ಬಾಂಗ್ಲಾದೇಶ ಹಿಂಸಾಚಾರ: ಭಾರತದ ವಿರುದ್ಧ ಘೋಷಣೆಗಳು ಕೇಳಿಬರುತ್ತಿರುವುದೇಕೆ?

Date:

2024ರಿಂದ ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ತೀರಾ ಹದಗೆಡುತ್ತಿದೆ. ಬಾಂಗ್ಲಾದೇಶದಲ್ಲಿ ಭಾರತದ ವಿರುದ್ಧ ಘೋಷಣೆಗಳು ಕೇಳಿಬರುತ್ತಿವೆ. ಭಾರತೀಯ ಯುವಕನ ಹತ್ಯೆಯೂ ನಡೆದಿದೆ. ಜತೆಗೆ 2024ರಂತೆ ಈಗ ಮತ್ತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಭಾರತ ಮತ್ತು ಬಾಂಗ್ಲಾದೇಶದ ಸಂಬಂಧವು ಬಲವಾದ ರಾಜತಾಂತ್ರಿಕ ಅಡಿಪಾಯವನ್ನು ಹೊಂದಿರುವಂತದ್ದು. 1971ರಿಂದ ಹಿಡಿದು ಕಳೆದ ಎರಡು ವರ್ಷಗಳ ಹಿಂದಿನವರೆಗೂ ಉಭಯ ದೇಶಗಳ ನಡುವಿನ ಸಂಬಂಧ ಗಟ್ಟಿಯಾಗಿತ್ತು. ಬಾಂಗ್ಲಾದೇಶವನ್ನು ಪ್ರತ್ಯೇಕ ರಾಷ್ಟ್ರವೆಂದು ಮಾನ್ಯ ಮಾಡಿದ ವಿಶ್ವದ ಮೊದಲ ದೇಶಗಳಲ್ಲಿ ಭಾರತವೂ ಒಂದು. ಬಾಂಗ್ಲಾದೇಶವನ್ನು ಪಾಕಿಸ್ತಾನದಿಂದ ವಿಭಜಿಸುವ ಸ್ವಾತಂತ್ರ್ಯ ಹೋರಾಟಕ್ಕೂ ಭಾರತ ಸಂಪೂರ್ಣ ಬೆಂಬಲ ನೀಡಿತ್ತು.

2009ರಿಂದ 2024ರವರೆಗಿನ 15 ವರ್ಷಗಳಲ್ಲಿ ವ್ಯಾಪಾರ, ಇಂಧನ, ಮೂಲಸೌಕರ್ಯ ಕ್ಷೇತ್ರಗಳಲ್ಲಿ ಉಭಯ ದೇಶಗಳು ಅಭೂತಪೂರ್ವ ಸಹಕಾರವನ್ನು ನೀಡಿದೆ. ಈ ಹಂತವನ್ನು ಎರಡೂ ದೇಶಗಳು ‘ಸುವರ್ಣ ಕಾಲ’ ಎಂದು ಕರೆದಿದೆ. ಆದರೆ 2024ರಿಂದ ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ತೀರಾ ಹದಗೆಡುತ್ತಿದೆ. ಬಾಂಗ್ಲಾದೇಶದಲ್ಲಿ ಭಾರತದ ವಿರುದ್ಧ ಘೋಷಣೆಗಳು ಕೇಳಿಬರುತ್ತಿವೆ. ಇಸ್ಲಾಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಭಾರತೀಯ ಯುವಕ ದೀಪು ಚಂದ್ರ ದಾಸ್ ಎಂಬಾತನಿಗೆ ಥಳಿಸಿ ಹತ್ಯೆ ಮಾಡಲಾಗಿದೆ. ಜತೆಗೆ 2024ರಂತೆ ಈಗ ಮತ್ತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಇದನ್ನು ಓದಿದ್ದೀರಾ? ಬಾಂಗ್ಲಾದಲ್ಲಿ ಹಿಂಸಾಚಾರ; ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ರಲ್ಲಿ ಬಾಂಗ್ಲಾದೇಶದಲ್ಲಿ ಕಂಡುಬಂದ ವಿದ್ಯಾರ್ಥಿ ಪ್ರತಿಭಟನೆಗಳು ದೇಶದ ರಾಜಕೀಯ ಭೂಪಟವನ್ನೇ ಬದಲಾಯಿಸಿದ್ದವು. 2024ರ ಜೂನ್‌ನಲ್ಲಿ ಬಾಂಗ್ಲಾದೇಶದ ಉಚ್ಚ ನ್ಯಾಯಾಲಯವು ಸರ್ಕಾರಿ ಉದ್ಯೋಗಗಳಲ್ಲಿ 1971ರ ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರಿಗೆ ಶೇ.30ರಷ್ಟು ಮೀಸಲಾತಿಯನ್ನು ಮರುಸ್ಥಾಪಿಸಿತ್ತು. ಆದರೆ ಇದನ್ನು ವಿರೋಧಿಸಿ ವಿದ್ಯಾರ್ಥಿಗಳು ಬೀದಿಗಿಳಿದಿದ್ದರು. ಈ ಪ್ರತಿಭಟನೆಯು ಜುಲೈ 15ರಂದು ಹಿಂಸಾಚಾರಕ್ಕೆ ತಿರುಗಿದ್ದು, ಅಂದಿನ ಪ್ರಧಾನಿ ಶೇಖ್ ಹಸೀನಾ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಶೇಖ್ ಹಸೀನಾ ಪ್ರತಿಭಟನಾಕಾರರನ್ನು ದೇಶದ್ರೋಹಿಗಳೆಂದು ಕರೆದಿದ್ದು, ಆಡಳಿತಾರೂಢ ಅವಾಮಿ ಲೀಗ್‌ನ ವಿದ್ಯಾರ್ಥಿ ಘಟಕ (ಛಾತ್ರ ಲೀಗ್) ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿತ್ತು. ಇವೆಲ್ಲವೂ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಿತ್ತು. ಈ ಹಿಂಸಾಚಾರದಲ್ಲಿ ಜುಲೈ ಮತ್ತು ಆಗಸ್ಟ್ ಅವಧಿಯಲ್ಲಿ ಕನಿಷ್ಠ 650ರಿಂದ 1,400 ಜನರು ಮೃತಪಟ್ಟಿದ್ದರು.

ತೀವ್ರ ಪ್ರತಿಭಟನೆಗೆ ಮಣಿದ ಪ್ರಧಾನಿ ಶೇಖ್ ಹಸೀನಾ 2024ರ ಆಗಸ್ಟ್ 5ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನಗೊಂಡಿದ್ದಾರೆ. ಈ ಮೂಲಕ ಹಸೀನಾರ 15 ವರ್ಷಗಳ ಆಡಳಿತ ಅಂತ್ಯವಾಯಿತು. ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಯಿತು. ಪ್ರಸ್ತುತ ಅವರೇ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆದರೆ ನಿರೀಕ್ಷಿಸಿದಂತೆ ಸುಧಾರಣೆಗಳು ಆಗಿಲ್ಲ ಎಂಬ ಆಕ್ರೋಶ ಈಗ ವಿದ್ಯಾರ್ಥಿಗಳು, ಯುವಜನರದ್ದು. ಚುನಾವಣೆಗಳ ವಿಳಂಬವು ಹೊಸದಾಗಿ ಜನರಲ್ಲಿ ಅಸಮಾಧಾನ ಸೃಷ್ಟಿಸಿದೆ. ಸದ್ಯ ಫೆಬ್ರವರಿ 16ರಂದು ಚುನಾವಣೆ ನಡೆಸುವ ಬಗ್ಗೆ ಈಗಾಗಲೇ ಬಾಂಗ್ಲಾದೇಶ ಸರ್ಕಾರ ಘೋಷಿಸಿದೆ. ಆದರೆ ಇವೆಲ್ಲವುದಕ್ಕೂ ಮುಖ್ಯವಾಗಿ 2024ರಿಂದಲೂ ಆಂದೋಲನದ ಪ್ರಮುಖ ಯುವ ನಾಯಕರಾಗಿದ್ದ ಶರೀಫ್ ಓಸ್ಮಾನ್ ಹಾದಿಯ ಹತ್ಯೆ ಮತ್ತೆ ಉರಿಯುವ ಬೆಂಕಿಯ ಮೇಲೆ ತುಪ್ಪ ಸುರಿದಂತಾಗಿದೆ.

ಶರೀಫ್ ಓಸ್ಮಾನ್ ಹಾದಿಯ ಹತ್ಯೆಯ ವಿರುದ್ಧ ಆಕ್ರೋಶ

2025ರ ಡಿಸೆಂಬರ್ 12ರಂದು ಬಾಂಗ್ಲಾದೇಶದ ಯುವ ನಾಯಕ ಮತ್ತು ‘ಇಂಕಿಲಾಬ್ ಮಂಚ’ ಸಂಘಟನೆಯ ಸಂಚಾಲಕರಾಗಿದ್ದ ಶರೀಫ್ ಓಸ್ಮಾನ್ ಹಾದಿ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಢಾಕಾದಲ್ಲಿ ಚಿಕಿತ್ಸೆ ಪಡೆಯುತ್ತದ್ದ ಶರೀಫ್ ಆರೋಗ್ಯ ಸ್ಥಿತಿ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಹಾದಿ ಗುರುವಾರ(ಡಿ.18) ಸಾವನ್ನಪ್ಪಿದ್ದಾರೆ.

ಹಾದಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಾಂಗ್ಲಾದೇಶದಾದ್ಯಂತ ತೀವ್ರ ಹಿಂಸಾಚಾರ, ಪ್ರತಿಭಟನೆಗಳು ಭುಗಿಲೆದ್ದಿದೆ. ಪ್ರತಿಭಟನಾಕಾರರು ಪ್ರಮುಖ ದಿನಪತ್ರಿಕೆಗಳ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ, ಧ್ವಂಸ ಮಾಡಿದ್ದಾರೆ. ಬಾಂಗ್ಲಾದೇಶದ ಸ್ಥಾಪಕ ಪಿತಾಮಹ, ಮೊದಲ ಅಧ್ಯಕ್ಷರು, ಸ್ವಾತಂತ್ರ್ಯ ಹೋರಾಟಗಾರರಾದ ಶೇಖ್ ಮುಜಿಬುರ್ ರೆಹಮಾನ್ ನಿವಾಸಕ್ಕೂ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಈ ನಡುವೆ ಭಾರತದ ವಿರುದ್ದವೂ ಘೋಷಣೆಗಳು ಕೇಳಿಬಂದಿದೆ.

ಬಾಂಗ್ಲಾದೇಶದಲ್ಲಿ ಭಾರತದ ವಿರುದ್ಧ ಆಕ್ರೋಶವೇಕೆ?

ಹಲವು ವರ್ಷಗಳಿಂದ ಭಾರತದೊಂದಿಗೆ ಉತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದ್ದ ದೇಶ ಬಾಂಗ್ಲಾದೇಶ. ಆದರೆ ಶೇಖ್ ಹಸೀನಾ ಭಾರತಕ್ಕೆ ಪಲಾಯನಗೊಂಡ ಬಳಿಕದಿಂದ ಉಭಯ ದೇಶಗಳ ಸಂಬಂಧ ಹದಗೆಟ್ಟಿದೆ. ಇತ್ತೀಚೆಗೆ ನಡೆದ ಶರೀಫ್ ಓಸ್ಮಾನ್ ಹಾದಿ ಹತ್ಯೆ ಮಾಡಿದವರಿಗೂ ಭಾರತ ಆಶ್ರಯ ನೀಡುತ್ತಿದೆ ಎಂಬುದು ಪ್ರತಿಭಟನಾಕಾರರ ಆರೋಪ.

ಮುಂದಿನ ಚುನಾವಣೆಯ ಸ್ವತಂತ್ರ ಅಭ್ಯರ್ಥಿಯೂ ಆದ ಯುವ ನಾಯಕ ಶರೀಫ್ ಮೇಲೆ ದಾಳಿ ನಡೆಸಿದ ಅವಾಮಿ ಲೀಗ್‌ನೊಂದಿಗೆ ಸಂಪರ್ಕ ಹೊಂದಿರುವ ದಾಳಿಕೋರರೂ ಭಾರತಕ್ಕೆ ಪಲಾಯನಗೊಂಡಿದ್ದಾರೆ, ಭಾರತ ಅವರಿಗೆ ಆಶ್ರಯ ನೀಡಿದೆ ಎಂಬುದು ಪ್ರತಿಭಟನಾಕಾರರ ಆರೋಪ ಮತ್ತು ಬಾಂಗ್ಲಾದೇಶದ ಮಾಧ್ಯಮ ಸಂಸ್ಥೆ ಢಾಕಾ ಟ್ರಿಬ್ಯೂನ್ ಕೂಡಾ ಹೀಗೆಯೇ ವರದಿ ಮಾಡಿದೆ. ಆದರೆ ಭಾರತ ಮಾತ್ರ ಈ ಆರೋಪವನ್ನು ಅಲ್ಲಗಳೆದಿದೆ. ಈ ಆರೋಪಕ್ಕೆ ಯಾವುದೇ ಪುರಾವೆಯನ್ನು ಢಾಕಾ ಹಂಚಿಕೊಂಡಿಲ್ಲ ಎಂದು ಭಾರತ ಹೇಳಿದೆ.

ಇದನ್ನು ಓದಿದ್ದೀರಾ? ಬಾಂಗ್ಲಾದೇಶ ಹಿಂಸಾಚಾರ | ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ತವರೂರಿಗೆ ವಾಪಸ್

ಆದರೆ ಭಾರತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮುಂದೆ ಉಗ್ರ ಪ್ರತಿಭಟನೆಗಳು ನಡೆದಿವೆ. ಭಾರತದ ಪರವಾಗಿ ಸುದ್ದಿ ಪ್ರಕಟಿಸಿದೆ ಎಂಬ ಕಾರಣಕ್ಕೆ ಪ್ರಥಮ್ ಆಲೋ ಮತ್ತು ಡೈಲಿ ಸ್ಟಾರ್ ಎಂಬ ಸುದ್ದಿ ಸಂಸ್ಥೆಗಳ ಕಚೇರಿಗಳ ಮೇಲೆಯೂ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚಿದ್ದಾರೆ.

ಇದರ ಜತೆಗೆ ಈಗಾಗಲೇ ಅಧಿಕಾರದಿಂದ ಪದಚ್ಯುತರಾದ, ಗಲ್ಲು ಶಿಕ್ಷೆಗೆ ಗುರಿಯಾಗಿರುವ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ಭಾರತ ಆಶ್ರಯ ನೀಡಿರುವುದೂ ಬಾಂಗ್ಲಾದೇಶದ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಹಸೀನಾ ಅವರನ್ನು ಬಾಂಗ್ಲಾದೇಶಕ್ಕೆ ಹಸ್ತಾಂತರಿಸಬೇಕು ಎಂದು ಪ್ರತಿಭಟನಾಕಾರರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ. ಇಷ್ಟು ಮಾತ್ರವಲ್ಲದೆ ಬಾಂಗ್ಲಾದೇಶದ ಆಂತರಿಕ ರಾಜಕೀಯದಲ್ಲಿ ಭಾರತ ಮಧ್ಯಪ್ರವೇಶಿಸುತ್ತಿದೆ ಎಂಬ ಭಾವನೆ ಬಾಂಗ್ಲಾದೇಶದ ಜನರಿಗೆ ಹೆಚ್ಚಾಗಿದೆ. ಈಗಾಗಲೇ ಬಾಂಗ್ಲಾದೇಶದ ಕೆಲವು ರಾಜಕೀಯ ಪಕ್ಷಗಳು ಮತ್ತು ಸಂಘಟನೆಗಳು ‘ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ’ (Boycott Indian Products) ಎಂಬ ಅಭಿಯಾನವನ್ನು ನಡೆಸುತ್ತಿವೆ. ಸದ್ಯ ಶರೀಫ್ ಹತ್ಯೆಯ ಆರೋಪಿಗಳಿಗೂ ಭಾರತ ಆಶ್ರಯ ನೀಡಿದೆ ಎಂಬ ಆರೋಪವು ಬಾಂಗ್ಲಾದೇಶದ ಯುವಜನರಲ್ಲಿ ಭಾರತದ ಮೇಲೆ ಆಕ್ರೋಶ ಇನ್ನಷ್ಟೂ ಹೆಚ್ಚಾಗಲು ಕಾರಣವಾಗಿದೆ.

ಬಾಂಗ್ಲಾದೇಶ ಜನತಾಂತ್ರಿಕ ಪುನಶ್ಚೇತನಕ್ಕೆ ತಯಾರಾಗುತ್ತಿದ್ದರೂ, ಪ್ರಸ್ತುತ ಅಶಾಂತಿಯು ದೇಶದ ಭವಿಷ್ಯದ ಬಗ್ಗೆ ಆತಂಕ ಹುಟ್ಟಿಸಿದೆ. ಸ್ಥಿರತೆಗೆ ಮರಳಬೇಕಾದರೆ ಸಾಕಷ್ಟು ಸವಾಲುಗಳು ಎದುರಾಗಿವೆ. ಪ್ರಸ್ತುತ ಸರ್ಕಾರ ಪ್ರತಿಭಟನಾಕಾರರನ್ನು ಹತ್ತಿಕ್ಕಲು, ಜನರ ಆಕ್ರೋಶವನ್ನು ಶಮನಗೊಳಿಸಲು ಪ್ರಯತ್ನಿಸುತ್ತಿದೆ. ಆದರೆ ಹಿಂಸಾಚಾರಕ್ಕೆ ಅಂತ್ಯಹಾಡಲು ಸಾಧ್ಯವಾಗುತ್ತಿಲ್ಲ. ಸದ್ಯ ಪರಿಸ್ಥಿತಿ ಬಿಗಾಡಯಿಸುತ್ತಿದ್ದು ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬ ಆಂತಕವಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...