ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್‌ಗೆ ಅರ್ಪಿಸಿದ ಮರಿಯಾ ಮಚಾದೊ

Date:

ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮರಿಯಾ ಕೊರಿನಾ ಮಚಾದೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ವೆನೆಜುವೆಲಾದ ಜನತೆಗೆ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅರ್ಪಿಸಿದ್ದಾರೆ.

“ನಾನು ಈ ಪ್ರಶಸ್ತಿಯನ್ನು ವೆನೆಜುವೆಲಾದ ಸಂತ್ರಸ್ತ ಜನರಿಗೆ ಮತ್ತು ನಮ್ಮ ಉದ್ದೇಶಕ್ಕೆ ನಿರ್ಣಾಯಕ ಬೆಂಬಲ ನೀಡಿದ ಅಧ್ಯಕ್ಷ ಟ್ರಂಪ್‌ಗೆ ಅರ್ಪಿಸುತ್ತೇನೆ” ಎಂದು ಮಚಾದೊ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಕಟಿಸಿದ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

“ನಾವು ವಿಜಯದ ಅಂಚಿನಲ್ಲಿದ್ದೇವೆ. ಇಂದು, ಎಂದಿಗಿಂತಲೂ ಹೆಚ್ಚು ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವ ಸಾಧನೆಗಾಗಿ ಅಧ್ಯಕ್ಷ ಟ್ರಂಪ್, ಅಮೆರಿಕದ ಜನತೆ, ಲ್ಯಾಟಿನ್ ಅಮೆರಿಕದ ಕಳೆದ ಒಂದು ವರ್ಷದಿಂದ ಸರ್ವಾಧಿಕಾರಿ ಎಡಪಂಥೀಯ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಆಡಳಿತದ ವಿರುದ್ಧ ಅಡಗಿಕೊಂಡು ಹೋರಾಟ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಮಚಾದೊ ಅವರ ಮೇಲೆ ನಿಷೇಧ ಹೇರಲಾಗಿದೆ. ಅವರು ತಮ್ಮ ಪರವಾಗಿ ಮಾಜಿ ರಾಜತಾಂತ್ರಿಕ ಎಡ್ಮಂಡೊ ಗೊನ್ಜಾಲೆಜ್ ಉರುಟಿಯಾ ಅವರನ್ನು ಬೆಂಬಲಿಸಿದ್ದರು. ಅಂತಾರಾಷ್ಟ್ರೀಯ ಸಮುದಾಯದ ಬಹುಪಾಲು ಉರುಟಿಯಾರನ್ನೇ ನಿಜವಾದ ವಿಜೇತರೆಂದು ಪರಿಗಣಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

ನೊಬೆಲ್ ಸಮಿತಿಯು ಮಚಾದೊ ಅವರ “ವೆನೆಜುವೆಲಾದ ಜನರ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವ ಹಾಗೂ ಸರ್ವಾಧಿಕಾರದಿಂದ ಪ್ರಜಾಪ್ರಭುತ್ವದತ್ತ ಶಾಂತಿಯುತ ಪರಿವರ್ತನೆಗಾಗಿ ಮಾಡಿದ ದಣಿವರಿಯದ ಹೋರಾಟ”ವನ್ನು ಉಲ್ಲೇಖಿಸಿ ಪ್ರಶಸ್ತಿಯನ್ನು ಘೋಷಿಸಿತ್ತು.

58 ವರ್ಷದ ಮಚಾದೊ ಅವರು ಟ್ರಂಪ್ ಆಡಳಿತದ ಅವಧಿಯಲ್ಲಿ ಮಡುರೊ ವಿರುದ್ಧ ಕೈಗೊಳ್ಳಲಾದ ಮಿಲಿಟರಿ ಒತ್ತಡ ಮತ್ತು ಅಮೆರಿಕದ ನೌಕಾ ನಿಯೋಜನೆಗಳು ವೆನೆಜುವೆಲಾದ ಪ್ರಜಾಪ್ರಭುತ್ವ ಪರಿವರ್ತನೆಗೆ ಅಗತ್ಯ ಕ್ರಮಗಳಾಗಿವೆ ಎಂದು ಪ್ರಶಂಸಿಸಿದ್ದರು.

ಅಮೆರಿಕದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು ಮಚಾದೊ ಅವರ ಪೋಸ್ಟ್ ಅನ್ನು ಹಂಚಿಕೊಂಡು ಅವರನ್ನು ಅಭಿನಂದಿಸಿದ್ದಾರೆ.

ಇದೇ ವೇಳೆ, ಮಾಜಿ ಅಧ್ಯಕ್ಷೀಯ ಅಭ್ಯರ್ಥಿ ಹೆನ್ರಿಕ್ ಕ್ಯಾಪ್ರಿಲ್ಸ್ ಸೇರಿದಂತೆ ಅನೇಕ ವಿರೋಧ ಪಕ್ಷದ ನಾಯಕರು ಮಚಾದೊ ಅವರಿಗೆ ಶುಭಾಶಯ ಕೋರಿದ್ದಾರೆ.

“ಈ ಪ್ರಶಸ್ತಿ ನಮ್ಮ ಶಾಂತಿಯ ಹೋರಾಟಕ್ಕೆ ಮತ್ತೊಂದು ಪ್ರೇರಣೆಯಾಗಲಿ ಮತ್ತು ವೆನೆಜುವೆಲಾದ ಜನರಿಗೆ ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವವನ್ನು ಮರಳಿ ತರುವ ದಾರಿಯಾಗಲಿ,” ಎಂದು ಕ್ಯಾಪ್ರಿಲ್ಸ್ ತಮ್ಮ ಪೋಸ್ಟ್‌ ನಲ್ಲಿ ಬರೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...