ನೀವು 19 ಸಾವಿರ ಮಕ್ಕಳು, 53 ಸಾವಿರ ನಾಗರಿಕರನ್ನು ಕೊಂದಿದ್ದೀರಿ: ಸಂಸತ್ತಿನಲ್ಲಿ ಇಸ್ರೇಲ್ ಸಂಸದನ ವಾಗ್ದಾಳಿ

Date:

ಗಾಜಾದಲ್ಲಿ ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ಖಂಡಿಸಿದ ಇಸ್ರೇಲ್ ಸಂಸದ ಅಯ್ಮಾನ್ ಒಡೆಹ್ ಅವರನ್ನು ಬಲವಂತವಾಗಿ ಸಂಸತ್ತಿನ ವೇದಿಕೆಯಿಂದ ಹೊರಹಾಕಿದ ಘಟನೆ ವರದಿಯಾಗಿದೆ.

`ಸುಮಾರು ಒಂದೂವರೆ ವರ್ಷದ ಬಳಿಕ ನೀವು 19,ಸಾವಿರ ಮಕ್ಕಳನ್ನು, 53 ಸಾವಿರ ನಾಗರಿಕರನ್ನು ಕೊಂದಿದ್ದೀರಿ. ಎಲ್ಲ ವಿಶ್ವವಿದ್ಯಾಲಯಗಳು, ಆಸ್ಪತ್ರೆಗಳನ್ನು ನಾಶಗೊಳಿಸಿದ್ದೀರಿ. ರಾಜಕೀಯ ಗೆಲುವು ಇಲ್ಲ ಎಂದು ನೀವು ಭಾವಿಸಿದ್ದೀರಿ. ಆದ್ದರಿಂದಲೇ ಹುಚ್ಚರಂತೆ ವರ್ತಿಸುತ್ತಿದ್ದೀರಿ’ ಎಂದು ಸಂಸತ್ತಿನ ವೇದಿಕೆಯಲ್ಲಿ ಒಡೆಹ್ ನೀಡಿದ ಹೇಳಿಕೆ ಸಂಸತ್ತಿನಲ್ಲಿ ಗದ್ದಲ, ಗೊಂದಲಕ್ಕೆ ಕಾರಣವಾಯಿತು.

ತಕ್ಷಣ ಅವರನ್ನು ಬಲವಂತವಾಗಿ ಹೊರಗೆ ಹಾಕಲಾಗಿದೆ. ಹೊರಗೆ ಕರೆದೊಯ್ಯುವಾಗಲೂ ಅವರು ಸರ್ಕಾರದ ವಿರುದ್ಧದ ವಾಗ್ದಾಳಿ ಮುಂದುವರಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲೆ ಕೃತ್ಯಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಗಂಭೀರ ಮತ್ತು ಆಘಾತಕಾರಿ!

ಏತನ್ಮಧ್ಯೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಗಾಜಾದಾದ್ಯಂತ ಇಸ್ರೇಲಿ ಪಡೆ ನಟೆಸಿದ ದಾಳಿಗಳಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ಮೃತರಲ್ಲಿ ದಕ್ಷಿಣ ನಗರ ಖಾನ್ ಯೂನಿಸ್‌ನಲ್ಲಿ 10 ಜನರು, ಮಧ್ಯ ಪಟ್ಟಣವಾದ ದೇರ್ ಅಲ್-ಬಲಾದಲ್ಲಿ ನಾಲ್ವರು ಮತ್ತು ಉತ್ತರದ ಜಬಾಲಿಯಾ ನಿರಾಶ್ರಿತರ ಶಿಬಿರದಲ್ಲಿ 9 ಜನರು ಸೇರಿದ್ದಾರೆ.

ಇಸ್ರೇಲ್ ಸುಮಾರು ಮೂರು ತಿಂಗಳಿನಿಂದ ಗಾಜಾಗೆ ಮಾನವೀಯ ನೆರವು ನೀಡುವುದನ್ನು ನಿರ್ಬಂಧಿಸಿದೆ. ಇದು ಅಂತಾರಾಷ್ಟ್ರೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಗಾಜಾದ ಜನಸಂಖ್ಯೆಯ ಬಹುಪಾಲು 20 ಲಕ್ಷಕ್ಕಿಂತಲೂ ಹೆಚ್ಚು ಜನರು ಈಗ ಕ್ಷಾಮದ ಅಪಾಯದಲ್ಲಿದ್ದಾರೆ ಎಂದು ತಜ್ಞರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...