ವೀಸಾ ವಿಳಂಬ | ಪಾಕ್ ಯುವತಿ ಜೊತೆ ಆನ್‌ಲೈನ್‌ನಲ್ಲೇ ಮದುವೆಯಾದ ಬಿಜೆಪಿ ನಾಯಕನ ಪುತ್ರ

Date:

ಭಾರತ ಮತ್ತು ಪಾಕಿಸ್ತಾನದಲ್ಲಿ ನೆಲೆಸಿರುವ ಸಂಬಂಧಿಗಳ ನಡುವಿನ ವಿವಾಹ ನಿಶ್ಚಯವಾಗಿದ್ದರೂ, ವೀಸಾ ಸಿಗದ ಹಿನ್ನೆಲೆ ವರ ಪಾಕಿಸ್ತಾನಕ್ಕೆ ತೆರಳಲಾಗಿಲ್ಲ. ಹೀಗಾಗಿ, ಭಾರತದ ವರ ಮತ್ತು ಪಾಕಿಸ್ತಾನದ ವಧು ಆನ್‌ಲೈನ್‌ನಲ್ಲೇ ವಿವಾಹವಾಗಿರುವ ಅಪರೂಪದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಜೌನ್‌ಪುರದ ಬಿಜೆಪಿ ಕಾರ್ಪೋರೇಟರ್ ತೆಹಸಿನ್ ಶಾಹಿದ್ ಅವರ ಮಗ ಮೊಹಮ್ಮದ್ ಅಬ್ಬಾಸ್ ಹೈದರ್ ಮತ್ತು ಪಾಕಿಸ್ತಾನದ ಲಾಹೋರ್‌ನಲ್ಲಿ ನಲೆಸಿರುವ ಯುವತಿ ಅಂದಲೀಬ್ ಜಹಾರ ಅವರಿಗೆ ವಿವಾಹ ನಿಶ್ಚಯವಾಗಿತ್ತು.

ಮಧು ಅಂದಲೀಬ್ ಜಹಾರ ಅವರು ಬಿಜೆಪಿ ಕಾರ್ಪೋರೇಟರ್‌ ತೆಹಸಿನ್ ಶಾಹಿದ್ ಅವರ ಸಂಬಂಧಿಯೇ ಆಗಿದ್ದಾರೆ. ವಧುವಿನ ತಾಯಿ ರಾಣಾ ಯಾಸ್ಮಿನ್‌ ಜೈದಿ ಅವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರು ತಾವಿದ್ದಂತೆಯೇ ತಮ್ಮ ಮಗಳ ಮದುವೆ ಮಾಡಬೇಕೆಂಬ ಬಯಕೆ ಹೊಂದಿದ್ದರು. ಹೀಗಾಗಿ, ಶುಕ್ರವಾರ ವಿವಾಹ ನಿಶ್ಚಯಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಆದರೆ, ರಾಜತಾಂತ್ರಿಕ ಬಿಕ್ಕಟ್ಟುಗಳಂತಹ ಕಾರಣಗಳಿಂದಾಗಿ ವರನಿಗೆ ಪಾಕಿಸ್ತಾನಕ್ಕೆ ತೆರಳಲು ವೀಸಾ ಸಿಗುವುದು ತಡವಾಗಿದೆ. ಪರಿಣಾಮ ಇಬ್ಬರೂ ಅನ್‌ಲೈನ್‌ನಲ್ಲಿಯೇ ವಿವಾಹವಾಗಿದ್ದಾರೆ. ವಧು-ವರರ ಕುಟುಂಬಸ್ಥರು, ಸಂಬಂಧಿಗಳು ಆನ್‌ಲೈನ್‌ ಮೂಲಕವೇ ಇಬ್ಬರಿಗೂ ವಿವಾಹ ಮಾಡಿದ್ದಾರೆ. ಆನ್‌ಲೈನ್ ವಿವಾಹ ಸಮಾರಂಭಕ್ಕೆ ಜಿಲ್ಲೆಯ ಬಿಜೆಪಿ ನಾಯಕರೂ ಭಾಗಿದ್ದರು ಎಂದು ವರದಿಯಾಘಿದೆ.

ಪಾಕಿಸ್ತಾನ ಯುವತಿಯನ್ನು ವಿವಾಹವಾಗಿರುವ ಹೈದರ್‌, ತಮ್ಮ ಪತ್ನಿ ಭಾರತಕ್ಕೆ ಬರಲು ತ್ವರಿತವಾಗಿ ವೀಸಾ ಒದಗಿಸಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...