ಯುದ್ಧ ಅಂತ್ಯವಾಗಲು ಅಮೆರಿಕ, ಇಸ್ರೇಲ್ ಮುಂದೆ 3 ಷರತ್ತುಗಳನ್ನಿಟ್ಟ ಇರಾನ್

Date:

ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಪ್ರಸ್ತುತ ಭೀಕರ ಯುದ್ಧವನ್ನು ಕೊನೆಗೊಳಿಸಲು ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಅವರು ಮೂರು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದ್ದಾರೆ. “ಚಿಯೋನಿಸ್ಟ್ (ಇಸ್ರೇಲ್) ಮತ್ತು ಅಮೆರಿಕ ಪ್ರಚೋದಿಸಿರುವ ಈ ಯುದ್ಧ ಅಂತ್ಯವಾಗಲು ಇದೊಂದೇ ದಾರಿ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ನಂತರ ‘ಎಕ್ಸ್’ (X) ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ವಲಯದಲ್ಲಿ ಶಾಂತಿ ಕಾಪಾಡುವ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದು, ಈ ಷರತ್ತುಗಳು ಈಡೇರಿದರೆ ಮಾತ್ರ ಯುದ್ಧ ನಿಲ್ಲಲಿದೆ ಎಂದು ತಿಳಿಸಿದ್ದಾರೆ.

ಇರಾನ್ ಮುಂದಿಟ್ಟಿರುವ 3 ಪ್ರಮುಖ ಷರತ್ತುಗಳು:
ನ್ಯಾಯಸಮ್ಮತ ಹಕ್ಕುಗಳ ಮಾನ್ಯತೆ: ಇರಾನ್‌ನ ನ್ಯಾಯಸಮ್ಮತ ಹಕ್ಕುಗಳನ್ನು ಅಮೆರಿಕ ಮತ್ತು ಇಸ್ರೇಲ್ ಅಧಿಕೃತವಾಗಿ ಗುರುತಿಸಿ, ಗೌರವಿಸಬೇಕು.
ನಷ್ಟ ಪರಿಹಾರ ಪಾವತಿ: ಈ ಯುದ್ಧದ ಪರಿಣಾಮವಾಗಿ ದೇಶಕ್ಕೆ ಉಂಟಾಗಿರುವ ಅಪಾರ ಹಾನಿಗೆ ತಕ್ಕ ನಷ್ಟ ಪರಿಹಾರವನ್ನು ಪಾವತಿಸಬೇಕು.
ದೃಢವಾದ ಅಂತರರಾಷ್ಟ್ರೀಯ ಖಾತರಿ: ಭವಿಷ್ಯದಲ್ಲಿ ಇರಾನ್ ಮೇಲೆ ಯಾವುದೇ ರೀತಿಯ ಆಕ್ರಮಣ ಅಥವಾ ದಾಳಿಗಳು ನಡೆಯುವುದಿಲ್ಲ ಎಂಬುದಕ್ಕೆ ಬಲವಾದ ಅಂತಾರಾಷ್ಟ್ರೀಯ ಭರವಸೆ (ಗ್ಯಾರಂಟಿ) ನೀಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಒದಿದ್ದೀರಾ? ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ಇದೇ ವೇಳೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು “ಈ ಕೆಲಸವನ್ನು (ಯುದ್ಧವನ್ನು) ಮುಕ್ತಾಯಗೊಳಿಸುವುದಾಗಿ” ಶಪಥ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಎಚ್ಚರಿಕೆ ನೀಡಿರುವ ಇರಾನ್‌ನ ಸಶಸ್ತ್ರ ಪಡೆಗಳು, ತಮ್ಮ ಬಂದರುಗಳ ಮೇಲೆ ದಾಳಿಯಾದರೆ ಮಧ್ಯಪ್ರಾಚ್ಯದಲ್ಲಿರುವ ಇತರ ಎಲ್ಲ ಬಂದರುಗಳು, ಆರ್ಥಿಕ ಕೇಂದ್ರಗಳು ಮತ್ತು ಬ್ಯಾಂಕ್‌ಗಳನ್ನು ಗುರಿಯಾಗಿಸಿ ಹಿಂದೆಂದಿಗಿಂತಲೂ ಭಾರಿ ಪ್ರಮಾಣದ ಪ್ರತಿದಾಳಿ ಮಾಡುವುದಾಗಿ ಬೆದರಿಕೆ ಹಾಕಿವೆ.

ಫೆಬ್ರವರಿ 28ರಂದು ಆರಂಭವಾದ ಈ ಸಂಘರ್ಷವು ಜಾಗತಿಕ ತೈಲ ಪೂರೈಕೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಪ್ರಮುಖ ವಾಣಿಜ್ಯ ಮಾರ್ಗವಾಗಿರುವ ‘ಹಾರ್ಮುಜ್ ಜಲಸಂಧಿ’ಯ ಮೂಲಕ ಹಾದುಹೋಗುವ ಯಾವುದೇ ಹಡಗುಗಳು ತಮ್ಮ ಅನುಮತಿ ಪಡೆಯದಿದ್ದರೆ ದಾಳಿಗೊಳಗಾಗಲಿವೆ ಎಂದು ಇರಾನ್ ಎಚ್ಚರಿಸಿದೆ. ಇದರ ಪರಿಣಾಮವಾಗಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ಗಡಿ ದಾಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....