ನೀವು ನೊಬೆಲ್‌ ಶಾಂತಿ ಪ್ರಶಸ್ತಿಗೆ ಅರ್ಹರಿದ್ದೀರಿ; ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌ ಪ್ರಧಾನಿ

Date:

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ.

ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್‌ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ ಪ್ರತಿಯನ್ನು ಸಹ ಹಸ್ತಾಂತರಿಸಿದರು.

ಟ್ರಂಪ್‌ ಅವರೊಂದಿಗಿನ ಔತಣಕೂಟದ ವೇಳೆ ನೆತನ್ಯಾಹು ಈ ಕುರಿತು ಮಾಹಿತಿ ನೀಡಿದ್ದಾರೆ. “ನೊಬೆಲ್ ಶಾಂತಿ ಪ್ರಶಸ್ತಿ ಸಮಿತಿಗೆ ಕಳುಹಿಸಿದ ಪತ್ರವನ್ನು ನಾನು ನಿಮ್ಮ ಮುಂದಿಡಲು ಬಯಸುತ್ತೇನೆ. ನಾನು ನಿಮ್ಮನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡುತ್ತಿದ್ದೇನೆ. ನೀವು ಅದಕ್ಕೆ ಅರ್ಹರಿದ್ದೀರಿ. ಆ ಗೌರವವನ್ನು ನೀವು ಪಡೆಯಬೇಕು” ಎಂದು ನೆತನ್ಯಾಹು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರಂಪ್‌ ಅವರು ಜಗತ್ತಿನಲ್ಲಿ ಈಗ ಶಾಂತಿ ಮಂತ್ರವನ್ನು ಜಪಿಸುತ್ತಿದ್ದಾರೆ. ವಿಶೇಷವಾಗಿ ಈಗ ಮಧ್ಯಪ್ರಾಚ್ಯದಲ್ಲಿ ಶಾಂತಿ ನೆಲೆಸಲು ಟ್ರಂಪ್‌ ಬಹಳಷ್ಟು ಶ್ರಮಿಸುತ್ತಿದ್ದಾರೆ. ಟ್ರಂಪ್‌ ಅವರ ಈ ಕೆಲಸಕ್ಕೆ ಎಲ್ಲ ಇಸ್ರೇಲಿಗಳು ಮಾತ್ರವಲ್ಲದೆ, ಯಹೂದಿ ಜನರು ಮತ್ತು ಪ್ರಪಂಚದಾದ್ಯಂತದ ಅನೇಕ ಅಭಿಮಾನಿಗಳ ಮೆಚ್ಚುಗೆ ವ್ಯಕ್ತವಾಗಿದೆ ಎಂದು ನೆತನ್ಯಾಹು ಹೇಳಿದರು.

ಇದನ್ನು ಓದಿದ್ದೀರಾ? ಅಮೆರಿಕದಲ್ಲಿ ಹೊಸ ರಾಜಕೀಯ ಪಕ್ಷ ಘೋಷಿಸಿದ ಎಲಾನ್ ಮಸ್ಕ್

ನೆತನ್ಯಾಹು ಅವರು ತನ್ನನ್ನು ನೊಬೆಲ್‌ಗೆ ನಾಮನಿರ್ದೇಶನ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಟ್ರಂಪ್‌, ಇದು ನನಗೆ ತಿಳಿದಿರಲಿಲ್ಲ. ವಿಶೇಷವಾಗಿ ನಿಮ್ಮಿಂದ ಈ ಮಾತು ಬಂದಿರುವುದಕ್ಕೆ ತುಂಬಾ ಧನ್ಯವಾದಗಳು ಎಂದು ಹೇಳಿದರು.

ಇಲ್ಲಿಯವರೆಗೆ ಅಮೆರಿಕದ ಮೂವರು ಅಧ್ಯಕ್ಷರು ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1906 ರಲ್ಲಿ ಥಿಯೋಡರ್ ರೂಸ್‌ವೆಲ್ಟ್‌, 1919 ರಲ್ಲಿ ವುಡ್ರೋ ವಿಲ್ಸನ್ ಮತ್ತು 2009 ರಲ್ಲಿ ಬರಾಕ್ ಒಬಾಮಾ ಅವರಿಗೆ ನೊಬೆಲ್‌ ದೊರಕಿದೆ.

ಪ್ಯಾಲಿಸ್ತೇನ್‌ ಮೇಲೆ ಯದ್ಧ ಮಾಡುತ್ತಿರುವ ಇಸ್ರೇಲ್‌ಗೆ ಅಮೆರಿಕದ ನೇರ ಬೆಂಬಲವಿದೆ. ಇಸ್ರೇಲ್‌ ದಾಳಿಯಿಂದಾಗಿ ನಿತ್ಯ ನೂರಾರು ಅಮಾಯಕರು ಗಾಜಾ ಪಟ್ಟಿಯಲ್ಲಿ ಮೃತಪಡುತ್ತಿದ್ದಾರೆ. ಮಕ್ಕಳು, ಮಹಿಳೆಯರೆನ್ನದೆ ಸಾವಿರಾರು ಜನರನ್ನು ಇಸ್ರೇಲ್ ಕೊಂದಿದೆ. ಯುದ್ಧದ ಭೀಕರತೆ ಕುರಿತು ವಿಶ್ವಸಂಸ್ಥೆ ಸೇರಿದಂತೆ ಹಲವು ದೇಶಗಳು ಕಳವಳ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...