ಭಾರತದ ಕಳಪೆ ಗುಣಮಟ್ಟದ ಕೆಮ್ಮಿನ ಸಿರಪ್‌ಗಳ ಬಗ್ಗೆ ವಿಶ್ವಕ್ಕೆ ಎಚ್ಚರಿಕೆ ನೀಡಿದ WHO

Date:

ಭಾರತದ ಕಳಪೆ ಗುಣಮಟ್ಟದ ಕೆಮ್ಮಿನ ಸಿರಪ್‌ಗಳಾದ ಕೋಲ್‌ಡ್ರಿಫ್‌, ರಿಸ್ಪಿಫ್ರೆಶ್ ಟಿಆರ್‌ ಮತ್ತು ರೀಲೈಫ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ(WHO) ವಿಶ್ವಕ್ಕೆ ಎಚ್ಚರಿಕೆ ನೀಡಿದೆ. ಹಾಗೆಯೇ ಯಾವುದೇ ದೇಶದಲ್ಲಿ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳು ಈ ಮೂರು ಸಿರಪ್‌ಗಳನ್ನು ಕಂಡರೆ ಅದರಿಂದಾಗಿ ಆದ ಕೆಟ್ಟ ಪರಿಣಾಮಗಳ ಬಗ್ಗೆ ತಕ್ಷಣವೇ ತಿಳಿಸುವಂತೆ ಹೇಳಿದೆ.

ಮಧ್ಯಪ್ರದೇಶದಲ್ಲಿ ಕೋಲ್‌ಡ್ರಿಫ್‌ ಕೆಮ್ಮಿನ ಸಿರಪ್‌ ಸೇವಿಸಿದ ಬಳಿಕ ಕನಿಷ್ಠ 22 ಮಕ್ಕಳು ಮೃತಪಟ್ಟಿದ್ದಾರೆ. ಹೆಚ್ಚಾಗಿ ಐದು ವರ್ಷದೊಳಗಿನ ಮಕ್ಕಳು ಹೆಚ್ಚಾಗಿ ಮೃತಪಟ್ಟಿದ್ದು, ಮೂತ್ರಪಿಂಡ ವೈಫಲ್ಯಗೊಂಡಿದೆ ಎಂದು ಹೇಳಲಾಗಿದೆ. ಇದಲ್ಲದೆ ರಾಜಸ್ಥಾನದಲ್ಲಿ ಕನಿಷ್ಠ ಮೂರು ಮಕ್ಕಳು ಇದೇ ಕೆಮ್ಮಿನ ಸಿರಪ್ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಡಿಕಲ್‌ ಮಾಫಿಯಾಗೆ ಅಮಾಯಕ ಮಕ್ಕಳು ಬಲಿ; ಸರ್ಕಾರಗಳೇ ಜವಾಬ್ದಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಾದ ಬಳಿಕವೇ ದೇಶದಲ್ಲಿ ಕೋಲ್‌ಡ್ರಿಫ್, ರಿಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ ಸಿರಪ್‌ಗಳನ್ನು ನಿಷೇಧಿಸಲಾಗಿದೆ. ಈ ಮೂರು ಸಿರಪ್‌ಗಳಲ್ಲಿ ಯಾವುದನ್ನೂ ರಫ್ತು ಮಾಡಲಾಗಿಲ್ಲ. ಆದರೂ ನಕಲಿ ಅಥವಾ ಹೆಸರು ಬದಲಾಯಿಸಿ ಇದೇ ಸಿರಪ್‌ನ ಕಾನೂನುಬಾಹಿರ ವ್ಯಾಪಾರ ನಡೆಯುವ ಸಾಧ್ಯತೆಯಿದೆ ಎಂದು ಈ ಹಿಂದೆಯೇ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.

ಸಾಮಾನ್ಯ ಶೀತ, ಜ್ವರ ಅಥವಾ ಕೆಮ್ಮು ನಿವಾರಣೆಗಾಗಿ ಈ ಸಿರಪ್ ಅನ್ನು ಬಳಸಲಾಗುತ್ತದೆ. ಆದರೆ ಈ ಸಿರಪ್‌ಗಳಲ್ಲಿ ಡೈಥಿಲೀನ್ ಗ್ಲೈಕಾಲ್ (DEG) ಎಂಬ ಅಪಾಯಕಾರಿ ರಾಸಾಯನಿಕ ಇರುವುದು ಕೇಂದ್ರ ಔಷಧ ನಿಯಂತ್ರಕ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್(CDSCO) ಪರೀಕ್ಷಿಸಿದಾಗ ಬಹಿರಂಗವಾಗಿದೆ. ಸಣ್ಣ ಪ್ರಮಾಣದಲ್ಲಿ ಈ ರಾಸಾಯನಿಕ ದೇಹಕ್ಕೆ ಸೇರಿದರೂ ಮೂತ್ರಪಿಂಡಗಳು ಮತ್ತು ಯಕೃತ್ತಿಗೆ ಹಾನಿಯಾಗುತ್ತದೆ, ಸಾವೂ ಸಂಭವಿಸಬಹುದು ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...