ಇರಾನ್ ಮೇಲಿನ ಇಸ್ರೇಲ್ ದಾಳಿಯಲ್ಲಿ 78 ಜನ ಮೃತ, 320ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಇರಾನ್ ವಿರುದ್ಧ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ ನಂತರ ಪಶ್ಚಿಮ ಏಷ್ಯಾ ಸಂಘರ್ಷದತ್ತ ಸಾಗಿದೆ. ಇರಾನ್‌ನ ಪರಮಾಣು ಘಟಕ ಮತ್ತು ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿ 78 ಜನ ಮೃತಪಟ್ಟಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಇರಾನ್ ರಾಯಭಾರಿ ಮಾಹಿತಿ ನೀಡಿದ್ದಾರೆ.

ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಇಸ್ರೇಲ್ ಸೇನೆ ತಿಳಿಸಿದ್ದು, ವೈಮಾನಿಕ ದಾಳಿಯಲ್ಲಿ ಇರಾನ್‌ನ ಸೇನಾಪಡೆಗಳ ಮುಖ್ಯಸ್ಥ ಮೊಹಮ್ಮದ್ ಬಘೇರಿ ಹತ್ಯೆಗೀಡಾಗಿದ್ದಾನೆ ಎಂದು ಹೇಳಿದೆ. ಇರಾನ್‌ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳು ಹತರಾಗಿರುವ ಸಾಧ್ಯತೆಯಿದೆ ಎಂದೂ ಸಹ ಇಸ್ರೇಲ್ ಸೇನೆ ಹೇಳಿದೆ.

ಹಾಗೆಯೇ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಟಿವಿ ದೃಢಪಡಿಸಿದೆ. ರೆವಲ್ಯೂಷನರಿ ಗಾರ್ಡ್ಸ್, ಇರಾನ್ ದೇಶದ ಶಕ್ತಿಕೇಂದ್ರ ಎಂದು ಬಿಂಬಿತವಾಗಿದೆ. ಹಾಗಾಗಿ, ಇದನ್ನೇ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸಿದ್ದು, ಇರಾನ್ ದೇಶದ ಸ್ವಾಭಿಮಾನಕ್ಕೆ ದೊಡ್ಡ ಪೆಟ್ಟು ಕೊಟ್ಟಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1979ರ ಇಸ್ಲಾಮಿಕ್ ಕ್ರಾಂತಿಯ ನಂತರ ರೆವಲ್ಯೂಷನರಿ ಗಾರ್ಡ್ಸ್ ಅಸ್ತಿತ್ವಕ್ಕೆ ಬಂದಿತ್ತು. ಇದಾದ ನಂತರ, ಇದು ದೇಶೀಯ ಭದ್ರತಾ ಪಡೆಯಾಗಿ ಮುಂದುವರಿಯಿತು. ಸಿರಿಯಾ, ಲೆಬನಾನ್ ಮತ್ತು ಇರಾಕ್ ನಂತಹ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸಹಾಯ ಮಾಡುವ ಅಂತರರಾಷ್ಟ್ರೀಯ ಪಡೆಯಾಗಿ ಗುರುತಿಸಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ ಮತ್ತು ಅಮೆರಿಕಾದ ದುಷ್ಕೃತ್ಯ: ಜಗತ್ತನ್ನು ಮೂರನೇ ಮಹಾಯುದ್ಧದತ್ತ ದೂಡುವ ಅಪಾಯ

ಇರಾನ್-ಇಸ್ರೇಲ್ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಇಸ್ರೇಲ್ ಮೇಲೆ ಇರಾನ್ ಪ್ರತೀಕಾರದ ದಾಳಿ ನಡೆಸಲು ಸಿದ್ಧವಾಗಿದೆ. ಇದರಿಂದ ಪಶ್ಚಿಮ ಏಷ್ಯಾ ಯುದ್ಧದ ಅಂಚಿನಲ್ಲಿದೆ ಎಂಬ ಆತಂಕ ಮೂಡಿದೆ. ಪ್ರಮುಖ ಇಸ್ರೇಲಿ ನಗರಗಳ ಮೇಲೆ ಇರಾನ್ ನಡೆಸಿದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇರಾನ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿದ ನಂತರ ವಿಶ್ವದಾದ್ಯಂತ ಇರುವ ತನ್ನ ಎಲ್ಲ ರಾಯಭಾರ ಕಚೇರಿಗಳನ್ನು ಇಸ್ರೇಲ್ ಮುಚ್ಚುತ್ತಿದೆ.

ಜಗತ್ತಿನ ವಿವಿಧ ರಾಷ್ಟ್ರಗಳು ತನ್ನ ನಾಗರಿಕರು ಜಾಗರೂಕರಾಗಿರಬೇಕು, ಯಹೂದಿ ಅಥವಾ ಇಸ್ರೇಲ್ ನ ಯಾವುದೇ ಲಾಂಛವನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಬಾರದು ಎಂದು ರಾಯಬಾರ ಕಚೇರಿಯ ವೆಬ್ ಸೈಟ್ ಗಳಲ್ಲಿ ಶುಕ್ರವಾರ ಹೇಳಲಾಗಿದೆ.

ಇಸ್ರೇಲ್‌ ದಾಳಿಗೆ ಪ್ರತ್ಯುತ್ತರವಾಗಿ ನಾವು ‘ಕಠಿಣ ಶಿಕ್ಷೆ’ಗೆ ಗುರಿಪಡಿಸುತ್ತೇವೆ ಎಂದು ಇರಾನ್‌ನ ಪರಮೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಎಚ್ಚರಿಸಿದ್ದಾರೆ. ಈ ಎಲ್ಲ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಅಶಾಂತಿ ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...