ಮಧ್ಯ ಪ್ರಾಚ್ಯದಲ್ಲಿನ ಉದ್ವಿಗ್ನತೆ 4ನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಅಮೆರಿಕದ ಬಳಿ ಅನಿಯಮಿತ ಪ್ರಮಾಣದ ಶಸ್ತ್ರಾಸ್ತ್ರಗಳಿವೆ. ನಮಗೆ ದೀರ್ಘಕಾಲದ ಯುದ್ಧಗಳನ್ನು ಕೂಡ ನಡೆಸಲು ಸಾಧ್ಯವೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅಮೆರಿಕದಲ್ಲಿ ಅನಿಯಮಿತ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳ ಸಂಗ್ರಹವಿದೆ. ಇವುಗಳನ್ನು ಮಾತ್ರ ಬಳಸಿಕೊಂಡು ಯುದ್ಧಗಳನ್ನು ಸುದೀರ್ಘವಾಗಿ ಹಾಗೂ ಅತ್ಯಂತ ಯಶಸ್ವಿಯಾಗಿ ನಡೆಸಬಹುದು. ನಮ್ಮ ಶಸ್ತ್ರಾಸ್ತ್ರಗಳು ಇತರ ದೇಶಗಳ ಅತ್ಯುತ್ತಮ ಶಸ್ತ್ರಾಸ್ತ್ರಗಳಿಗಿಂತಲೂ ಉತ್ತಮವಾಗಿವೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ
ನಮ್ಮಲ್ಲಿ ಉತ್ತಮ ಶಸ್ತ್ರಾಸ್ತ್ರಗಳ ಸಂಗ್ರಹ ಇದೆ ಆದರೆ, ನಾವು ಬಯಸುವ ಸ್ಥಳದಲ್ಲಿ ಇಲ್ಲ ಎಂದು ಟ್ರಂಪ್ ಒಪ್ಪಿಕೊಂಡಿದ್ದಾರೆ. ಮಿತ್ರ ರಾಷ್ಟ್ರದಲ್ಲಿ ಹೆಚ್ಚಿನ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.





