಹಿ ಹಾಕಿದ್ದಾರೆ. ಅದರಲ್ಲಿ, ವಿದೇಶಿ ಸಹಾಯಕ್ಕಾಗಿ ಕೆಲಸ ಮಾಡುತ್ತಿದ್ದ ‘ಯುಎಸ್‌ ಏಜೆನ್ಸಿ ಫಾರ್ ಇಂಟರ್‌ನ್ಯಾಷನಲ್ ಡೆವೆಲಪ್‌ಟೆಂಪ್‌’ (ಯುಎಸ್‌ಎಐಡಿ)ಗೆ ತಮ್ಮ ಕೆಲಸವನ್ನು ನಿಲ್ಲಿಸುವಂತೆಯೇ ಟ್ರಂಪ್‌ ಆದೇಶಿಸಿದ್ದಾರೆ. ಅವರ ಆದೇಶದ ಬೆನ್ನಲ್ಲೇ ನೂರಾರು ನೌಕರರನ್ನು ಯುಎಸ್‌ಎಐಡಿ ವಜಾಗೊಳಿಸಿದೆ.

ನೌಕರರನ್ನು ವಜಾಗೊಳಿಸಿರುವ ಬಗ್ಗೆ ಮಾಹಿತಿ ನೀಡಿರುವ ಹೆಸರು ಹೇಳಲಿಚ್ಚಿಸದ ಯುಎಸ್‌ಎಐಡಿ ಅಧಿಕಾರಿಯೊಬ್ಬರು, “390 ಸಿಬ್ಬಂದಿಗಳನ್ನು ವಜಾಗೊಳಿಸಲಾಗಿದೆ” ಎಂದು ತಿಳಿಸಿರುವುದಾಗಿ NPR ವರದಿ ಮಾಡಿದೆ.

ಯುಎಸ್‌ಎಐಡಿ ಸುಮಾರು 10,000 ಜನರ ಕಾರ್ಯಪಡೆಯನ್ನು ಹೊಂದಿದೆ. ಆ ಕಾರ್ಯಪಡೆಯ ಭಾಗವಾಗಿದ್ದ 400 ಮಂದಿಯನ್ನು ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವಜಾಗೊಳಿಸುವಿಕೆಯು ನೂರಾರು ಸಿಬ್ಬಂದಿಗಳಿಗೆ ಅಸಹನೀಯವಾಗಿದೆ. ಯುಎಸ್‌ಎಐಡಿಯಲ್ಲಿ ಈವರೆಗೆ ಸೇವೆ ಸಲ್ಲಿಸಿದವರನ್ನು ಏಕಾಏಕಿ ವಜಾಗೊಳಿಸಲಾಗಿದ್ದು, ಎಲ್ಲರ ಬದುಕು ಅತಂತ್ರವಾಗಿದೆ. ಒಟ್ಟಾರೆ ಚಿತ್ರಣವು ಭಯಾನಕವಾಗಿ ಕಾಣಿಸುತ್ತಿದೆ” ಎಂದು ವಜಾಗೊಂಡಿರುವ ಉದ್ಯೋಗಿಯೊಬ್ಬರು ಹೇಳಿಕೊಂಡಿದ್ದಾರೆ.

“ಅವ್ಯವಸ್ಥೆಯನ್ನು ಉಂಟುಮಾಡುವ ಉದ್ದೇಶದಿಂದ ದೀರ್ಘಕಾಲದವರೆಗೆ ಅಸ್ತಿತ್ವದಲ್ಲಿದ್ದ ಏಜೆನ್ಸಿಯನ್ನು ವ್ಯವಸ್ಥಿತವಾಗಿ ಮುಚ್ಚುತ್ತಿರುವ ಹುನ್ನಾರದಂತೆ ಕಾಣುತ್ತದೆ” ಎಂದು ಅವರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?; ಟ್ರಂಪ್ ಟೀಮ್‌ನಿಂದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಔಟ್ ಆಗಿದ್ದೇಕೆ?

ಟ್ರಂಪ್‌ ಅವರು 90 ದಿನಗಳವರೆಗೆ ಯಾವುದೇ ದೇಶಕ್ಕೆ ಸಹಾಯ ಮಾಡಬಾರದೆಂದು ಆದೇಶಿಸಿದ್ದಾರೆ. ಈ ಬೆನ್ನಲ್ಲೇ, ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಬಾಂಗ್ಲಾದೇಶ ಸರ್ಕಾರಕ್ಕೆ ಹಣ ಸಹಾಯ ನೀಡುವುದನ್ನು ಯುಎಸ್‌ಎಐಡಿ ಸ್ಥಗಿತಗೊಳಿಸಿದೆ.

ಆದಾಗ್ಯೂ, ಬಾಂಗ್ಲಾದೇಶದಲ್ಲಿ ವಾಸಿಸುವ ರೋಹಿಂಗ್ಯಾ ಜನರಿಗೆ USAIDಯಿಂದ ಬೆಂಬಲ ಮುಂದುವರಿಯುತ್ತದೆ ಎಂದು ಬಾಂಗ್ಲಾದೇಶದ ಮುಖ್ಯ ಸಲಹೆಗಾರರ ​​ಪತ್ರಿಕಾ ಕಾರ್ಯದರ್ಶಿ ಶಫಿಕುಲ್ ಆಲಂ ತಿಳಿಸಿದ್ದಾರೆ ಎಂದು ಢಾಕಾ ಟ್ರಿಬ್ಯೂನ್‌ ವರದಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...