ನಮ್ಮ ಮೇಲೆ ದಾಳಿ ಮಾಡಿದರೆ ಅಣ್ವಸ್ತ್ರ ಪ್ರಯೋಗಿಸುತ್ತೇವೆ: ಭಾರತಕ್ಕೆ ಪಾಕ್‌ ರಾಯಭಾರಿ ಎಚ್ಚರಿಕೆ

Date:

ಪೆಹಲ್ಗಾಮ್‌ ಉಗ್ರರ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ವ ವಾತಾವರಣ ನಿರ್ಮಾಣವಾಗಿರುವ ಸಂದರ್ಭದಲ್ಲೆ ಪಾಕ್‌ನ ರಾಯಭಾರಿಯೊಬ್ಬರು ಭಾರತದ ಮೇಲೆ ಅಣ್ವಸ್ತ್ರ ದಾಳಿ ಪ್ರಯೋಗಿಸುವುದಾಗಿ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.

ಮಾಸ್ಕೋದಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ ರಷ್ಯಾದ ಪಾಕ್‌ ರಾಯಭಾರಿಯಾಗಿರುವ ಮೊಹಮ್ಮದ್‌ ಖಾಲೀದ್‌ ಜಮಾಲಿ, ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುತ್ತವೆ ಎಂದು ಕೆಲವೊಂದು ಸೋರಿಕೆಯಾದ ದಾಖಲೆಗಳು ಹೇಳುತ್ತವೆ. ಭಾರತ ದಾಳಿ ಮಾಡುವುದು ಸನ್ನಿಹಿತವಾಗಿದೆ. ಉನ್ಮಾದದಲ್ಲಿರುವ ಭಾರತದ ಮಾಧ್ಯಮಗಳ ವರದಿ ಹಾಗೂ ಬೇಜವಾಬ್ದಾರಿ ಹೇಳಿಕೆಗಳು ನಮ್ಮನ್ನು ಈ ರೀತಿ ಹೇಳಿಕೆ ನೀಡುವಂತೆ ಒತ್ತಾಯಿಸಿವೆ. ಪಾಕಿಸ್ತಾನದ ಕೆಲವು ಪ್ರದೇಶದ ಮೇಲೆ ದಾಳಿ ನಡೆಯುವುದಾಗಿ ಕೆಲವೊಂದು ದಾಖಲೆಗಳು ಹೇಳುತ್ತವೆ. ಹಾಗಾಗಿ ನಮ್ಮ ಮೇಲೆ ದಾಳಿ ನಡೆಯುವುದು ಸನ್ನಿಹಿತವಾಗಿದೆ ಎಂದು ತಿಳಿಸಿದ್ದಾರೆ.

ಭಾರತ ಹಾಗೂ ಪಾಕಿಸ್ತಾನದ ವಿಷಯ ಬಂದರೆ ನಾವು ಸಂಖ್ಯಾಬಲದ ಮೇಲೆ ಚರ್ಚೆಯಲ್ಲಿ ಭಾಗಿಯಾಗಲು ಬಯಸುವುದಿಲ್ಲ. ಆದರೆ ನಾವು ಸಾಂಪ್ರದಾಯಿಕ ಹಾಗೂ ಅಣ್ವಸ್ತ್ರ ಒಳಗೊಂಡು ಎಲ್ಲ ರೀತಿಯ ಶಕ್ತಿಯನ್ನು ಬಳಸುತ್ತೇವೆ. ಪಾಕ್‌ ಜನರ ಬೆಂಬಲದೊಂದಿಗೆ ನಮ್ಮ ಸೇನೆ ಎಲ್ಲ ರೀತಿಯ ಶಕ್ತಿಯನ್ನು ಬಳಸುತ್ತದೆ ಎಂದು ಎಚ್ಚರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ದಾಳಿ ಮಾಡಿದ ನಂತರ ಪಾಕಿಸ್ತಾನವು ಭಾರತದ ಪ್ರತೀಕಾರದ ಭಯದಲ್ಲಿದೆ. ಇದಕ್ಕೂ ಮೊದಲು, ಪಾಕಿಸ್ತಾನ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆಯೊಡ್ಡಿದ್ದರು. ಘೋರಿ, ಶಾಹೀನ್ ಮತ್ತು ಘಜ್ನಿ ಕ್ಷಿಪಣಿಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು ಒಳಗೊಂಡಂತೆ ಪಾಕಿಸ್ತಾನದ ಶಸ್ತ್ರಾಗಾರವನ್ನು ಭಾರತಕ್ಕಾಗಿ ಮಾತ್ರ ಇಡಲಾಗಿದೆ ಎಂದು ಎಚ್ಚರಿಸಿದ್ದರು.

ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ಮೂಲಕ ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ಭಾರತ ಧೈರ್ಯ ಮಾಡಿದರೆ, ಅದು ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು ಎಂದು ಅಬ್ಬಾಸಿ ಹೇಳಿದ್ದರು.

ಪಾಕಿಸ್ತಾನದ ಮತ್ತೊಬ್ಬ ಸಚಿವ ಅತಾವುಲ್ಲಾ ತರಾರ್, ತಮ್ಮ ದೇಶಕ್ಕೆ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ದೊರಕಿದ್ದು ಮುಂದಿನ 24 ರಿಂದ 36 ಗಂಟೆಗಳಲ್ಲಿ ಭಾರತ ಮಿಲಿಟರಿ ದಾಳಿ ನಡೆಸಬಹುದು ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...