ದಾಳಿಗೆ ಒಳಗಾಗಿರುವವನು ನಾನೇ: ಬ್ಯಾಂಕ್‌ಗಳು 14,000 ಕೋಟಿ ಸಾಲ ವಸೂಲಿ ಮಾಡಿವೆ ಎಂದ ವಿಜಯ್ ಮಲ್ಯ

Date:

ದೇಶ ಬಿಟ್ಟು ಪರಾರಿಯಾಗಿರುವ ಆರ್ಥಿಕ ಅಪರಾಧಿ, ಮದ್ಯದ ದೊರೆ ವಿಜಯ್ ಮಲ್ಯ ಬ್ಯಾಂಕುಗಳು 6,203 ಕೋಟಿ ರೂಪಾಯಿ ಸಾಲದ ಬದಲಾಗಿ ಸುಮಾರು 14,000 ಕೋಟಿ ರೂಪಾಯಿ ವಸೂಲಿ ಮಾಡಿವೆ. ಇದರಲ್ಲಿ ಶೇಕಡ 11.5 ಬಡ್ಡಿಯೂ ಸೇರಿದೆ ಎಂದು ಪುನರುಚ್ಚರಿಸಿದ್ದಾರೆ. ಹಾಗೆಯೇ “ಇಲ್ಲಿ ನಿಜವಾಗಿಯು ದಾಳಿಗೆ ಒಳಗಾಗಿರುವವನು ನಾನೇ” ಎಂದಿದ್ದಾರೆ.

ಇತ್ತೀಚೆಗೆ ವಾಣಿಜ್ಯೋದ್ಯಮಿ ರಾಜ್ ಶಮಾನಿ ಆಯೋಜಿಸಿದ್ದ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿರುವ ವಿಜಯ್ ಮಲ್ಯ ತಮ್ಮ ವಕೀಲರು ಬ್ಯಾಂಕ್‌ಗಳಿಗೆ 15 ಬಾರಿ ನೋಟಿಸ್ ನೀಡಿದ್ದಾರೆ ಮತ್ತು ಎಸ್‌ಬಿಐ ಅಧ್ಯಕ್ಷರಿಗೆ ವೈಯಕ್ತಿಕ ಪತ್ರ ಬರೆದಿದ್ದರೂ ‘ಬ್ಯಾಂಕ್ ಸ್ಟೇಟ್‌ಮೆಂಟ್’ ನೀಡಿಲ್ಲ. ಇದರ ಸ್ಪಷ್ಟಣೆಗಾಗಿ ಸಭೆ ನಡೆಸುವಂತೆ ಕೋರಿದೆ. ಆದರೆ ಬ್ಯಾಂಕುಗಳು ನಿರಾಕರಿಸಿವೆ ಎಂದು ಮಲ್ಯ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತೀಯ ಬ್ಯಾಂಕುಗಳು ಬಾಕಿಗಿಂತ ದುಪ್ಪಟ್ಟು ಹಣ ವಸೂಲಿ ಮಾಡಿವೆ: ವಿಜಯ್ ಮಲ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೀಗ ದಾಳಿಗೆ ಒಳಗಾಗಿರುವವನು ನಾನೇ. ಬ್ಯಾಂಕ್‌ಗಳು ನನಗೆ ಎಂದಿಗೂ ಬ್ಯಾಂಕ್ ಸ್ಟೇಟ್‌ಮೆಂಟ್ ನೀಡದ ಕಾರಣ ನಾನು ನಿಮ್ಮಂತೆಯೇ ಗೊಂದಲಕ್ಕೆ ಒಳಗಾಗಿದ್ದೇನೆ. ಇದು ತುಂಬಾ ವಿಚಿತ್ರ” ಎಂದು ಹೇಳಿದ್ದಾರೆ.

2016ರ ಮಾರ್ಚ್‌ನಲ್ಲಿ ಯುಕೆಗೆ ಪಲಾಯನವಾದ ಮಲ್ಯ ಒಡೆತನ ಕಿಂಗ್‌ಫಿಷರ್ ಏರ್‌ಲೈನ್ಸ್ (ಕೆಎಫ್‌ಎ) ಹಲವು ಬ್ಯಾಂಕುಗಳಿಗೆ 9,000 ಕೋಟಿ ರೂ.ಗಳ ಸಾಲ ಮರುಪಾವತಿ ಬಾಕಿ ಉಳಿಸಿತ್ತು. ಬ್ಯಾಂಕುಗಳಿಗೆ ಸಾಲ ಮರುಪಾವತಿಸದೆ ಮಲ್ಯ ಪರಾರಿಯಾಗಿದ್ದರು. ಆದರೆ ವಾರ್ಷಿಕ ಶೇಕಡ 11.5 ಬಡ್ಡಿದರದಲ್ಲಿ 6,203 ಕೋಟಿ ರೂ.ಗಳನ್ನು ವಸೂಲಿ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬೆಂಗಳೂರಿನ ಡಿಆರ್‌ಟಿ ಪೀಠ 2017ರಲ್ಲಿ ಎಸ್‌ಬಿಐ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟಕ್ಕೆ ಆದೇಶಿಸಿತ್ತು.

ಈ ನಡುವೆ ಇಂದಿಗೂ ಭಾರತವು ಯುಕೆಯಿಂದ ಮಲ್ಯ ಅವರನ್ನು ಹಸ್ತಾಂತರಿಸಲು ಪ್ರಯತ್ನಿಸುತ್ತಿದೆ. ಇನ್ನು ತಾನು ಶೇಕಡ 100ರಷ್ಟು ಸಾಲ ಮರುಪಾವತಿಗೆ ಸಿದ್ಧನಾಗಿದ್ದೆ. ಆದರೆ ಬ್ಯಾಂಕುಗಳು ಮತ್ತು ಸರ್ಕಾರ ಬೇಡ ಎಂದಿದೆ ಎಂದು ಮಲ್ಯ ಇತ್ತೀಚೆಗೆ ಹೇಳಿಕೊಂಡಿದ್ದರು. ಅದಾದ ಬಳಿಕ ತನ್ನಿಂದ ಬ್ಯಾಂಕುಗಳು ಸುಮಾರು 14,000 ಕೋಟಿ ರೂಪಾಯಿ ವಸೂಲಿ ಮಾಡಿವೆ ಎಂದೂ ಹೇಳಿದ್ದರು. ಅದನ್ನೇ ಇದೀಗ ಮತ್ತೆ ಪುನರುಚ್ಚರಿಸಿದ್ದಾರೆ.

ಹಾಗೆಯೇ 2025ರ ಫೆಬ್ರವರಿ 5ರಂದು ವಿಜಯ್ ಮಲ್ಯ ಬ್ಯಾಂಕುಗಳ ಸಾಲ ವಸೂಲಾತಿ ಪ್ರಕ್ರಿಯೆಯ ಕುರಿತು ಸ್ಪಷ್ಟೀಕರಣವನ್ನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...