ಅಮೆರಿಕ | ಪ್ಯಾಲೆಸ್ಟೀನ್ ಪರ ಪ್ರತಿಭಟನಾನಿರತರ ಮೇಲೆ ಪೊಲೀಸರಿಂದ ಕ್ರೂರ ವರ್ತನೆ

Date:

ಅಮೆರಿಕ ದ ಅಟ್ಲಾಂಟದ ಎಮೊರಿ ವಿವಿಯಲ್ಲಿ ಪ್ಯಾಲೆಸ್ಟೀನ್ ಪರ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಸ್ಥಳೀಯ ಪೊಲೀಸರು ಅಮಾನುಷವಾಗಿ ವರ್ತಿಸಿದ್ದಾರೆ. ಮಹಿಳಾ ಪ್ರಾಧ್ಯಾಪಕರೊಬ್ಬರನ್ನು ಒಬ್ಬ ಪೊಲೀಸ್ ಕೆಳಕ್ಕೆ ಬೀಳಿಸಿದರೆ, ಮತ್ತಿಬ್ಬರು ಅಧಿಕಾರಿಗಳು ಅವರ ಕೈಯನ್ನು ಹಿಂದಕ್ಕೆ ಕಟ್ಟಿ ಬೇಡಿ ತೊಡಿಸಿದರು.

ಹಾರ್ವಡ್, ಯೇಲ್‌ ಸೇರಿದಂತೆ ಅಮೆರಿಕದ ಪ್ರಮುಖ ವಿವಿ ಕ್ಯಾಂಪಸ್‌ಗಳಲ್ಲಿ ಕಳೆದ ಕೆಲವು ದಿನಗಳಿಂದ ಗಾಜಾದಲ್ಲಿ ಅಮಾಯಕ ಪ್ಯಾಲೆಸ್ಟೀನ್ ನಾಗರಿಕರ ಮೇಲೆ ಇಸ್ರೇಲ್ ಪಡೆ ನಡೆಸುತ್ತಿರುವ ದಾಳಿಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ ವಾರ ನ್ಯೂಯಾರ್ಕ್‌ನ ಕೊಲಂಬಿಯಾ ವಿವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ 100 ಮಂದಿಯನ್ನು ಬಂಧಿಸಲಾಗಿತ್ತು.

ಏ.25 ರಂದು ಜಾರ್ಜಿಯ ಪೊಲೀಸರು ಅರ್ಥಶಾಸ್ತ್ರದ ಪ್ರಾಧ್ಯಾಪಕ ಕರೊಲೈನ್‌ ಫೊಲಿನ್‌ ಒಳಗೊಂಡು 28 ಮಂದಿಯನ್ನು ಬಂಧಿಸಿದ್ದರು. ಪ್ರತಿಭಟನಾನಿರತ ಸಂಘಟನೆಗಳು ಪೊಲೀಸರ ಕ್ರೌರ್ಯವನ್ನು ‘ಭಯೋತ್ಪಾದನೆಯ ಕೃತ್ಯ’ ಎಂದು ಆರೋಪಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಥಶಾಸ್ತ್ರದ ಪ್ರಾಧ್ಯಾಪಕ ಕರೊಲೈನ್‌ ಅವರನ್ನು ಅಮಾನುಷವಾಗಿ ನಡೆಸಿಕೊಂಡ ರೀತಿಗೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿವೆ. ತಾನು ಪ್ರಾಧ್ಯಾಪಕಿ ಎಂದು ಹೇಳಿದರೂ ಕರೊಲೈನ್‌ ಅವರನ್ನು ಪೊಲೀಸರು ನೆಲಕ್ಕೆ ಬೀಳಿಸಿ ಬೇಡಿ ತೊಡಿಸಿ ಅಮಾನುಷವಾಗಿ ವರ್ತಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋಮುದ್ವೇಷ ಜಾಹೀರಾತು ನೀಡಿ ವಿಕೃತಿ ಮೆರೆದ ಬಿಜೆಪಿ

ಈ ನಡುವೆ ಎಮೊರಿ ವಿವಿಯ ತತ್ವಶಾಸ್ತ್ರ ಪ್ರಾಧ್ಯಪಕಿ ನೊಯೊಲ್ಲೆ ಮೆಕ್‌ಕಾಫಿ ಅವರನ್ನು ಕೂಡ ಬಂಧಿಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ಜಾರ್ಜಿಯಾ ಸ್ಟೇಟ್‌ ಪ್ಯಾಟ್ರೋಲ್, ಅಟ್ಲಂಟಾ ಪೊಲೀಸ್ ಡಿಪಾರ್ಟ್‌ಮೆಂಟ್ ಹಾಗೂ ಎಮೊರಿ ಪೊಲೀಸ್ ಡಿಪಾರ್ಟ್‌ಮೆಂಟ್ ಭಯೋತ್ಪಾದನ ರೀತಿಯ ಕೃತ್ಯಕ್ಕೆ ಎಲ್ಲ ರೀತಿಯ ಜವಾಬ್ದಾರಿದಾರರು” ಎಂದು ಎಮೊರಿ ವಿವಿಯ ಪ್ರತಿಭಟನಾನಿರತ ಸಂಘಟನೆಗಳು ಪ್ರಕಟಣೆಯನ್ನು ಹೊರಡಿಸಿದೆ.

ಪ್ಯಾಲೆಸ್ಟೇನ್‌ ಮೇಲೆ ಇಸ್ರೇಲ್ ಪಡೆ ನಡೆಸುತ್ತಿರುವ ದಾಳಿಯ ವಿರುದ್ಧ ಎಮೋರಿ ವಿವಿ ಪ್ರತಿಭಟನೆಯನ್ನು ಮುಂದುವರೆಸಿದ್ದು, ಕ್ರೂರವಾಗಿ ವರ್ತಿಸಿ ಬಂಧಿಸಲಾಗಿರುವ ಎಲ್ಲ ಚಳುವಳಿಗಾರರನ್ನು ಪೊಲೀಸರು ತಕ್ಷಣ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಸುದ್ದಿ ಮಾಧ್ಯಮಗಳ ಪ್ರಕಾರ ಕಳೆದ ಒಂದು ವಾರದಲ್ಲಿ ಸರಿಸುಮಾರು 550ಕ್ಕೂ ಹೆಚ್ಚು ಮಂದಿಯನ್ನು ಅಮೆರಿಕಾದ ವಿವಿಧ ವಿವಿ ಕ್ಯಾಂಪಸ್‌ಗಳಿಂದ ಬಂಧಿಸಲಾಗಿದೆ.

ಅಮೆರಿಕ ಇಸ್ರೇಲ್‌ ಸೇನೆಗೆ ಬಿಡುಗಡೆ ಮಾಡಿರುವ ಸೇನಾ ಆರ್ಥಿಕ ನೆರವನ್ನು ಕಡಿತಗೊಳಿಸುವುದು ಹಾಗೂ ಇಸ್ರೇಲ್‌ ಪಡೆಗಳು ಗಾಜಾದಲ್ಲಿ ದಾಳಿಯನ್ನು ನಿಲ್ಲಿಸಬೇಕೆಂದು ಪ್ರತಿಭಟನಾಕಾರರ ಆಗ್ರಹವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...