ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಶೀಘ್ರ?

Date:

ಭಾರತದ ವಿವಿಧ ಬ್ಯಾಂಕ್‌ಗಳಿಗೆ ವಂಚಿಸಿ ದೇಶದಿಂದ ಪರಾರಿಯಾಗಿ, ಬ್ರಿಟನ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಸೇರಿದಂತೆ ಹಲವು ವಂಚಕರನ್ನು ಬ್ರಿಟನ್‌ ಶೀಘ್ರವೇ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಗಳಿವೆ. ಬ್ರಿಟನ್‌ ಅಧಿಕಾರಿಗಳ ತಂಡವು ದೆಹಲಿಯಲ್ಲಿರುವ ತಿಹಾರ್ ಜೈಲಿಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಗಡಿಪಾರು ಪ್ರಕ್ರಿಯೆಗಳು ಅರಂಭವಾಗಿವೆ ಎಂಬದುನ್ನು ಸೂಚಿಸಿವೆ.

ದೇಶದ ವಿವಿಧ ಬ್ಯಾಂಕುಗಳಲ್ಲಿ ಸಾವಿರಾರು ಕೋಟಿ ರೂಪಾಯಿ ಸಾಲ ಮಾಡಿ, ಮರುಪಾವತಿ ಮಾಡದೆ ಹಲವಾರು ಉದ್ಯಮಿಗಳು ಭಾರತದಿಂದ ಪರಾರಿಯಾಗಿದ್ದಾರೆ. ಅವರಲ್ಲಿ, ವಿಜಯ್ ಮಲ್ಯ ಮತ್ತು ನೀರವ್ ಮೋದಿ ಲಂಡನ್‌ನಲ್ಲಿದ್ದಾರೆ. ಅವರನ್ನು ಭಾರತಕ್ಕೆ ಗಡಿಪಾರು ಮಾಡುವಂತೆ ಭಾರತ ಸರ್ಕಾರವು ಲಂಡನ್ ಸರ್ಕಾರಕ್ಕೆ ಮನವಿ ಮಾಡಿದೆ. ಆದಾಗ್ಯೂ, ಗಡಿಪಾರು ಮಾಡಲಾಗುವ ವಂಚಕ ಉದ್ಯಮಿಗಳನ್ನು ದೆಹಲಿಯ ತಿಹಾರ್‌ ಜೈಲಿನಲ್ಲಿ ಇರಿಸಲಾಗುತ್ತದೆ. ಅಲ್ಲಿನ ನ್ಯಾಯಾಲಯವೂ ಗಡಿಪಾರಿಗೆ ಸಮ್ಮತಿ ನೀಡಿದೆ.

ಆದರೆ, ಗಡಿಪಾರಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವ ಮಲ್ಯ ಮತ್ತು ಮೋದಿ, ಭಾರತದ ಜೈಲುಗಳ ವ್ಯವಸ್ಥೆ ಸರಿಯಿಲ್ಲ. ಮೂಲ ಸೌಕರ್ಯಗಳು ಉತ್ತಮವಾಗಿಲ್ಲ. ಭಾರತದ ಜೈಲಿನಲ್ಲಿದ್ದರೆ ರೋಗಗಳಿಗೆ ತುತ್ತಾಗಿ ಸಾವನ್ನಪ್ಪುವ ಸಾಧ್ಯತೆಗಳಿವೆ ಎಂಬ ಕಾರಣಗಳನ್ನು ಉಲ್ಲೇಖಿಸಿ, ಅಲ್ಲಿನ ನ್ಯಾಯಾಲಯಗಳ ಮೊರೆ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ, ಲಂಡನ್‌ನ ತಜ್ಞರು ಮತ್ತು ಅಧಿಕಾರಿಗಳ ತಂಡವು ದೆಹಲಿಗೆ ಬಂದಿದ್ದು, ಆರೋಪಿಗಳನ್ನು ಇರಿಸಲಾಗುವ ಜೈಲಿನ ಪರಿಸ್ಥಿತಿ, ಭದ್ರತೆ ಮತ್ತು ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...